
ಸಬರಮತಿ(ಅ.31): ಒಂದಲ್ಲ, ಎರಡಲ್ಲ, 40 ಸಿಆರ್‌ಪಿಎಫ್ ಯೋಧರು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ಈ ನೋವು ಭಾರತೀಯರಿಂದ ಯಾವತ್ತೂ ಮಾಸುವುದಿಲ್ಲ. ಇಷ್ಟು ದಿನ ತನಗೆ ಸಂಬಂಧವಿಲ್ಲ ಎಂದು ಬೊಗಳೇ ಬಿಡುತ್ತಿದ್ದ ಪಾಕಿಸ್ತಾನ ಇದೀಗ ಸಂಸತ್ತಿನಲ್ಲೇ ಪುಲ್ವಾಮಾ ದಾಳಿಯನ್ನು ಪಾಕಿಸ್ತಾನ ಯಶಸ್ವಿಯಾಗಿ ಮುಗಿಸಿದೆ ಎಂದು ಹೇಳಿಕೊಂಡಿದೆ. ಇದೀಗ ಗುಜರಾತ್ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಪುಲ್ವಾಮಾ ದಾಳಿ ಹಾಗೂ ಭಯೋತ್ಪಾದಕತೆ ಕುರಿತು ಪಾಕಿಸ್ತಾನ ಹಾಗೂ ಈ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಮಾಡಿದ ಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
ಪುಲ್ವಾಮಾದಲ್ಲಿ ರಾಜಕೀಯ ಹುಡುಕಿದರು, ಮೌನವಾಗಿ ಸಹಿಸಿಕೊಂಡೆ: ಭಾವುಕರಾದ ಮೋದಿ
ಭಯೋತ್ಪಾದನೆ ವಿರುದ್ಧ ವಿಶ್ವವೇ ಒಗ್ಗಟ್ಟಾಗಿ ಹೋರಾಟಬೇಕಿದೆ. ಭಾರತ ನಿರಂತರವಾಗಿ ಭಯೋತ್ವಾದನೆ ವಿರುದ್ಧ ಹೋರಾಟ ಮಾಡುತ್ತಲೇ ಬಂದಿದೆ. ಭಯೋತ್ಪಾದನೆ ಹಾಗೂ ಹಿಂಸೆಯಿಂದ ಯಾರಿಗೂ ಒಳಿತಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಸರ್ದಾರ್ ವಲ್ಲಭಾಯಿ ಪಟೇಲ್ ಜಯಂತಿ ಆಚರಣೆ ವೇಳೆ ಮೋದಿ ಈ ಮಾತು ಹೇಳಿದ್ದಾರೆ.
ಪುಲ್ವಾಮಾ; 'ಆರೋಪ ಮಾಡಿದ್ದವರು ಮೋದಿ ಕ್ಷಮೆ ಕೇಳಿ ಪ್ರಾಯಶ್ಚಿತ್ತ ಮಾಡಿಕೊಳ್ಳಿ
ಪುಲ್ವಾಮಾ ದಾಳಿ ಯಾರೂ ಮರೆತಿಲ್ಲ. ನೋವು ಮಾಸುವುದಿಲ್ಲ. ಆದರೆ ಕೆಲವರಿಗೆ ಮಾತ್ರ ಇದ್ಯಾವುದರ ಪರಿವೇ ಇಲ್ಲ. ಪುಲ್ವಾಮಾ ದಾಳಿಯ ಬೆನ್ನಲ್ಲೇ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನೋಡಿದರು. ಇದೀಗ ಸತ್ಯ ಬಹಿರಂಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ