
ಕೋಲ್ಕತ್ತಾ(ಮಾ.13): ಭಾರತೀಯ ಜನತಾ ಪಕ್ಷದ ಮಾಜಿ ನಾಯಕ ಹಾಗೂ ವಾಜಪೇಯಿ ಅಧಿಕಾರಾವಧಿಯಲ್ಲಿ ವಿತ್ತ ಸಚಿವರಾಗಿದ್ದ ಯಶವಂತ್ ಸಿನ್ಹಾ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಚುನಾವಣಾ ಹೊಸ್ತಿಲಲ್ಲಿ ಪಶ್ಚಿಮ ಬಂಗಾಳ ರಾಜಕೀಯ ಕಣ ಮತ್ತೊಂದು ತಿರುವು ಪಡೆದುಕೊಂಡಿದೆ.
ಯಶವಂತ್ ಸಿನ್ಹಾರವರು, ಡೆರೆಕ್ ಓ ಬ್ರಾಯನ್, ಸುದೀಪ್ ಬಂದೋಪಾಧ್ಯಾಯ ಹಾಗೂ ಸುಬ್ರತ್ ಮುಖರ್ಜಿ ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡೆಗೊಂಡಿದ್ದಾರೆ. ಇದಾದ ಬಳಿಕ ಸುದ್ದಿಗೋಷ್ಠಿ ನಡೆಸಿದ ಟಿಎಂಸಿ ಈ ಮಾಹಿತಿಯನ್ನು ಖಚಿತಪಡಿಸಿದೆ.
ಪಶ್ಚಿಮ ಬಂಗಾಳ ಚುನಾವಣೆ, ಬಿಜೆಪಿಗೆ ಬಿಗ್ ಶಾಕ್!
ಇನ್ನು ಯಶವಂತ್ ಸಿನ್ಹಾ ತಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಸುಬ್ರತ್ ಮುಖರ್ಜಿ 'ಯಶವಂತ್ ಸಿನ್ಹಾ ನಮ್ಮ ಜೊತೆಗಿದ್ದಾರೆಂದು ನಮಗೆ ಬಹಳ ಖುಷಿಯಾಗುತ್ತಿದೆ. ನಂದಿಗ್ರಾಮದಲ್ಲಿ ನಡೆದ ಹಲ್ಲೆಯಿಂದ ಮಮತಾ ಬ್ಯಾನರ್ಜಿ ಗಾಯಗೊಂಡಿರದಿದ್ದರೆ, ಇಂದು ಖುದ್ದು ಅವರೇ ಇಲ್ಲಿರುತ್ತಿದ್ದರು' ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ