ಉತ್ತರ ಪ್ರದೇಶದಲ್ಲಿ ಯೋಗಿ ನಾಯಕತ್ವ ಅಬಾಧಿತ!

By Kannadaprabha News  |  First Published Jun 13, 2021, 11:16 AM IST

* ಉ.ಪ್ರ.ದಲ್ಲಿ ಯೋಗಿ ನಾಯಕತ್ವ ಅಬಾಧಿತ

* ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ

* ಮೋದಿ ಭೇಟಿ ಬಳಿಕ ಚಿತ್ರ ಸ್ಪಷ್ಟ

* ಆದರೆ ಸಂಪುಟದಲ್ಲಿ ಬದಲಾವಣೆ ಸಾಧ್ಯತೆ


ಲಖನೌ(ಜೂ.13): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಬದಲಾವಣೆಗೆ ಸಂಬಂಧಿಸಿದಂತೆ ಎದ್ದಿದ್ದ ಊಹಾಪೋಹಗಳಿಗೆ ಕೊನೆಗೂ ತೆರೆಬಿದ್ದಿದೆ. ಬಿಜೆಪಿ ಹೈಕಮಾಂಡ್‌ ಯೋಗಿ ಆದಿತ್ಯನಾಥ್‌ ಅವರ ನಾಯಕತ್ವದ ಮೇಲೆ ಸಂಪೂರ್ಣ ವಿಶ್ವಾಸ ಇಟ್ಟಿದ್ದು, 2022ರ ವಿಧಾನಸಭೆ ಚುನಾವಣೆಯನ್ನು ಯೋಗಿ ಆದಿತ್ಯನಾಥ್‌ ಅವರ ನೇತೃತ್ವದಲ್ಲೇ ಎದುರಿಸಲು ಒಲುವು ತೋರಿದೆ ಎಂದು ಮೂಲಗಳು ತಿಳಿಸಿವೆ.

ಕುತೂಹಲ ಕೆರಳಿಸಿದ ಸಿಎಂ ಯೋಗಿ ದೆಹಲಿ ಭೇಟಿ

Latest Videos

undefined

ಉತ್ತರ ಪ್ರದೇಶದಲ್ಲಿ ನಾಯಕತ್ವ ಬದಲಾವಣೆಯ ಊಹಾಪೋಹದ ಮಧ್ಯೆ ಯೋಗಿ ಅದಿತ್ಯನಾಥ್‌ ಅವರ ದೆಹಲಿ ಭೇಟಿ ತೀವ್ರ ಕುತೂಹಲ ಕೆರಳಿಸಿತ್ತು. ಚುನಾವಣೆಗೂ ಮುನ್ನ ಯೋಗಿ ಅಧಿತ್ಯನಾಥ್‌ ಅವನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲಾಗುತ್ತದೆ ಎನ್ನಲಾಗಿತ್ತು. ಆದರೆ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್‌ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಬಳಿಕ ಯೋಗಿ ಅದಿತ್ಯನಾಥ್‌ ಅವರ ಸ್ಥಾನ ಅಬಾಧಿತವಾಗಿದೆ. ಉತ್ಸಾಹದಿಂದ ಯೋಗಿ ಆದಿತ್ಯನಾಥ್‌ ಉತ್ತರ ಪ್ರದೇಶಕ್ಕೆ ವಾಪಸ್‌ ಆಗಿದ್ದಾರೆ.

ಯೋಗಿ ಆದಿತ್ಯನಾಥ್ ಹುಟ್ಟುಹಬ್ಬಕ್ಕೆ ಮೋದಿ ಶುಭಾಶಯದ ಟ್ವೀಟ್ ಮಿಸ್; ಇಲ್ಲಿದೆ ಕಾರಣ!

ಭೇಟಿಯ ವೇಳೆ ಮೋದಿ ಹಾಗೂ ಅಮಿತ್‌ ಶಾ ಯೋಗಿ ಆದಿತ್ಯನಾಥ್‌ ಸರ್ಕಾರದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆಯೂ ಸೂಚಿಸಿದ್ದಾರೆ. ಆದರೆ, ಸಂಪುಟದಲ್ಲಿ ಮಹತ್ವದ ಬದಲಾವಣೆ ಮಾಡಿ ದಕ್ಷ ಆಡಳಿತಕ್ಕೆ ಒತ್ತು ನೀಡುವಂತೆ ಹೈಕಮಾಂಡ್‌ ಸೂಚನೆ ನೀಡಿದೆ ಎನ್ನಲಾಗಿದೆ.

click me!