ಯೋಗಿ ನೇತೃತ್ವದಲ್ಲೇ ಎಲೆಕ್ಷನ್‌: ನಾಯಕತ್ವ ಗೊಂದಲಗಳಿಗೆ ತೆರೆ

By Suvarna NewsFirst Published Jun 24, 2021, 3:17 PM IST
Highlights
  • ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ನಾಯಕತ್ವದಲ್ಲೇ ಚುನಾವಣೆ ಎದುರಿಸಲಿದೆ ಬಿಜೆಪಿ
  • ನಾಯಕತ್ವ ಬದಲಾವಣೆಯಾಗಲಿದೆ ಎಂಬ ಊಹಾಪೋಹಗಳಿಗೆ ತೆರೆ

ಲಕ್ನೋ(ಜೂ.24): ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ಹಾಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ನಾಯಕತ್ವದಲ್ಲೇ ಎದುರಿಸಲಾಗುತ್ತದೆ ಎಂದು ಬಿಜೆಪಿ ಪ್ರಧಾನ ಕಾರ‍್ಯದರ್ಶಿ ಅರುಣ್‌ ಸಿಂಗ್‌ ಅವರು ಹೇಳಿದ್ದಾರೆ.

ತನ್ಮೂಲಕ 2022ರ ರಾಜ್ಯ ವಿಧಾನಸಭೆ ಹೊತ್ತಿಗೆ ಉತ್ತರ ಪ್ರದೇಶದ ಬಿಜೆಪಿಯಲ್ಲಿ ಯೋಗಿ ಆದಿತ್ಯನಾಥ್‌ ಅವರ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

'2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಸೌಲಭ್ಯವಿಲ್ಲ' ಯುಪಿಯಲ್ಲಿ ಹೊಸ ಕಾನೂನು!

‘ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅಂಥವರನ್ನು ಏಕೆ ಬದಲಾವಣೆ ಮಾಡಬೇಕು?’ ಎಂದು ಪ್ರಶ್ನಿಸಿದ್ದಾರೆ.

ನನ್ನ ದೃಷ್ಟಿಯಲ್ಲಿ, ಯುಪಿ ಜನರು 2013-14ರಲ್ಲಿ ಮಾಡಿದಂತೆಯೇ ಮೋದಿಜಿಯನ್ನು ಪ್ರೀತಿಸುತ್ತಾರೆ ಮತ್ತು ಚುನಾವಣೆಯಲ್ಲಿ ಗೆಲ್ಲಲು ಈ ಮಹಾನ್ ನಾಯಕನ ಹೆಸರು ಮತ್ತು ಪ್ರೋತ್ಸಾಹ ಸಾಕು."

click me!