
ನವದೆಹಲಿ(ಆ.22): ತುರ್ತು ಬಳಕೆಗೆ ಶುಕ್ರವಾರವಷ್ಟೇ ಕೇಂದ್ರ ಸರ್ಕಾರದಿಂದ ಅನುಮತಿ ಪಡೆದ ಅಹಮದಾಬಾದ್ ಮೂಲದ ಝೈಡಸ್ ಕ್ಯಾಡಿಲಾ ಸಂಸ್ಥೆ, ಅಕ್ಟೋಬರ್ ಮಧ್ಯಭಾಗದ ವೇಳೆಗೆ ಝೈಕೋವ್-ಡಿ ಲಸಿಕೆಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವುದಾಗಿ ಹೇಳಿದೆ.
ಈ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಮುಖ್ಯಸ್ಥ ಶಾರ್ವಿಲ್ ಪಟೇಲ್ ‘ಅಕ್ಟೋಬರ್ ಮಧ್ಯಭಾಗದಲ್ಲಿ ಲಸಿಕೆ ಬಿಡುಗಡೆಯಾಗಲಿದ್ದು, ಮಾಸಿಕ 1 ಕೋಟಿ ಲಸಿಕೆ ಉತ್ಪಾದಿಸಲಿದ್ದೇವೆ. ಲಸಿಕೆಯ ದರದ ಬಗ್ಗೆ 1-2 ವಾರದಲ್ಲೇ ಸ್ಪಷ್ಟನೆ ನೀಡಲಿದ್ದೇವೆ. ಈ ಲಸಿಕೆ ವಿಶ್ವದಲ್ಲೇ ಅತೀ ವೇಗವಾಗಿ ಹಬ್ಬುವ ಡೆಲ್ಟಾತಳಿಯ ವಿರುದ್ಧವೂ ಪರಿಣಾಮಕಾರಿಯಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ ಇನ್ನೊಂದು ವಾರದಲ್ಲಿ 3-12ರ ವಯೋಮಾನದ ಮಕ್ಕಳ ಮೇಲೆ ಲಸಿಕೆ ಪ್ರಯೋಗಕ್ಕೆ ಅನುಮತಿ ಕೋರುವುದಾಗಿ ಅವರು ತಿಳಿಸಿದ್ದಾರೆ. ಝೈಕೋವ್-ಡಿ,. 12 ವರ್ಷ ಮೇಲ್ಪಟ್ಟಎಲ್ಲಾ ವ್ಯಕ್ತಿಗಳು ಬಳಸಬಹುದಾದ ಮೂರು ಡೋಸ್ ಮಾದರಿಯ ಕೋವಿಡ್ ಲಸಿಕೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ