
ಬೆಂಗಳೂರು(ಮೇ.24) ಭಾರತದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ಕರ್ನಾಟಕದಲ್ಲೂ ಕೋವಿಡ್ ಕೇಸ್ ದಾಖಲಾಗಿದೆ. ರಾಜ್ಯದಲ್ಲಿ ಪತ್ತೆಯಾಗಿರುವ 35 ಪ್ರಕರಣಗಳ ಪೈಕಿ 32 ಕೇಸ್ ಬೆಂಗಳೂರಲ್ಲಿ ಪತ್ತೆಯಾಗಿದೆ. ಬೆಂಗಳೂರಲ್ಲಿ ಕೋವಿಡ್ ಪ್ರಕರಣ ದಿಢೀರ್ ಏರಿಕೆಯಾಗಿದೆ. ಆದರೆ ರಾಜ್ಯದಲ್ಲಿ ದಾಖಲಾಗಿರುವ ಎಲ್ಲಾ ಪ್ರಕರಣಗಳು ಮೈಲ್ಡ್ ಆಗಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ದಕ್ಷಿಣ ಭಾರತದಲ್ಲಿ ಕೇರಳದಲ್ಲಿ ಅತೀ ಹೆಚ್ಚಿನ ಕೋವಿಡ್ ಪ್ರಕರಣ ದಾಖಲಾಗುತ್ತದೆ. ಇತ್ತ ಆಂಧ್ರ ಪ್ರದೇಶದಲ್ಲೂ ಕೋವಿಡ್ ಕೇಸ್ ದಾಖಲಾಗಿದೆ. ಈ ಪೈಕಿ ಆಂಧ್ರ ಪ್ರದೇಶದಲ್ಲಿ ಮಾಸ್ಕ್ ಧರಿಸುವಂತೆ ಸರ್ಕಾರ ಸೂಚಿಸಿದೆ.
ಆಂಧ್ರ ಪ್ರದೇಶದಲ್ಲಿ ಮತ್ತೆ ಬಂದ ಮಾಸ್ಕ್
ಆಂಧ್ರ ಪ್ರದೇಶದಲ್ಲಿ ಸರ್ಕಾರ ಕೋವಿಡ್ ಎದುರಿಸಲು ಸನ್ನದ್ಧವಾಗಿದೆ. ಆರೋಗ್ಯ ಇಲಾಖೆ ಎಲ್ಲಾ ತಯಾರಿ ಮಾಡಿಕೊಂಡಿದೆ. ಜನರಲ್ಲಿ ಕೋವಿಡ್ ಮಾಸ್ಕ್ ಧರಿಸುವಂತೆ ಮನವಿ ಮಾಡಿದೆ. ಆಂಧ್ರ ಪ್ರದೇಶದಲ್ಲಿ ಒಂದು ಕೋವಿಡ್ ಕೇಸ್ ದಾಖಲಾಗಿದೆ. ಇದರ ಬೆನ್ನಲ್ಲೇ ಆಂಧ್ರ ಪ್ರದೇಶ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ.
ದೆಹಲಿಯಲ್ಲಿ 23 ಕೋವಿಡ್ ಕೇಸ್
ದೆಹಲಿಯಲ್ಲಿ ಏಕಾಏಕಿ 23 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಹೀಗಾಗಿ ಸರ್ಕಾರ ಆರೋಗ್ಯ ಇಲಾಖೆಗೆ ಮಹತ್ವದ ಸೂಚನೆ ನೀಡಿದೆ. ಆಕ್ಸಿಜನ್, ಆಸ್ಪತ್ರೆ ಬೆಡ್ ಸೇರಿದಂತೆ ಎಲ್ಲಾ ವ್ಯವಸ್ಥೆ ರೆಡಿ ಇರುವಂತೆ ಸೂಚಿಸಿದೆ. ದಾಖಲಾಗಿರುವು ಕೋವಿಡ್ ಪ್ರಕರಣಗಳು ಗಂಭೀರವಾಗಿಲ್ಲ. ಹೀಗಾಗಿ ಆತಂಕ ಬೇಡ. ಆದರೆ ಮುಂಜಾಗ್ರತ ಕ್ರಮವಾಗಿ ಅಲರ್ಟ್ ಸೂಚಿಸಲಾಗಿದೆ ಎಂದು ದೆಹಲಿ ಸರ್ಕಾರ ಹೇಳಿದೆ.
ಮುಂಬೈನಲ್ಲಿ 95 ಕೋವಿಡ್ ಕೇಸ್
ಭಾರತದಲ್ಲಿ ಗರಿಷ್ಠ ಕೋವಿಡ್ ಕೇಸ್ ದಾಖಲಾಗುತ್ತಿರುವ ನಗರಗಳಲ್ಲಿ ಮುಂಬೈ ಕೂಡ ಒಂದು. ಮುಂಬೈನಲ್ಲಿ ಇದೀಗ 95 ಕೋವಿಡ್ ಕೇಸ್ ದಾಖಲಾಗಿದೆ. ಇನ್ನು ಮಹಾರಾಷ್ಟ್ರದಲ್ಲಿ ಒಟ್ಟು ಕೋವಿಡ್ ಸಂಖ್ಯೆ 105ಕ್ಕೆ ಏರಿಕೆಯಾಗಿದೆ. ಈ ಪೈಕಿ 16 ಕೋವಿಡ್ ಸೋಂಕಿತರು ಆಸ್ಪತ್ರೆ ದಾಖಲಾಗಿದ್ದಾರೆ.
ಅಹಮ್ಮದಾಬಾದ್‌ನಲ್ಲಿ ಒಂದೇ ದಿನ 20 ಕೋವಿಡ್ ಕೇಸ್
ಅಹಮ್ಮದಾಬಾದ್‌ನಲ್ಲಿ ಒಂದೇ ದಿನ 20 ಕೋವಿಡ್ ಪ್ರಕರಣ ದಾಖಲಾಗಿದೆ. ಇದರಿಂದ ಅಹಮ್ಮದಾಬಾದ್ ಸಕ್ರಿಯ ಕೋವಿಡ್ ಪ್ರಕರಣ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಇನ್ನು ಗುಜರಾತ್‌ನಲ್ಲಿ ಒಟ್ಟು ಕೋವಿಡ್ ಕೇಸ್ 46ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಆತಂಕದ ಪರಿಸ್ಥಿತಿ ಇಲ್ಲ
ಭಾರತದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಯಾವುದೇ ಆತಂಕವಿಲ್ಲ. ಎಲ್ಲಾ ಪ್ರಕರಣಗಳು ಮೈಲ್ಡ್ ಆಗಿದೆ. ಕೋವಿಡ್ ಸೋಂಕದಂತೆ ಮಂಜಾಗ್ರತೆ ವಹಿಸಲು ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ. ಇನ್ನು ಎಲ್ಲಾ ರಾಜ್ಯಗಳು ಕೋವಿಡ್ ಪ್ರಕರಣದ ಮೇಲೆ ನಿಗಾ ಇಡಲು ಸೂಚಿಸಿದೆ. ದೇಶದಲ್ಲಿ ಕೋವಿಡ್ ಪ್ರಕರಣ ಸಂಖ್ಯೆಯಲ್ಲಿ ಆಗಿರುವ ಏರಿಕೆಗೆ ಸನ್ನದ್ಧವಾಗಿರುವಂತೆ ಆಸ್ಪತ್ರೆಗಳಿಗೆ ಸೂಚಿಸಿದೆ.