ವೀಕ್ಷಣೆಯಲ್ಲಿ ಅಪರೂಪದ ದಾಖಲೆ ಬರೆದ ಐಪಿಎಲ್ ಉದ್ಘಾಟನಾ ಪಂದ್ಯ..!

By Suvarna News  |  First Published Sep 23, 2020, 12:55 PM IST

13ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯ ಟಿವಿ ಇತಿಹಾಸದಲ್ಲಿ ಹೊಸ ಮೈಲಿಗಲ್ಲೊಂದನ್ನು ನೆಟ್ಟಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಖಚಿತ ಪಡಿಸಿದ್ದಾರೆ. ಏನದು ದಾಖಲೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ


ಅಬುಧಾಬಿ(ಸೆ.23): ಕೊರೋನಾ ಭೀತಿ ನಡುವೆಯೇ 13ನೇ ಆವೃತ್ತಿಯ ಐಪಿಎಲ್‌ಗೆ ಚಾಲನೆ ದೊರೆತ್ತಿದ್ದು, ಖಾಲಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯುತ್ತಿವೆ. 

ಇನ್ನು ಸೆಪ್ಟೆಂಬರ್ 19ರಂದು ಚೆನ್ನೈ ಸೂಪರ್‌ಕಿಂಗ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳ ನಡುವೆ ನಡೆದ ಉದ್ಘಾಟನಾ ಪಂದ್ಯ ಹೊಸ ದಾಖಲೆಯೊಂದನ್ನು ಬರೆದಿದೆ. ಸ್ಟಾರ್‌ ಸ್ಪೋರ್ಟ್ಸ್ ಹಾಗೂ ಡಿಸ್ನಿಪ್ಲಸ್‌ ಹಾಟ್‌ಸ್ಟಾರ್‌ನಲ್ಲಿ ಸುಮಾರು 20 ಕೋಟಿ ಜನರು ಪಂದ್ಯವನ್ನು ವೀಕ್ಷಿಸಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಟ್ವೀಟ್‌ ಮಾಡಿದ್ದಾರೆ.

Tap to resize

Latest Videos

‘ಐಪಿಎಲ್‌ ಉದ್ಘಾಟನಾ ಪಂದ್ಯ ಹೊಸ ದಾಖಲೆಯೊಂದನ್ನು ಬರೆದಿದೆ. ಬಾರ್ಕ್ ಮಾಹಿತಿ ಪ್ರಕಾರ 20 ಕೋಟಿ ಮಂದಿ ಪಂದ್ಯವನ್ನು ವೀಕ್ಷಿಸಿದ್ದಾರೆ. ಯಾವುದೇ ದೇಶದಲ್ಲಿ ನಡೆದ ಕ್ರೀಡಾಕೂಟದ ಮೊದಲ ದಿನದ ಗರಿಷ್ಠ ವೀಕ್ಷಣೆ ಇದಾಗಿದೆ. ಯಾವುದೇ ಟೂರ್ನಿ ಇಷ್ಟು ದೊಡ್ಡ ಮಟ್ಟದಲ್ಲಿ ಶುರುವಾಗಿಲ್ಲ’ ಎಂದು ಟ್ವೀಟರ್‌ನಲ್ಲಿ ಬರೆದುಕೊಂಡಿದ್ದಾರೆ.

IPL 2020: ರಾಜಸ್ಥಾನ ರಾಯಲ್ಸ್ ಹೊಡೆತಕ್ಕೆ ಕೊಚ್ಚಿ ಹೋದ ಚೆನ್ನೈ!

Opening match of sets a new record!

As per BARC, an unprecedented 20crore people tuned in to watch the match. Highest ever opening day viewership for any sporting league in any country- no league has ever opened as big as this.

— Jay Shah (@JayShah)

ದುಬೈನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ರೋಚಕವಾಗಿ ಮಣಿಸಿ ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ಅಂಬಟಿ ರಾಯುಡು, ಫಾಫ್ ಡು ಪ್ಲೆಸಿಸ್‌ ಸಿಎಸ್‌ಕೆ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
 

click me!