
ನವದೆಹಲಿ(ಆ.10): ಚುಟುಕು ಕ್ರಿಕೆಟ್‌ನ ಸೂಪರ್ ಸ್ಟಾರ್ ಬ್ಯಾಟ್ಸ್‌ಮನ್ ಸುರೇಶ್ ರೈನಾ ಚೆನ್ನೈ ಸೂಪರ್ ಕಿಂಗ್ಸ್ ಸಹಪಾಠಿಗಳಾದ ಎಂ.ಎಸ್. ಧೋನಿ ಹಾಗೂ ಮುರುಳಿ ವಿಜಯ್ ಅವರೊಂದಿಗಿನ ಭಾವಚಿತ್ರವನ್ನು ಹಂಚಿಕೊಂಡಿದ್ದು, ಐಪಿಎಲ್ ಆರಂಭವಾಗುವುದನ್ನೇ ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ಮತ್ತೆ ರನ್ ಹೊಳೆ ಹರಿಸುವ ಮೂಲಕ ಎದುರಾಳಿ ತಂಡಕ್ಕೆ ದುಸ್ವಪ್ನವಾಗಿ ಕಾಡಲಿದ್ದೇನೆ ಎನ್ನುವ ಪರೋಕ್ಷ ಸಂದೇಶವನ್ನು ಎಡಗೈ ಬ್ಯಾಟ್ಸ್‌ಮನ್ ರವಾನಿಸಿದ್ದಾರೆ.
ಮೈದಾನಕ್ಕಿಳಿಯುವುದಕ್ಕೆ ದಿನಗಣನೆ ಆರಂಭಿಸಿದ್ದೇನೆ. ಪ್ರತಿ ಕ್ಷಣಗಳನ್ನು ಆನಂದಿಸಲು ಎದುರು ನೋಡುತ್ತಿದ್ದೇನೆ. 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಧೋನಿ-ವಿಜಯ್ ಜತೆ ಆಡಲು ತುದಿಗಾಲಿನಲ್ಲಿ ನಿಂತಿದ್ದೇನೆ ಎಂದು ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಸೆಪ್ಟೆಂಬರ್ 19ರಿಂದ ಆರಂಭವಾಗಿ ನವೆಂಬರ್ 10ರವರೆಗೆ ನಡೆಯಲಿದೆ.
ವಿರಾಟ್ ನೇತೃತ್ವದ RCB ಪರ ಆಡಲು ತುದಿಗಾಲಿ ನಿಂತಿದ್ದೇನೆ ಎಂದ ವಿಸ್ಫೋಟಕ ಬ್ಯಾಟ್ಸ್‌ಮನ್..!
ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯವಾಗಿರುವ ಸುರೇಶ್ ರೈನಾ, 13ನೇ ಆವೃತ್ತಿಯ ಟೂರ್ನಿ ಆರಂಭದ ದಿನಾಂಕ ಹೊರಬೀಳುತ್ತಿದ್ದಂತೆಯೇ ಅಭ್ಯಾಸ ಆರಂಭಿಸಿದ್ದಾರೆ. ಕಳೆದ ವಾರವಷ್ಟೇ ನೆಟ್ಸ್‌ನಲ್ಲಿ ಅಭ್ಯಾಸ ಮಾಡುತ್ತಿರುವ ವಿಡಿಯೋವನ್ನು ರೈನಾ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದರು.
33 ವರ್ಷದ ಸುರೇಶ್ ರೈನಾ ಇದುವರೆಗೂ 193 ಪಂದ್ಯಗಳನ್ನಾಡಿದ್ದು, 5368 ರನ್ ಬಾರಿಸಿದ್ದಾರೆ. 137.14ರ ಸ್ಟ್ರೈಕ್ ರೇಟ್ ಹೊಂದಿರುವ ರೈನಾ 33.34ರ ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ. ರೈನಾ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅತ್ಯಂತ ನಂಬಿಕಸ್ಥ ಬ್ಯಾಟ್ಸ್‌ಮನ್ ಕೂಡಾ ಹೌದು. ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೂರು ಬಾರಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ನಾಲ್ಕನೇ ಕಪ್ ಮೇಲೆ ಕಣ್ಣಿಟ್ಟಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.