
ರಾಂಚಿ(ನ.09): ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ಲೇ-ಆಫ್‌ಗೇರಿಸಲು ವಿಫಲರಾದ ಎಂ.ಎಸ್.ಧೋನಿ, ಭಾರತಕ್ಕೆ ವಾಪಸಾಗುತ್ತಿದ್ದಂತೆಯೇ ಮುಂದಿನ ವರ್ಷದ ಐಪಿಎಲ್‌ಗೆ ಸಿದ್ಧತೆ ಆರಂಭಿಸಿದ್ದಾರೆ.
ಧೋನಿ ತಮ್ಮ ಸ್ನೇಹಿತರೊಂದಿಗೆ ಜಿಮ್‌ನಲ್ಲಿ ವರ್ಕೌಟ್ ಶುರು ಮಾಡಿದ್ದು, ಫಿಟ್ನೆಸ್ ಕಾಯ್ದುಕೊಳ್ಳುವತ್ತ ಗಮನ ಹರಿಸಿದ್ದಾರೆ. ಸ್ನೇಹಿತರೊಂದಿಗೆ ಧೋನಿ ಜಿಮ್‌ನಲ್ಲಿರುವ ಫೋಟೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. 2021ರ ಐಪಿಎಲ್ ಮಾರ್ಚ್ ಇಲ್ಲವೇ ಏಪ್ರಿಲ್‌ನಲ್ಲಿ ಆರಂಭಗೊಳ್ಳಲಿದ್ದು, ಕೇವಲ 4-5 ತಿಂಗಳು ಸಮಯ ಮಾತ್ರ ಬಾಕಿ ಇದೆ. ಅಂ.ರಾ.ಕ್ರಿಕೆಟ್‌ನಿಂದ ನಿವೃತ್ತಿ ಪಡೆದಿರುವ ಧೋನಿ, ಫಿಟ್ನೆಸ್ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಅಭ್ಯಾಸ ಆರಂಭಿಸಿದ್ದಾರೆ ಎನ್ನಲಾಗಿದೆ.
ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಈ ಮೊದಲು ಆಡಿದ 10 ಆವೃತ್ತಿಗಳಲ್ಲೂ ಪ್ಲೇ ಆಫ್ ಹಂತ ಪ್ರವೇಶಿಸಿ ದಾಖಲೆ ಬರೆದಿತ್ತು. ಆದರೆ ಯುಎಇನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕೊನೆಯಿಂದ ಎರಡನೇ ಸ್ಥಾನಕ್ಕೆ ಸಿಎಸ್‌ಕೆ ತಂಡ ತೃಪ್ತಿಪಟ್ಟುಕೊಂಡಿತ್ತು. ಧೋನಿ ನೇತೃತ್ವದ ಸಿಎಸ್‌ಕೆ ತಂಡ 14 ಪಂದ್ಯಗಳ ಪೈಕಿ 8 ಸೋಲು ಹಾಗೂ 6 ಗೆಲುವುಗಳೊಂದಿಗೆ 7ನೇ ಸ್ಥಾನದೊಂದಿಗೆ ತಮ್ಮ ಅಭಿಯಾನ ಅಂತ್ಯಗೊಳಿಸಿಕೊಂಡಿತ್ತು.
ಇದೀಗ ನವೆಂಬರ್ 10ರಂದು ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಮುಂಬೈ ಇಂಡಿಯನ್ಸ್ ತಂಡ 5ನೇ ಐಪಿಎಲ್ ಟ್ರೋಫಿ ಮೇಲೆ ಚಿತ್ತ ನೆಟ್ಟಿದ್ದರೆ, ಇನ್ನೊಂದು ಕಡೆ ಇದೇ ಮೊದಲ ಬಾರಿಗೆ ಐಪಿಎಲ್ ಫೈನಲ್ ಪ್ರವೇಶಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಚೊಚ್ಚಲ ಐಪಿಎಲ್ ಟ್ರೋಫಿಯ ಕನವರಿಕೆಯಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.