
ದುಬೈ(ಆ.27): ಐಪಿಎಲ್ 13ನೇ ಆವೃತ್ತಿ ಆರಂಭಕ್ಕೆ ಕೇವಲ 3 ವಾರಗಳು ಮಾತ್ರ ಬಾಕಿ ಇದ್ದು, ಬಿಸಿಸಿಐ ಇನ್ನೂ ವೇಳಾಪಟ್ಟಿ ಪ್ರಕಟಿಸಿಲ್ಲ. ಅಬುಧಾಬಿಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದೇ ಇದಕ್ಕೆ ಕಾರಣ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.
ಅಬುಭಾಬಿಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ, ಯಾರೇ ಅಬುಧಾಬಿಗೆ ಪ್ರವೇಶಿಸಬೇಕಿದ್ದರೂ ಕಡ್ಡಾಯವಾಗಿ 48 ಗಂಟೆಗಳ ಹಿಂದೆ ಕೋವಿಡ್ ಪರೀಕ್ಷೆಗೆ ಒಳಗಾಗಿ ನೆಗೆಟಿವ್ ವರದಿ ಹೊಂದಿರಬೇಕು ಎನ್ನುವ ಷರತ್ತು ವಿಧಿಸಿದೆ. ಅಬುಧಾಬಿಯಲ್ಲಿ ಗ್ರೂಪ್ ಹಂತದ 21 ಹಾಗೂ ಪ್ಲೇ-ಆಫ್‌ನ ಕೆಲ ಪಂದ್ಯಗಳನ್ನು ನಡೆಸಲು ಉದ್ದೇಶಿಸಲಾಗಿದ್ದು, ಹೊಸ ಷರತ್ತಿನಿಂದಾಗಿ ಬಿಸಿಸಿಐ ವೇಳಾಪಟ್ಟಿ ಸಿದ್ಧಪಡಿಸಲು ತಡವಾಗುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಕೆಲವು ದಿನಗಳ ಹಿಂದಷ್ಟೇ ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ಬ್ರಿಜೇಶ್ ಪಟೇಲ್ ಈ ವಾರಾಂತ್ಯದೊಳಗಾಗಿ ಸಂಪೂರ್ಣ ಐಪಿಎಲ್ ವೇಳಾಪಟ್ಟಿ ಪ್ರಕಟಿಸುವುದಾಗಿ ತಿಳಿಸಿದ್ದರು. 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಸೆಪ್ಟೆಂಬರ್ 19ರಿಂದ ಆರಂಭವಾಗಿ ನವೆಂಬರ್ 10ರವರೆಗೆ ನಡೆಯಲಿದೆ. ಆದರೆ ಇದುವರೆಗೂ ಸಂಪೂರ್ಣ ವೇಳಾಪಟ್ಟಿ ಮಾತ್ರ ಪ್ರಕಟಗೊಂಡಿಲ್ಲ.
ಐಪಿಎಲ್ ವೇಳೆ 20,000 ಕೋವಿಡ್ ಪರೀಕ್ಷೆ
ದುಬೈ: 13ನೇ ಆವೃತ್ತಿಯ ಐಪಿಎಲ್ ಟೂರ್ನಿ ವೇಳೆ 20000ಕ್ಕೂ ಹೆಚ್ಚು ಕೋವಿಡ್-19 ಪರೀಕ್ಷೆ ನಡೆಸಲು ಉದ್ದೇಶಿಸಿರುವ ಬಿಸಿಸಿಐ, ಅಬುಧಾಬಿ ಮೂಲದ ಆರೋಗ್ಯ ಸಂಸ್ಥೆಯೊಂದರ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ.
IPL ಸಂಪೂರ್ಣ ವೇಳಾಪಟ್ಟಿ ಪ್ರಕಟ ಯಾವಾಗ..? ಬ್ರಿಜೇಶ್ ಪಟೇಲ್ ಕೊಟ್ರು ಸುಳಿವು
3 ತಿಂಗಳುಗಳ ಕಾಲ ಐಪಿಎಲ್ ನಡೆಯಲಿದ್ದು, ಪ್ರತಿ 5 ದಿನಕ್ಕೊಮ್ಮೆ ಎಲ್ಲಾ ಆಟಗಾರರು, ಸಹಾಯಕ ಸಿಬ್ಬಂದಿ, ಬಿಸಿಸಿಐ ಅಧಿಕಾರಿಗಳು ಸೇರಿದಂತೆ ಟೂರ್ನಿಯಲ್ಲಿ ಪಾಲ್ಗೊಂಡಿರುವ ಪ್ರತಿಯೊಬ್ಬರ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.