ಐಪಿಎಲ್‌ ರದ್ದತಿ ಕುರಿತು ಸೂಚನೆ ಇಲ್ಲ: KSCA

By Web Desk  |  First Published Mar 11, 2020, 10:59 AM IST

ಕೊರೋನಾ ಭೀತಿ ರಾಜ್ಯದ ಜನರನ್ನು ಕಂಗಾಲು ಮಾಡಿದೆ. ಹೀಗಿರುವಾಗಲೇ ಐಪಿಎಲ್ ಬೆಂಗಳೂರಿನಿಂದ ಸ್ಥಳಾಂತರವಾಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸ್ಪಷ್ಟನೆ ನೀಡಿದೆ. 


ಬೆಂಗಳೂರು(ಮಾ.11): 2020ರ ಐಪಿಎಲ್‌ ರದ್ದತಿ ಕುರಿತು ರಾಜ್ಯ ಸರ್ಕಾರ ಹಾಗೂ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ)ನಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ)ಖಜಾಂಚಿ ವಿನಯ್‌ ಮೃತ್ಯುಂಜಯ ಸುವರ್ಣ ನ್ಯೂಸ್.ಕಾಂ ಸೋದರ ಸಂಸ್ಥೆ ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದ್ದಾರೆ. 

ಧೋನಿ ಅಭ್ಯಾಸ ನೋಡಲು ಕ್ರೀಡಾಂಗಣ ಫುಲ್, ಬ್ಯಾರಿಕೇಡ್ ಹಾರಿದ ಅಭಿಮಾನಿ!

Latest Videos

undefined

ಮಾ.29ರಿಂದ 13ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಆರಂಭವಾಗಲಿದೆ. ಕೊರೋನಾ ಭೀತಿ ಇದ್ದರೂ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಇತ್ತೀಚೆಗಷ್ಟೇ ಐಪಿಎಲ್‌ ನಡೆಸಲಿದ್ದೇವೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಸೋಮವಾರ ಐಪಿಎಲ್‌ ಟೂರ್ನಿಯ ರದ್ದತಿಗೆ ಕೇಂದ್ರಕ್ಕೆ ಪತ್ರ ಬರೆದಿದೆ. ಬೆಂಗಳೂರಿನಲ್ಲಿ ಐಪಿಎಲ್‌ ಪಂದ್ಯಗಳನ್ನು ಆಯೋಜಿಸಲು ಸಾಧ್ಯವಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ. 

IPLಗೆ ಕೊರೋನಾ ವೈರಸ್ ಭಯ; ಪ್ರತಿಕ್ರಿಯೆ ನೀಡಿದ ಮುಖ್ಯಸ್ಥ!

ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಹೆಚ್ಚು ಜನ ಸೇರುವ ಕಾರ‍್ಯಕ್ರಮಗಳನ್ನು ಮಾಡಬಾರದು ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದರ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕೂಡ ಐಪಿಎಲ್‌ ಆಯೋಜಿಸದಿರುವ ಬಗ್ಗೆ ಚಿಂತನೆ ನಡೆಸಿದೆ. ಅದರಂತೆ ಕರ್ನಾಟಕ ಸರ್ಕಾರ ಕೂಡ ಐಪಿಎಲ್‌ ಪಂದ್ಯಗಳನ್ನು ನಡೆಸದಿರಲು ಚಿಂತಿಸಿದೆ ಎಂದು ಡಾ.ಕೆ. ಸುಧಾಕರ್‌ ಸೋಮವಾರ ಹೇಳಿದ್ದರು.
 

click me!