
ನವದೆಹಲಿ(ಆ.04): 2020ರ ಐಪಿಎಲ್ ಟೂರ್ನಿ ಯುಎಇನಲ್ಲಿ ನಡೆಯುವುದು ಖಚಿತವಾಗುತ್ತಿದ್ದಂತೆ ಫ್ರಾಂಚೈಸಿಗಳು ಸಾಮಾಜಿಕ ತಾಣಗಳಲ್ಲಿ ಸಂತಸ ವ್ಯಕ್ತಪಡಿಸಿವೆ.
ಚೆನ್ನೈ ಸೂಪರ್ ಕಿಂಗ್ಸ್, ಎಂ.ಎಸ್.ಧೋನಿ ಸೇರಿದಂತೆ ಇತರ ಆಟಗಾರರು ಅರಬ್ ಸಾಂಪ್ರದಾಯಿಕ ಶಿರವಸ್ತ್ರವನ್ನು ಧರಿಸಿರುವಂತೆ ಫೋಟೋಶಾಪ್ ಮಾಡಿದ ಚಿತ್ರವನ್ನು ಟ್ವೀಟ್ ಮಾಡಿದ್ದು, ವೈರಲ್ ಆಗಿದೆ. ಮುಂಬೈ ಇಂಡಿಯನ್ಸ್, ಆರ್‌ಸಿಬಿ ಸೇರಿದಂತೆ ಬಹುತೇಕ ಎಲ್ಲಾ ತಂಡಗಳು ಸಾಮಾಜಿಕ ತಾಣಗಳಲ್ಲಿ ಸಂತಸ ಹಂಚಿಕೊಂಡಿವೆ.
ಈ ತಿಂಗಳೇ ಯುಎಇಗೆ ಚೆನ್ನೈ ಸೂಪರ್ ಕಿಂಗ್ಸ್?
ನವದೆಹಲಿ: 3 ಬಾರಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ವರ್ಷ ಐಪಿಎಲ್ಗೆ ಸಿದ್ಧತೆ ನಡೆಸಲು ಒಂದು ತಿಂಗಳು ಮುಂಚಿತವಾಗಿಯೇ ಯುಎಇಗೆ ತೆರಳಲು ನಿರ್ಧರಿಸಿದೆ.
ತಂಡದ ಮಾಲಿಕರು ಕೇಂದ್ರ ಸರ್ಕಾರದ ಅನುಮತಿಗಾಗಿ ಕಾಯುತ್ತಿರುವುದಾಗಿ ಮೂಲಗಳು ತಿಳಿಸಿವೆ. ಅನುಮತಿ ದೊರೆತರೆ ಇದೇ ತಿಂಗಳಲ್ಲಿ ತಂಡ ಯುಎಇ ತಲುಪಲಿದ್ದು, ಕಠಿಣ ಅಭ್ಯಾಸ ನಡೆಸಲಿದೆ ಎಂದು ತಂಡದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಹುನಿರೀಕ್ಷಿತ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಸೆಪ್ಟೆಂಬರ್ 19ರಿಂದ ಆರಂಭವಾಗಲಿದ್ದು, ನವೆಂಬರ್ 10ಕ್ಕೆ ಫೈನಲ್ ಪಂದ್ಯ ಜರುಗಲಿದೆ. ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪ್ರಶಸ್ತಿ ಮೇಲೆ ಮತ್ತೆ ಕಣ್ಣಿಟ್ಟಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಕಪ್ ಗೆಲ್ಲುವ ಕನವರಿಕೆಯಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.