
ಹೈದರಾಬಾದ್(ಫೆ.27): ಸನ್‌ರೈಸರ್ಸ್ ಹೈದರಾಬಾದ್ ತಂಡ 13ನೇ ಆವೃತ್ತಿ ಐಪಿಎಲ್ ಟೂರ್ನಿಗೆ ತಯಾರಿ ಆರಂಭಿಸಿದೆ. ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ SRH ತಂಡ ಸರಣಿ ಆರಂಭಕ್ಕೆ ಇನ್ನೊಂದು ತಿಂಗಳು ಬಾಕಿ ಇರುವಾಗಲೇ ತಂಡಕ್ಕೆ ಹೊಸ ನಾಯಕನ ಘೋಷಿಸಿದೆ. 2020ರ ಐಪಿಎಲ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸಲಿದ್ದಾರೆ.
ಇದನ್ನೂ ಓದಿ: RCB to CSK ಐಪಿಎಲ್ ಟೂರ್ನಿಯ 8 ತಂಡದ ಕಂಪ್ಲೀಟ್ ಡೀಟೇಲ್ಸ್!
ಡೇವಿಡ್ ವಾರ್ನರ್ ನಾಯಕತ್ವದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 2016ರಲ್ಲಿ ಐಪಿಎಲ್ ಟ್ರೋಫಿ ಗೆದ್ದುಕೊಂಡಿದೆ. ಆದರೆ 2018ರಲ್ಲಿ ಬಾಲ್ ಟ್ಯಾಂಪರಿಂಗ್ ಪ್ರಕರಣದಿಂದ 1 ವರ್ಷ ನಿಷೇಧದ ಶಿಕ್ಷೆ ಅನುಭವಿಸಿದರು. ಹೀಗಾಗಿ 2018ರ ಐಪಿಎಲ್ ಟೂರ್ನಿಯಿಂದ ಹೊರಗುಳಿದರು. 2019ರಲ್ಲಿ ಐಪಿಎಲ್ ಟೂರ್ನಿ ಆಡಿದರೂ ನಾಯಕತ್ವ ಜವಾಬ್ದಾರಿ ನೀಡಿರಲಿಲ್ಲ.
ಇದನ್ನೂ ಓದಿ: IPL 2020: ಮಾರ್ಚ್ 21 ರಿಂದ ಬೆಂಗಳೂರಲ್ಲಿ ಆರ್‌ಸಿಬಿ ಅಭ್ಯಾಸ
2018 ಹಾಗೂ 2019ರಲ್ಲಿ ಕೇನ್ ವಿಲಿಯಮ್ಸನ್ ಹಾಗೂ ಭುವನೇಶ್ವರ್ ಕುಮಾರ್ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಮತ್ತೆ ಡೇವಿಡ್ ವಾರ್ನರ್‌ಗೆ ನಾಯಕ ಪಟ್ಟ ನೀಡಲಾಗಿದೆ. ವಾರ್ನರ್ ವಿಡಿಯೋ ಮೂಲಕ ನಾಯಕನ ಜವಾಬ್ದಾರಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. SRH ಅಧೀಕೃತ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.