IPL 2020 2ನೇ ಕ್ವಾಲಿಫೈಯರ್: ಟಾಸ್ ಗೆದ್ದ ಡೆಲ್ಲಿ

By Suvarna NewsFirst Published Nov 8, 2020, 7:02 PM IST
Highlights

ಐಪಿಎಲ್ ಟೂರ್ನಿ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗುತ್ತಿದೆ. ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿನ ಬದಲಾವಣೆ ಏನು? ಇಲ್ಲಿವೆ.

ಅಬು ಧಾಬಿ(ನ.08): 13ನೇ ಆವೃತ್ತಿ ಫೈನಲ್ ಸುತ್ತಿಗೆ ಪ್ರವೇಶ ಪಡೆಯಲು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡ ಹೋರಾಟಕ್ಕೆ ಸಜ್ಜಾಗಿದೆ. 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಪ್ರವೀಣ್ ದುಬೆ ಹಾಗೂ ಶಿಮ್ರೊನ್ ಹೆಟ್ಮೆಯರ್ ತಂಡ ಸೇರಿಕೊಂಡಿದ್ದಾರೆ. ಇತ್ತ ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ

 

A look at the Playing XI for at

Updates - https://t.co/WGpwP2BIui pic.twitter.com/98a1yteQNM

— IndianPremierLeague (@IPL)

ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಮುಗ್ಗರಿಸಿತು. ಇತ್ತ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗೆಲುವು ಸಾಧಿಸಿ 2ನೇ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದಿತ್ತು.
 

click me!