ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಬೌಲಿಂಗ್‌ ಕೋಚ್‌ ಆಗಿ ಆಸೀಸ್ ಮಾಜಿ ವೇಗಿ ನೇಮಕ..!

Suvarna News   | Asianet News
Published : Aug 25, 2020, 07:09 PM IST
ಡೆಲ್ಲಿ  ಕ್ಯಾಪಿಟಲ್ಸ್‌ ತಂಡದ ಬೌಲಿಂಗ್‌ ಕೋಚ್‌ ಆಗಿ ಆಸೀಸ್ ಮಾಜಿ ವೇಗಿ ನೇಮಕ..!

ಸಾರಾಂಶ

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಬೌಲಿಂಗ್ ಕೋಚ್ ಆಗಿ ಆಸ್ಟ್ರೇಲಿಯಾದ ಮಾಜಿ ವೇಗಿ ಹಾಗೂ ಐಪಿಎಲ್ ಚಾಂಪಿಯನ್ ತಂಡದ ರೆಯಾನ್ ಹ್ಯಾರಿಸ್ ನೇಮಕವಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ದುಬೈ(ಆ.25): ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ರೆಯಾನ್ ಹ್ಯಾರಿಸ್ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನವೇ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡಿಕೊಂಡಿದ್ದು, ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಇದೀಗ ಜೇಮ್ಸ್‌ ಹೋಪ್ ಸ್ಥಾನವನ್ನು ರೆಯಾನ್ ಹ್ಯಾರಿಸ್ ತುಂಬಲಿದ್ದಾರೆ.

ಜೇಮ್ಸ್ ಹೋಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ವೈಯುಕ್ತಿಕ ಕಾರಣಗಳಿಂದಾಗಿ ಬೌಲಿಂಗ್ ಕೋಚ್ ಹುದ್ದೆಯಿಂದ ಹಿಂದೆ ಸರಿದಿದ್ದರಿಂದ ಇದೀಗ ಹ್ಯಾರಿಸ್ ಆ ಸ್ಥಾನವನ್ನು ತುಂಬಲಿದ್ದಾರೆ. 40 ವರ್ಷದ ರೆಯಾನ್ ಹ್ಯಾರಿಸ್ ಈಗಾಗಲೇ ಬೌಲಿಂಗ್ ಕೋಚ್‌ ಆಗಿ ಸಾಕಷ್ಟು ಅನುಭವ ಹೊಂದಿದ್ದಾರೆ. ಬ್ರಿಸ್ಬೇನ್ ಹೀಟ್ ತಂಡದ ಬೌಲಿಂಗ್ ಕೋಚ್ ಆಗಿಯೂ ಹ್ಯಾರಿಸ್ ಸೈ ಎನಿಸಿಕೊಂಡಿದ್ದರು. ಬಳಿಕ 2019ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡಕ್ಕೂ ಬೌಲಿಂಗ್ ಕೋಚ್ ಆಗಿ ತಮ್ಮ ಅನುಭವವನ್ನು ಧಾರೆ ಎರೆದಿದ್ದರು. ಇದೀಗ ಹ್ಯಾರಿಸ್, ಆಸೀಸ್ ಮಾಜಿ ನಾಯಕ ಹಾಗೂ ಡೆಲ್ಲಿ ಕೋಚ್ ರಿಕಿ ಪಾಂಟಿಂಗ್, ಮೊಹಮ್ಮದ್ ಕೈಫ್, ಸಾಮ್ಯುಯಲ್ ಬದ್ರಿ ಮತ್ತು ವಿಜಯ್ ದಹಿಯಾ ಅವರೊಂದಿಗೆ ಕಾರ್ಯ ನಿರ್ವಹಿಸಲಿದ್ದಾರೆ.

ರಾಹುಲ್ ದ್ರಾವಿಡ್ ನನಗೆಲ್ಲಾ ಸ್ವಾತಂತ್ರ್ಯವನ್ನು ನೀಡಿದ್ದರು ಎಂದ ಟೀಂ ಇಂಡಿಯಾ ಯುವ ಪ್ರತಿಭೆ..!

ನಾನು ಐಪಿಎಲ್‌ಗೆ ಮರಳುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಇದೊಂದು ಅತ್ಯುತ್ತಮ ಅವಕಾಶವಾಗಿದ್ದು ಡೆಲ್ಲಿ ತಂಡಕ್ಕೆ ಚೊಚ್ಚಲ ಕಪ್ ಜಯಿಸಲು ನನ್ನೆಲ್ಲ ಅನುಭವವನ್ನು ಧಾರೆ ಎರೆಯುತ್ತೇನೆ. ಡೆಲ್ಲಿ ತಂಡ ಉತ್ತಮ ಬೌಲಿಂಗ್ ಪಡೆಯನ್ನು ಹೊಂದಿದ್ದು ಅವರೊಂದಿಗೆ ಕೆಲಸ ಮಾಡಲು ನಾನು ತುದಿಗಾಲಿನಲ್ಲಿ ನಿಂತಿದ್ದೇನೆ ಎಂದು ಹೇಳಿದ್ದಾರೆ.

ರೆಯಾನ್ ಹ್ಯಾರಿಸ್ ಆಸ್ಟ್ರೇಲಿಯಾ ತಂಡದ ಪರ 51 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ರೆಯಾನ್ ಹ್ಯಾರಿಸ್ ಐಪಿಎಲ್ ಚಾಂಪಿಯನ್ ತಂಡದ ಸದಸ್ಯರು ಹೌದು. 2009ರಲ್ಲಿ ಡೆಕ್ಕನ್ ಚಾರ್ಜರ್ಸ್ ತಂಡ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆ ತಂಡದ ಪ್ರಮುಖ ಬೌಲರ್‌ ಆಗಿ ಹ್ಯಾರಿಸ್ ಗುರುತಿಸಿಕೊಂಡಿದ್ದರು.  

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?
ಜಡ್ಡು ಬಿಟ್ಟುಕೊಟ್ಟು ಮರಿ ಜಡೇಜಾಗೆ 14.2 ಕೋಟಿ ಖರ್ಚು ಮಾಡಿದ ಸಿಎಸ್‌ಕೆ! ಯಾರು ಈ ಪ್ರಶಾಂತ್ ವೀರ್?