ಐಪಿಎಲ್ 2020: ಬೆಟ್ಟಿಂಗ್‌ ತಡೆಗೆ ಕಠಿಣ ಹೆಜ್ಜೆ ಇಟ್ಟ ಬಿಸಿಸಿಐ

By Suvarna NewsFirst Published Sep 17, 2020, 12:54 PM IST
Highlights

ಈ ಬಾರಿಯ ಐಪಿಎಲ್ ವೇಳೆ ಬೆಟ್ಟಿಂಗ್ ಹಾಗೂ ಮ್ಯಾಚ್‌ ಫಿಕ್ಸಿಂಗ್ ಮೇಲೆ ಹದ್ದಿನ ಕಣ್ಣಿಡಲು ಬಿಸಿಸಿಐ ಮುಂದಾಗಿದೆ. ಇದಕ್ಕಾಗಿ ಬಿಸಿಸಿಐ ಲಂಡನ್‌ ಮೂಲದ ಸ್ಪೋರ್ಟ್‌ ರಡಾರ್‌ ಎಂಬ ಕಂಪನಿಯ ಜೊತೆ ಬಿಸಿಸಿಐ ಒಪ್ಪಂದ ಮಾಡಿಕೊಂಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ನವದೆಹಲಿ(ಸೆ.17): ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) 13ನೇ ಆವೃತ್ತಿಯಲ್ಲಿ ಯಾವುದೇ ಕಾರಣಕ್ಕೂ ಬೆಟ್ಟಿಂಗ್‌, ಸ್ಪಾಟ್‌ ಫಿಕ್ಸಿಂಗ್‌, ಮ್ಯಾಚ್‌ ಫಿಕ್ಸಿಂಗ್‌ ನಂತಹ ಪ್ರಕರಣಗಳು ಮರುಕಳುಹಿಸಬಾರದು ಎಂಬ ಕಾರಣಕ್ಕಾಗಿ ಈ ಬಾರಿ ಬಿಸಿಸಿಐ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಕಾರಣಕ್ಕಾಗಿ ಬಿಸಿಸಿಐ ಲಂಡನ್‌ ಮೂಲದ ಸ್ಪೋರ್ಟ್‌ ರಡಾರ್‌ ಎಂಬ ಕಂಪನಿಯ ಜೊತೆ ಒಪ್ಪಂದ ಮಾಡಿಕೊಂಡಿದೆ.

ಈಗಾಗಲೇ ಅಜಿತ್‌ ಸಿಂಗ್‌ ನೇತೃತ್ವದ ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ಘಟಕ(ಎಸಿಯು) ಈ ಕಂಪನಿಯ ಜೊತೆ ಒಪ್ಪಂದಕ್ಕೆ ಸಹಿ ಮಾಡಿದೆ. ಲಂಡನ್‌ನ ಈ ಸಂಸ್ಥೆಯ ತಜ್ಞರ ತಂಡ ಐಪಿಎಲ್‌ ಪಂದ್ಯದ ವೇಳೆಯಲ್ಲಿ ಅಕ್ರಮವಾಗಿ ನಡೆಯುವ ಬೆಟ್ಟಿಂಗ್‌, ಸ್ಪಾಟ್‌ ಫಿಕ್ಸಿಂಗ್‌, ಮ್ಯಾಚ್‌ ಫಿಕ್ಸಿಂಗ್‌ ನಂತಹ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಬಿಸಿಸಿಐನ ಎಸಿಯು ತಂಡದ ಜೊತೆಗೂಡಿ ಕಾರ್ಯಾಚರಣೆ ನಡೆಸಲಿದೆ. ಕಾರ್ಯಾಚರಣೆಗೆ ಪ್ರಸ್ತುತ ಲಭ್ಯವಿರುವ ಎಲ್ಲಾ ತಂತ್ರಜ್ಞಾನಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಮುಂಬೈ ವಿರುದ್ಧದ ಮೊದಲ ಪಂದ್ಯಕ್ಕೆ ಋುತುರಾಜ್‌ ಅನುಮಾನ

ದುಬೈ: ಎರಡನೇ ಬಾರಿಯ ಪರೀಕ್ಷೆಯಲ್ಲಿಯೂ ಕೊರೋನಾ ಸೋಂಕು ದೃಢ ಪಟ್ಟಿರುವ ಹಿನ್ನೆಲೆಯಲ್ಲಿ ಮತ್ತೆ ಕ್ವಾರಂಟೈನ್‌ ಆಗಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ಬ್ಯಾಟ್ಸ್‌ಮನ್‌ ಋುತುರಾಜ್‌ ಗಾಯಕ್ವಾಡ್‌ ಮುಂಬೈ ವಿರುದ್ಧದ ಮೊದಲ ಪಂದ್ಯಕ್ಕೆ ಲಭ್ಯರಾಗುವುದು ಅನುಮಾನವಾಗಿದೆ ಎಂದು ಸಿಇಒ ಕಾಶಿ ವಿಶ್ವನಾಥನ್‌ ತಿಳಿಸಿದ್ದಾರೆ.

ಐಪಿಎಲ್‌ ಕಣದಲ್ಲಿ ‘ಧಾರವಾಡದ ಹುಡುಗ’: ಅಪ್ಪಟ ಉತ್ತರ ಕರ್ನಾಟಕದ ಪ್ರತಿಭೆ

ಈ ಬಗ್ಗೆ ಬುಧವಾರ ಮಾಹಿತಿ ನೀಡಿರುವ ಅವರು, ಋುತುರಾಜ್‌ ಪಂದ್ಯ ಲಭ್ಯತೆಯ ಬಗ್ಗೆ ಇನ್ನೂ ಬಿಸಿಸಿಐನ ವೈದ್ಯಕೀಯ ತಂಡ ಗ್ರೀನ್‌ ಸಿಗ್ನಲ್‌ ನೀಡಿಲ್ಲ. ಋುತುರಾಜ್‌ ಕ್ವಾರಂಟೈನ್‌ ಆಗಿದ್ದಾರೆ. ಬಹುಶಃ ಮೊದಲ ಪಂದ್ಯಕ್ಕೆ ಅವರು ಲಭ್ಯರಾಗುವುದು ಅನುಮಾನವಾಗಿದೆ. ಆದಷ್ಟುಬೇಗ ಗುಣಮುಖರಾಗಿ ತಂಡ ಸೇರಿಕೊಳ್ಳುತ್ತಾರೆನ್ನುವ ವಿಶ್ವಾಸವಿದೆ ಎಂದಿದ್ದಾರೆ. ಸೆ.19ರಂದು ಅಬು ಧಾಬಿಯಲ್ಲಿ ಆರಂಭಗೊಳ್ಳಲಿರುವ ಐಪಿಎಲ್‌ 13ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಮುಂಬೈ ಇಂಡಿಯನ್ಸ್‌ ತಂಡವನ್ನು ಎದುರಿಸಲಿದೆ.
 

click me!