ಮುಂಬೈಗೆ ವಾರ್ನರ್ ಪಡೆ ಸೋಲುಣಿಸಬಹುದು; ಭವಿಷ್ಯ ನುಡಿದ ಲಾರಾ..!

Suvarna News   | Asianet News
Published : Nov 03, 2020, 06:20 PM IST
ಮುಂಬೈಗೆ ವಾರ್ನರ್ ಪಡೆ ಸೋಲುಣಿಸಬಹುದು; ಭವಿಷ್ಯ ನುಡಿದ ಲಾರಾ..!

ಸಾರಾಂಶ

ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ತಂಡ ಗೆಲ್ಲುವ ಸಾಧ್ಯತೆಯಿದೆ ಎಂದು ವಿಂಡೀಸ್ ದಿಗ್ಗಜ ಬ್ಯಾಟ್ಸ್‌ಮನ್‌ ಬ್ರಿಯಾನ್ ಲಾರಾ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಶಾರ್ಜಾ(ನ.03): ಡೇವಿಡ್ ವಾರ್ನರ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವಿಂದು(ನ.03) 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹೈದರಾಬಾದ್ ತಂಡ ಪ್ಲೇ ಆಫ್‌ ಪ್ರವೇಶಿಸಬೇಕಿದ್ದರೆ ಮುಂಬೈ ವಿರುದ್ಧ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಇನ್ನು ವೆಸ್ಟ್ ಇಂಡೀಸ್‌ನ ಮಾಜಿ ದಿಗ್ಗಜ ಕ್ರಿಕೆಟಿಗ ಬ್ರಿಯಾನ್ ಲಾರಾ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡಕ್ಕೆ ತಿರುಗೇಟು ನೀಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಉತ್ತಮ ಲಯದಲ್ಲಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಹಾಲಿ ಚಾಂಪಿಯನ್‌ ಜಯದ ನಾಗಾಲೋಟಕ್ಕೆ ಬ್ರೇಕ್ ಹಾಕಬಹುದು ಎಂದು ಲಾರಾ ಹೇಳಿದ್ದಾರೆ.

ಐಪಿಎಲ್ ಅಭಿಮಾನಿಗಳಿಗೆ ವಿಶೇಷ ಸಂದೇಶ ಕಳಿಸಿದ ಯೂನಿವರ್ಸೆಲ್ ಬಾಸ್..!

ಸನ್‌ರೈಸರ್ಸ್ ಹೈದರಾಬಾದ್ ತಂಡ ಇತ್ತೀಚೆಗೆ ಉತ್ತಮ ಪ್ರದರ್ಶನ ನೀಡುತ್ತಿದೆ. ಹೈದರಾಬಾದ್ ಆಟಗಾರರು ಲಯ ಕಂಡುಕೊಂಡಿದ್ದಾರೆ. ಇನ್ನು ಈಗಾಗಲೇ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆಗಿಟ್ಟಿಸಿಕೊಂಡಿರುವುದರಿಂದ ಮುಂಬೈ ಇಂಡಿಯನ್ಸ್ ತಂಡ ಇವತ್ತಿನ ಪಂದ್ಯಕ್ಕೆ ಕೆಲವು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಹೀಗಾದಲ್ಲಿ ಇದು ಸನ್‌ರೈಸರ್ಸ್ ಗೆಲುವಿಗೆ ನೆರವಾಗಲಿದೆ ಎಂದು ಸ್ಟಾರ್ ಸ್ಪೋರ್ಟ್ಸ್ ಮಾತುಕತೆ ವೇಳೆ ಲಾರಾ ಅಭಿಪ್ರಾಯಪಟ್ಟಿದ್ದಾರೆ.

ಸದ್ಯ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಈಗಾಗಲೇ ಪ್ಲೇ ಆಫ್‌ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಇನ್ನು 14 ಅಂಕ ಹೊಂದಿರುವ ಕೋಲ್ಕತ ತಂಡ ಪ್ಲೇ ಆಫ್‌ ಸ್ಥಾನವನ್ನು ಖಚಿತಪಡಿಸಿಕೊಂಡಿಲ್ಲ. ಡೇವಿಡ್ ವಾರ್ನರ್ ಪಡೆ 12 ಅಂಕ ಹೊಂದಿದ್ದು, ಇಂದಿನ ಪಂದ್ಯವನ್ನು ಜಯಿಸಿದರೆ, ಕೆಕೆಆರ್ ತಂಡವನ್ನು ಹಿಂದಿಕ್ಕಿ ಪ್ಲೇ ಆಫ್‌ಗೆ ಹೈದರಾಬಾದ್ ಅರ್ಹತೆಗಿಟ್ಟಿಸಿಕೊಳ್ಳಲಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆರ್‌ಸಿಬಿ ಮ್ಯಾಚ್ ಬೆಂಗಳೂರು ಬಿಟ್ ಎಲ್ಲಿಗೂ ಶಿಫ್ಟ್ ಆಗೊಲ್ಲ! ಮಹತ್ವದ ಅಪ್‌ಡೇಟ್ಸ್‌ ಕೊಟ್ಟ ಬೆಂಗಳೂರು ಫ್ರಾಂಚೈಸಿ
ಸಂಜು ಸ್ಯಾಮ್ಸನ್ ಬ್ಯಾಟರ್‌ ಆಗಿ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಅಗತ್ಯವೇ ಇರಲಿಲ್ಲ ಎಂದ ಮಾಜಿ ಕ್ರಿಕೆಟಿಗ! ಹೀಗೆ ಹೇಳಲು ಕಾರಣವೂ ಇದೆ