
ದುಬೈ(ಆ.31): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿ ಜನವರಿ ವೇಳೆಗೆ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಇನ್ನು ಮುಂದೆ ತಾವು ಮೂರು ಮಂದಿ ಎನ್ನುವ ಸಿಹಿ ಸುದ್ದಿಯನ್ನು ವಿರುಷ್ಕಾ ಜೋಡಿ ನೀಡಿತ್ತು.
ಇದೀಗ 13ನೇ ಆವೃತ್ತಿಯ ಐಪಿಎಲ್‌ಗೆ ಸಜ್ಜಾಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸರ್ಫ್ರೈಸ್ ಆಗಿ ಕೇಕ್ ಕಟ್ ಮಾಡಿಸುವ ಮೂಲಕ ವಿರುಷ್ಕಾ ಜೋಡಿಯ ಖುಷಿ ಹೆಚ್ಚಾಗುವಂತೆ ಮಾಡಿದೆ.
ಇದೇ ವೇಳೆ ಕಳೆದ ತಿಂಗಳಷ್ಟೇ ಎಂಗೇಜ್‌ಮೆಂಟ್ ಮಾಡಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಪಿನ್ನರ್ ಯುಜುವೇಂದ್ರ ಚಹಲ್ ಹಾಗೂ ಧನುಶ್ರೀ ವರ್ಮಾ ಅವರಿಂದಲೂ ಕೇಕ್ ಕಟ್ ಮಾಡಿಸಲಾಯಿತು.
ಆಗಸ್ಟ್ 27ರಂದು ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ದಂಪತಿ ತಾವು ಇನ್ನು ಮುಂದೆ ಇಬ್ಬರಲ್ಲ, ಮೂವರು ಎನ್ನುವ ಸಿಹಿಸುದ್ದಿಯನ್ನು ಸಾಮಾಜಿಕ ಜಾಲತಾಣದ ಮೂಲಕ ಅನಾವರಣ ಮಾಡಿದ್ದರು. ಇದರ ಬೆನ್ನಲ್ಲೇ ಈ ತಾರಾ ಜೋಡಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದ್ದವು.
ವಿರಾಟ್‌ಗೆ ಕಾಕಾ ಎಂದು ಭಾರತೀಯರ ಹೃದಯ ಕದ್ದ ಗೇಲ್
ಅನುಷ್ಕಾ ಶರ್ಮಾ-ವಿರಾಟ್ ಕೊಹ್ಲಿ ಶಾಂಪೂವೊಂದರ ಜಾಹಿರಾತಿನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಹಲವು ಸಲ ಡೇಟಿಂಗ್ ನಡೆಸಿ ಅಂತಿಮವಾಗಿ 2017ರಲ್ಲಿ ಈ ಜೋಡಿ ಇಟಲಿಯಲ್ಲಿ ಸಪ್ತಪದಿ ತುಳಿದಿತ್ತು. ಬಳಿಕ ದೆಹಲಿ ಹಾಗೂ ಮುಂಬೈನಲ್ಲಿ ಅದ್ಧೂರಿ ಆರತಕ್ಷತೆಯನ್ನು ಹಮ್ಮಿಕೊಂಡಿತ್ತು. ಈ ಸಮಾರಂಭಕ್ಕೆ ಹಲವು ಬಾಲಿವುಡ್ ತಾರೆಯರು ಹಾಗೂ ಕ್ರಿಕೆಟಿಗರು ಸಾಕ್ಷಿಯಾಗಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.