
ದುಬೈ(ಸೆ.12): ಚೆನ್ನೈ ಸೂಪರ್ ಕಿಂಗ್ಸ್‌ನ ವೇಗದ ಬೌಲರ್ ದೀಪಕ್ ಚಹರ್ ಕೊರೋನಾದಿಂದ ಸಂಪೂರ್ಣ ಗುಣಮುಖರಾಗಿದ್ದು, ಶುಕ್ರವಾರದಿಂದ ಅಭ್ಯಾಸ ಆರಂಭಿಸಿದ್ದಾರೆ.
2 ಬಾರಿ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದ ಬಳಿಕ, ಬುಧವಾರ ದೀಪಕ್‌ರನ್ನು ಬಯೋ ಸೆಕ್ಯೂರ್ ವಾತಾವರಣದೊಳಗೆ ಪ್ರವೇಶಿಸಲು ಅನುಮತಿ ನೀಡಲಾಗಿತ್ತು. ಬಿಸಿಸಿಐ ನಿಯಮದ ಪ್ರಕಾರ ದೀಪಕ್ ಕಾರ್ಡಿಯೋ ವ್ಯಾಸ್ಕುಲಾರ್ ಪರೀಕ್ಷೆಗೆ ಒಳಗಾಗಿದ್ದರು. ಅದರ ವರದಿಯಲ್ಲೂ ಯಾವುದೇ ಸಮಸ್ಯೆಯಿಲ್ಲದಿರುವುದು ದೃಢಪಟ್ಟ ಬಳಿಕ ಅಭ್ಯಾಸಕ್ಕೆ ಹಾಜರಾಗಲು ಅನುಮತಿ ನೀಡಲಾಗಿದೆ.
IPL 2020: CSK ನಿಟ್ಟುಸಿರು, ದೀಪಕ್ ಚಹಾರ್ ಕೊರೋನಾ ಟೆಸ್ಟ್ ನೆಗೆಟಿವ್..!
ದೀಪಕ್ ಚಹರ್ ಲಭ್ಯತೆ ಮೂರು ಬಾರಿಯ ಐಪಿಎಲ್ ಚಾಂಪಿಯನ್ ತಂಡ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ಈಗಾಗಲೇ ಧೋನಿ ನೇತೃತ್ವದ ಸಿಎಸ್‌ಕೆ ತಂಡದಿಂದ ಅನುಭವಿ ಕ್ರಿಕೆಟಿಗರಾದ ಸುರೇಶ್ ರೈನಾ ಹಾಗೂ ಹರ್ಭಜನ್ ಸಿಂಗ್ ವೈಯುಕ್ತಿಕ ಕಾರಣ ನೀಡಿ ಹಿಂದೆ ಸರಿದಿದ್ದರು.
13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಸಿಎಸ್‌ಕೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.