ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಕೊರೋನಾ ಟೆಸ್ಟ್‌ಗೆ ಒಳಗಾಗಿದ್ದರು. ಇದೀಗ ಕೊರೋನಾ ಟೆಸ್ಟ್ ರಿಪೋರ್ಟ್ ಹೊರಬಿದ್ದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ರಾಂಚಿ(ಆ.13): 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್ 2020) ಟೂರ್ನಿಯಲ್ಲಿ ಪಾಲ್ಗೊಳ್ಳುವ ಮುನ್ನ ಎಲ್ಲಾ 8 ತಂಡಗಳ ಆಟಗಾರರು ಕಡ್ಡಾಯವಾಗಿ ಕೋವಿಡ್ 19 ಟೆಸ್ಟ್‌ಗೆ ಒಳಗಾಗಬೇಕಾಗಿದೆ. ಬಿಸಿಸಿಐ ಮಾರ್ಗಸೂಚಿಯನ್ವಯ ಬುಧವಾರ(ಆ.12)ದಂದು ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂ. ಎಸ್. ಧೋನಿ ಕೊರೋನಾ ಟೆಸ್ಟ್‌ಗೆ ಒಳಗಾಗಿದ್ದರು. ಅದರ ಫಲಿತಾಂಶವೀಗ ಹೊರಬಿದ್ದಿದೆ.
ಆಂಗ್ಲ ಸುದ್ದಿಮಾಧ್ಯಮ ಇಂಡಿಯಾ ಟುಡೆ ವೆಬ್‌ಸೈಟ್ ವರದಿ ಪ್ರಕಾರ, ಇಂದು(ಆ.13) ಧೋನಿಯವರ ಕೊರೋನಾ ಟೆಸ್ಟ್ ಫಲಿತಾಂಶ ನೆಗೆಟಿವ್ ಬಂದಿದೆ. ಇದೀಗ ಧೋನಿ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಳ್ಳಲು ಚೆನ್ನೈಗೆ ತೆರಳಲಿದ್ದಾರೆ. ಆಗಸ್ಟ್ 15ರಿಂದ 20ರವರೆಗೂ ಚೆನ್ನೈನ ಚೆಪಾಕ್ ಮೈದಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಭ್ಯಾಸ ನಡೆಸಲಿದ್ದು, ಆ ಬಳಿಕ ಆಗಸ್ಟ್ 22ರಂದು ಯುಎಇಗೆ ಸಿಎಸ್‌ಕೆ ತಂಡ ವಿಮಾನ ಹತ್ತಲಿದೆ.
undefined
ಭಾರತದಲ್ಲಿ ನಡೆಯಬೇಕಿದ್ದ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಕೊರೋನಾ ಭೀತಿಯಿಂದಾಗಿ ಬಿಸಿಸಿಐ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ಸ್ಥಳಾಂತರಿಸಿದೆ. ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಟೂರ್ನಿ ಜರುಗಲಿದ್ದು, ಅಬುದಾಬಿ, ದುಬೈ ಹಾಗೂ ಶಾರ್ಜಾದಲ್ಲಿ ಪಂದ್ಯಾವಳಿಗಳು ನಡೆಯಲಿವೆ. ಆದರೆ ಇದುವರೆಗೂ ಐಪಿಎಲ್ ವೇಳಾಪಟ್ಟಿ ಪ್ರಕಟವಾಗಿಲ್ಲ.
ಕೊರೋನಾ ಟೆಸ್ಟ್: ಸ್ಯಾಂಪಲ್ ನೀಡಿದ ಎಂ ಎಸ್ ಧೋನಿ, ಸದ್ಯದಲ್ಲೇ ಫಲಿತಾಂಶ ಪ್ರಕಟ
2019ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಸೆಮಿಫೈನಲ್ ಬಳಿಕ ಧೋನಿ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದಾರೆ. ಇದೀಗ ಮತ್ತೊಮ್ಮೆ ಧೋನಿ ಮೈದಾನಕ್ಕಿಳಿಯುವುದನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೂರು ಬಾರಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ನಾಲ್ಕನೇ ಕಪ್ ಮೇಲೆ ಕಣ್ಣಿಟ್ಟಿದೆ.