13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 26ನೇ ಪಂದ್ಯದಲ್ಲಿಂದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಎದುರು ಸೆಣಸಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ಅಬುಧಾಬಿ(ಅ.11): ಐಪಿಎಲ್ ಟೂರ್ನಿಯ ಅಂಕಪಟ್ಟಿಯಲ್ಲಿ ಅಗ್ರ ಎರಡು ಸ್ಥಾನಗಳಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್, ಭಾನುವಾರ ಇಲ್ಲಿನ ಶೇಖ್ ಜಾಯೆದ್ ಮೈದಾನದಲ್ಲಿ ಮುಖಾಮುಖಿಯಾಗಲಿವೆ.
ಮೊದಲ ಸ್ಥಾನವನ್ನು ಮತ್ತಷ್ಟು ಗಟ್ಟಿಮಾಡಿಕೊಳ್ಳುವ ನಿಟ್ಟಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಚಿತ್ತವನ್ನು ನೆಟ್ಟಿದ್ದರೆ, ಬಲಿಷ್ಠ ಡೆಲ್ಲಿ ತಂಡಕ್ಕೆ ಟಕ್ಕರ್ ನೀಡಿ ಅಗ್ರಸ್ಥಾನಕ್ಕೇರುವ ಉತ್ಸಾಹದಲ್ಲಿದೆ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್.
ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಇದುವರೆಗೂ ಟೂರ್ನಿಯಲ್ಲಿ 6 ಪಂದ್ಯಗಳನ್ನಾಡಿ ಈ ಪೈಕಿ 5 ಗೆಲುವು ಹಾಗೂ 1 ಸೋಲಿನೊಂದಿಗೆ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಆಡಿದ 6 ಪಂದ್ಯಗಳ ಪೈಕಿ 4 ಗೆಲುವು ಹಾಗೂ 2 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
undefined
ಐಪಿಎಲ್ 2020: ರಾಜಸ್ಥಾನ ರಾಯಲ್ಸ್‌ಗಿಂದು ಸನ್‌ರೈಸರ್ಸ್ ಸವಾಲು..!
ಕಳೆದ ಮೂರು ಪಂದ್ಯಗಳಲ್ಲಿ ಉಭಯ ತಂಡಗಳು ಕ್ರಮವಾಗಿ ಹ್ಯಾಟ್ರಿಕ್ ಗೆಲುವನ್ನು ಸಾಧಿಸಿದ್ದು, ಇಂದಿನ ಪಂದ್ಯ ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವ ಸಾಧ್ಯತೆಯಿದೆ. ಈಗಾಗಲೇ ಡೆಲ್ಲಿ ತಂಡಕ್ಕೆ ಆರಂಭಿಕರಾದ ಪೃಥ್ವಿ ಶಾ ಹಾಗೂ ಶಿಖರ್ ಧವನ್ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಶಿಮ್ರೋನ್ ಹೆಟ್ಮೇಯರ್ ಹಾಗೂ ಮಾರ್ಕಸ್ ಸ್ಟೋನಿಸ್ ಬ್ಯಾಟಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಬೌಲಿಂಗ್‌ನಲ್ಲಿ ಕಗಿಸೋ ರಬಾಡ, ಆನ್ರಿಚ್ ನೋರ್ಜೆ ಸ್ಪಿನ್ನರ್‌ಗಳಾದ ಆರ್. ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ಶಿಸ್ತು ಬದ್ಧ ದಾಳಿ ಸಂಘಟಿಸುತ್ತಿದ್ದಾರೆ.
ಇನ್ನು ಮುಂಬೈ ಇಂಡಿಯನ್ಸ್ ಕೂಡಾ ಸಾಕಷ್ಟು ಬಲಿಷ್ಠವಾಗಿದ್ದು,ರೋಹಿತ್ ಹಾಗೂ ಡಿಕಾಕ್ ಉತ್ತಮ ಆರಂಭ ಒದಗಿಸಿದರೆ, ಮಧ್ಯಮ ಕ್ರಮಾಂಕದಲ್ಲಿ ಸೂರ್ಯ ಕುಮಾರ್ ಯಾಧವ್, ಇಶನ್ ಕಿಶನ್, ಕಿರಾನ್ ಪೊಲ್ಲಾರ್ಡ್, ಪಾಂಡ್ಯ ಬ್ರದರ್ಸ್ ರನ್ ಮಳೆ ಹರಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಇನ್ನು ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ ಹಾಗೂ ಜೇಮ್ಸ್ ಪ್ಯಾಟಿನ್‌ಸನ್ ಮಾರಕ ದಾಳಿ ನಡೆಸುವ ಸಾಮರ್ಥ್ಯವನ್ನು ಹೊಂದಿದ್ದಾರೆ.
ಪಂದ್ಯ ಆರಂಭ: ಸಂಜೆ 7.30ಕ್ಕೆ
ಸ್ಥಳ: ಅಬುಧಾಬಿ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್