
ದುಬೈ(ಅ.31): ಆರಂಭದಲ್ಲಿ ಅಬ್ಬರಿಸಿ ನಿರ್ಣಾಯಕ ಘಟ್ಟದಲ್ಲಿ ಲಯ ಕಳೆದುಕೊಂಡು ಸತತ 3 ಸೋಲು ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್, ಶನಿವಾರ ಇಲ್ಲಿ ನಡೆಯಲಿರುವ ಪಂದ್ಯದಲ್ಲಿ ಈಗಾಗಲೇ ಪ್ಲೇ-ಆಫ್‌ಗೆ ಅರ್ಹತೆ ಗಿಟ್ಟಿಸಿರುವ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.
ಡೆಲ್ಲಿ 12 ಪಂದ್ಯಗಳಿಂದ 14 ಅಂಕ ಗಳಿಸಿದ್ದು, ಪ್ಲೇ-ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಲು ಬಾಕಿ ಇರುವ 2 ಪಂದ್ಯಗಳಲ್ಲಿ ಒಂದರಲ್ಲಿ ಗೆಲ್ಲಬೇಕಿದೆ. ಎರಡರಲ್ಲೂ ಸೋತರೆ ನೆಟ್ ರನ್‌ರೇಟ್ ಲೆಕ್ಕಾಚಾರ ಪರಿಗಣನೆಗೆ ಬರಲಿದ್ದು, ಡೆಲ್ಲಿ ಹೊರಬಿದ್ದರೂ ಬೀಳಬಹುದು. ಅಂತಹ ಸ್ಥಿತಿ ತಲುಪುವುದನ್ನು ತಪ್ಪಿಸಿಕೊಳ್ಳಲು ಶ್ರೇಯಸ್ ಅಯ್ಯರ್ ಪಡೆ ಎದುರು ನೋಡುತ್ತಿದೆ. ಮತ್ತೊಂದೆಡೆ ಮುಂಬೈ ಉಳಿದಿರುವ 2 ಪಂದ್ಯಗಳಲ್ಲಿ ಜಯಿಸಿ, ಅಗ್ರಸ್ಥಾನ ಭದ್ರಪಡಿಸಿಕೊಳ್ಳುವ ಗುರಿ ಹೊಂದಿದೆ.
ಸ್ಟೋಕ್ಸ್, ಸ್ಯಾಮ್ಸನ್ ಆಟದೆದಿರು ಗೇಲ್ ಅಬ್ಬರ ಥಂಡಾ; ಗೆದ್ದು ಬೀಗಿದ ರಾಜಸ್ಥಾನ
ಪಿಚ್ ರಿಪೋರ್ಟ್: ಇಲ್ಲಿ 2 ದಿನಗಳ ಹಿಂದೆ ನಡೆದ ಚೆನ್ನೈ-ಕೆಕೆಆರ್ ಪಂದ್ಯದಲ್ಲಿ ಪಿಚ್ ನಿಧಾನಗತಿಯಲ್ಲಿದ್ದಿದ್ದು ಸ್ಪಷ್ಟವಾಗಿತ್ತು. ಹೀಗಾಗಿ, ಕ್ರೀಸ್‌ನಲ್ಲಿ ನೆಲೆಯೂರಿ ಆಡುವ ಬ್ಯಾಟ್ಸ್‌ಮನ್‌ಗಳ ಪಾತ್ರ ಮಹತ್ವದಾಗಲಿದೆ. 160-170 ಉತ್ತಮ ಮೊತ್ತ.
ಸಂಭವನೀಯ ಆಟಗಾರರ ಪಟ್ಟಿ
ಮುಂಬೈ ಇಂಡಿಯನ್ಸ್: ಕ್ವಿಂಟನ್ ಡಿ ಕಾಕ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಕೀರಾನ್ ಪೊಲ್ಲಾರ್ಡ್(ನಾಯಕ), ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ.
ಡೆಲ್ಲಿ ಕ್ಯಾಪಿಟಲ್ಸ್: ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್(ನಾಯಕ), ರಿಷಭ್ ಪಂತ್, ಶಿಮ್ರೋನ್ ಹೆಟ್ಮೇಯರ್, ಮಾರ್ಕಸ್ ಸ್ಟೋಯ್ನಿಸ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೋ ರಬಾಡ, ಆನ್ರಿಚ್ ನೋಕಿಯಾ, ತುಷಾರ್ ದೇಶಪಾಂಡೆ.
ಸ್ಥಳ: ದುಬೈ,
ಪಂದ್ಯ ಆರಂಭ: ಮಧ್ಯಾಹ್ನ 3.30ಕ್ಕೆ,
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.