ಚೆನ್ನೈ ಎದುರು ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾದ ಪಂಜಾಬ್

Kannadaprabha News   | Asianet News
Published : Nov 01, 2020, 09:18 AM IST
ಚೆನ್ನೈ ಎದುರು ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾದ ಪಂಜಾಬ್

ಸಾರಾಂಶ

13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಸೂಪರ್ ಸಂಡೇಯ ಮೊದಲ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಅಬು​ಧಾ​ಬಿ(ನ.01): ಐಪಿಎಲ್‌ ಪ್ಲೇ-ಆಫ್‌ ಲೆಕ್ಕಾ​ಚಾರ ರೋಚ​ಕ​ಗೊ​ಳ್ಳು​ತ್ತಿದ್ದು, ಕಿಂಗ್ಸ್‌ ಇಲೆ​ವೆನ್‌ ಪಂಜಾಬ್‌ ತಂಡದ ಭವಿಷ್ಯ ಭಾನು​ವಾರ ನಿರ್ಧಾರವಾಗ​ಲಿದೆ. 

ಈಗಾ​ಗಲೇ ಪ್ಲೇ-ಆಫ್‌ ರೇಸ್‌ನಿಂದ ಹೊರ​ಬಿ​ದ್ದಿ​ರುವ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಸೆಣ​ಸ​ಲಿರುವ ಪಂಜಾಬ್‌, ಗೆಲು​ವಿನ ನಿರೀಕ್ಷೆಯಲ್ಲಿದೆ. ಕಳೆದ ಪಂದ್ಯ​ದಲ್ಲಿ ರಾಜ​ಸ್ಥಾನ ವಿರುದ್ಧ ಸೋಲುಂಡಿದ್ದು ಕೆ.ಎಲ್‌.ರಾ​ಹುಲ್‌ ಪಡೆಗೆ ಹಿನ್ನಡೆ ಉಂಟು ಮಾಡಿದೆ. ಈ ಪಂದ್ಯ​ದಲ್ಲಿ ಜಯಿ​ಸಿ​ದರೂ, ಪ್ಲೇ-ಆಫ್‌ನಲ್ಲಿ ಸ್ಥಾನ ಖಚಿತವಾಗು​ವು​ದಿಲ್ಲ. ಇತರ ತಂಡಗಳ ಫಲಿ​ತಾಂಶ​ಕ್ಕಾಗಿ ಕಾಯ​ಬೇ​ಕಾ​ಗು​ತ್ತದೆ.

ಸದ್ಯ ಕಿಂಗ್ಸ್ ಇಲೆವನ್ ಪಂಜಾಬ್ ತಂಡ 13 ಪಂದ್ಯಗಳನ್ನಾಡಿದ್ದು, 6 ಗೆಲುವು ಹಾಗೂ 7 ಸೋಲುಗಳೊಂದಿಗೆ 12 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದ್ದರೆ, ಮತ್ತೊಂದೆಡೆ ಎಂ ಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 13 ಪಂದ್ಯಗಳನ್ನಾಡಿದ್ದು 5 ಗೆಲುವು ಹಾಗೂ 8 ಸೋಲುಗಳೊಂದಿಗೆ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಕರ್ನಾಟಕ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಕೋರಿದ ಆರ್‌ಸಿಬಿ...!

ಪಿಚ್‌ ರಿಪೋರ್ಟ್‌: ಹಿಂದಿನ ಪಂದ್ಯ​ದಲ್ಲಿ ದೊಡ್ಡ ಮೊತ್ತ ದಾಖ​ಲಾ​ಗಿತ್ತು. ಮೊದಲು ಫೀಲ್ಡ್‌ ಮಾಡುವ ತಂಡಕ್ಕೆ ಗೆಲ್ಲುವ ಅವ​ಕಾಶ ಹೆಚ್ಚಿ​ರ​ಲಿದೆ. ಟಾಸ್‌ ಪ್ರಮುಖ ಪಾತ್ರ ವಹಿ​ಸ​ಲಿದೆ.

ಸಂಭ​ವ​ನೀಯ ಆಟ​ಗಾ​ರರ ಪಟ್ಟಿ

ಕಿಂಗ್ಸ್ ಇಲೆವನ್ ಪಂಜಾಬ್‌: ಕೆ ಎಲ್ ರಾಹುಲ್‌, ಮನ್‌ದೀಪ್ ಸಿಂಗ್‌, ಕ್ರಿಸ್ ಗೇಲ್‌, ನಿಕೋಲಸ್ ಪೂರನ್‌, ಗ್ಲೆನ್ ಮ್ಯಾಕ್ಸ್‌ವೆಲ್‌, ದೀಪಕ್ ಹೂಡಾ, ಕ್ರಿಸ್ ಜೋರ್ಡನ್‌, ಮೊಹಮ್ಮದ್ ಶಮಿ, ರವಿ ಬಿಷ್ಣೋಯಿ, ಮುರುಗನ್ ಅಶ್ವಿನ್‌, ಅಶ್‌ರ್‍ದೀಪ್ ಸಿಂಗ್‌.

ಚೆನ್ನೈ ಸೂಪರ್ ಕಿಂಗ್ಸ್: ಋುತು​ರಾಜ್‌ ಗಾಯಕ್ವಾಡ್, ಶೇನ್ ವ್ಯಾಟ್ಸನ್‌, ಅಂಬಟಿ ರಾಯುಡು, ಎಂ ಎಸ್ ಧೋನಿ, ರವೀಂದ್ರ ಜಡೇಜಾ, ಸ್ಯಾಮ್ ಕರ್ರನ್‌, ಮಿಚೆಲ್ ಸ್ಯಾಂಟ್ನರ್‌, ಕರಣ್ ಶರ್ಮಾ‍, ದೀಪಕ್ ಚಹರ್‌, ಶಾರ್ದೂಲ್ ಠಾಕೂರ್‌, ಲುಂಗಿ ಎನ್‌ಗಿಡಿ.

ಸ್ಥಳ: ಅಬು​ಧಾಬಿ,

ಪಂದ್ಯ: ಮಧ್ಯಾಹ್ನ 3.30ಕ್ಕೆ

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆರು ಪಂದ್ಯಗಳ ಸೋಲಿನ ಬಳಿಕ ಮೊದಲ ಗೆಲುವಿನ ಬೆನ್ನಲ್ಲೇ ಅಚ್ಚರಿ ಹೇಳಿಕೆ ಕೊಟ್ಟ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ!
IPL 2026: ಕೋಲ್ಕತಾ ನೈಟ್ ರೈಡರ್ಸ್ ಗೆಲ್ಲಿಸಿ ಅಪರೂಪದ ದಾಖಲೆ ಬರೆದ ವರುಣ್ ಚಕ್ರವರ್ತಿ!