IPL 2020 ಫೈನಲ್: ಟಾಸ್ ಗೆದ್ದ ಡೆಲ್ಲಿ, ಮುಂಬೈ ತಂಡದಲ್ಲಿ 1 ಬದಲಾವಣೆ!

Published : Nov 10, 2020, 07:03 PM ISTUpdated : Nov 10, 2020, 09:55 PM IST
IPL 2020 ಫೈನಲ್: ಟಾಸ್ ಗೆದ್ದ ಡೆಲ್ಲಿ, ಮುಂಬೈ ತಂಡದಲ್ಲಿ 1 ಬದಲಾವಣೆ!

ಸಾರಾಂಶ

IPL 2020 ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಹೋರಾಟಕ್ಕೆ ಸಜ್ಜಾಗಿದೆ. ಪ್ರಶಸ್ತಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿನ ಬದಲಾವಣೆ ಏನು? ಇಲ್ಲಿದೆ ವಿವರ.

ದುಬೈ(ನ.10):  13ನೇ ಆವೃತ್ತಿ ಐಪಿಎಲ್ ಟ್ರೋಫಿ ಗೆಲ್ಲುವ ತಂಡ ಯಾವುದು ಅನ್ನೋದು ಕುತೂಹಲಕ್ಕೆ ಉತ್ತರ ಸಿಗಲಿದೆ. ಪ್ರಶಸ್ತಿಗಾಗಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಹೋರಾಟ ನಡೆಸಲಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಡೆಲ್ಲಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮುಂಬೈ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ರಾಹುಲ್ ಚಹಾರ್ ಬದಲು, ಜಯಂತ್ ಯಾದವ್ ತಂಡ ಸೇರಿಕೊಂಡಿದ್ದಾರೆ

ಲೀಗ್ ಹಂತದಲ್ಲಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಮುಂಬೈ ಇಂಡಿಯನ್ಸ್, 2ನೇ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 1ನೇ ಕ್ವಾಲಿಫೈಯರ್ ಪಂದ್ಯ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ. ಇತ್ತ ಡೆಲ್ಲಿ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿದೆ. ಡೆಲ್ಲಿ ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದರೆ, ಮುಂಬೈ ಇಂಡಿಯನ್ಸ್ 6ನೇ ಬಾರಿ ಈ ಸಾಧನೆ ಮಾಡಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2026ರ ಐಪಿಎಲ್ ಟೂರ್ನಿಗೂ ಮುನ್ನ ಆರ್‌ಸಿಬಿ ಫ್ಯಾನ್ಸ್‌ಗೆ ಸಿಹಿ ಸುದ್ದಿ! ಮಹತ್ವದ ಅಪ್‌ಡೇಟ್ಸ್ ಹಂಚಿಕೊಂಡ ಬೆಂಗಳೂರು ಫ್ರಾಂಚೈಸಿ
IPL 2026: ರಾಜಸ್ಥಾನ ರಾಯಲ್ಸ್‌ಗೆ ಅಚ್ಚರಿ ನಾಯಕನ ನೇಮಕ; ರವೀಂದ್ರ ಜಡೇಜಾಗೆ ಭಾರೀ ನಿರಾಸೆ