
ನವದೆಹಲಿ(ಸೆ.03): ಹಲವು ಸರ್ಕಸ್‌ಗಳ ಬಳಿಕ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆಯೋಜನೆಗೊಂಡಿದೆ. ಟೂರ್ನಿ ಆರಂಭ ಹಾಗೂ ಫೈನಲ್ ದಿನಾಂಕ ನಿಗದಿಯಾಗಿದ್ದರೂ ಇದುವರೆಗೂ ಬಿಸಿಸಿಐ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಚೆನ್ನೈ ಸೂಪರ್ ಕಿಂಗ್ಸ್ ಪಾಳಯದಲ್ಲಿ ಕೊರೋನಾತಂಕ ಇರುವುದರಿಂದ ಐಪಿಎಲ್ ಸಂಪೂರ್ಣ ವೇಳಾಪಟ್ಟಿ ಬಿಡುಗಡೆಯಾಗುತ್ತಿಲ್ಲ ಎನ್ನಲಾಗಿದೆ.
ಇದೀಗ ವೇಳಾಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಟೈಮ್ಸ್‌ನೌ ನ್ಯೂಸ್.ಕಾಂ ವರದಿಯ ಪ್ರಕಾರ ಇಂದು(ಸೆ.03) ಸಂಜೆ ಇಲ್ಲವೇ ನಾಳೆ ಅಂದರೆ ಶುಕ್ರವಾರದೊಳಗಾಗಿ 2020ನೇ ಸಾಲಿನ ಐಪಿಎಲ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಹೊರಬೀಳಲಿದೆ ಎಂದು ವರದಿ ಮಾಡಿದೆ.
ಈ ಮೊದಲೇ ನಿರ್ಣಯವಾದಂತೆ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಮಾರ್ಚ್ 29ರಿಂದ ಆರಂಭವಾಗಬೇಕಿತ್ತು. ಆದರೆ ಕೊರೋನಾ ಭೀತಿಯಿಂದಾಗಿ ಏಪ್ರಿಲ್ 15ರವರೆಗೆ ಮುಂದೂಡಲಾಗಿತ್ತು. ಆದರೆ ಕೊರೋನಾ ನಿಯಂತ್ರಣಕ್ಕೆ ಬಾರದೇ ಇದ್ದಿದ್ದರಿಂದ ಐಪಿಎಲ್ ಟೂರ್ನಿಯನ್ನು ಬಿಸಿಸಿಐ ಅನಿರ್ದಿಷ್ಠಾವಧಿಗೆ ಮುಂದೂಡಲಾಯಿತು. ಕೆಲವು ತಿಂಗಳುಗಳ ಬಳಿಕ ಐಸಿಸಿ ಕೂಡಾ ಟಿ20 ವಿಶ್ವಕಪ್ ಮುಂದೂಡಲು ತೀರ್ಮಾನಿಸಿದ್ದರಿಂದ ಬಿಸಿಸಿಐ ಕೊನೆಗೂ ಈ ಬಾರಿ ಐಪಿಎಲ್ ಆಯೋಜಿಸಲು ಸಜ್ಜಾಗಿಯಿತು.
ಐಪಿಎಲ್ 2020: ಡೆಲ್ಲಿ ಯುವ ನಾಯಕ ಶ್ರೇಯಸ್ ಅಯ್ಯರ್ ಗುಣಗಾನ ಮಾಡಿದ ಅಶ್ವಿನ್
ದೇಶದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದುದರಿಂದ ಬಿಸಿಸಿಐ ಮಿಲಿಯನ್ ಡಾಲರ್ ಟೂರ್ನಿಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆಯೋಜಿಸಿದೆ. ಯುಎಇನ ಮೂರು ಸ್ಟೇಡಿಯಂಗಳಲ್ಲಿ ಐಪಿಎಲ್ ಟೂರ್ನಿ ಜರುಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.