CSKಗೆ ಕೈಕೊಟ್ಟ ಬ್ಯಾಟ್ಸ್‌ಮನ್, ರಾಜಸ್ಥಾನಕ್ಕೆ 126 ರನ್ ಟಾರ್ಗೆಟ್

Published : Oct 19, 2020, 09:17 PM IST
CSKಗೆ ಕೈಕೊಟ್ಟ ಬ್ಯಾಟ್ಸ್‌ಮನ್, ರಾಜಸ್ಥಾನಕ್ಕೆ 126 ರನ್ ಟಾರ್ಗೆಟ್

ಸಾರಾಂಶ

ರಾಜಸ್ಥಾನ ಹಾಗೂ  ಚೆನ್ನೈ  ತಂಡಕ್ಕೆ ಇದು ಅತ್ಯಂತ ಮಹತ್ವದ ಪಂದ್ಯ. ಈ ಪಂದ್ಯದಲ್ಲಿ ಚೆನ್ನೈ ಬ್ಯಾಟಿಂಗ್‌ನಲ್ಲಿ ಅಬ್ಬರಿಸುವಲ್ಲಿ ವಿಫಲವಾಗಿದೆ. ಧೋನಿ ಹಾಗೂ ಜಡೇಜಾ ಹೋರಾಟ ಹೊರತುಪಡಿಸಿದರೆ ಇತರರ ಬ್ಯಾಟ್ಸ್‌ಮನ್‌ಗಳಿಂದ ರನ್ ಹರಿದು ಬರಲಿಲ್ಲ. 

ಅಬು ಧಾಬಿ(ಅ.19): ರಾಜಸ್ಥಾನ ರಾಯಲ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಎಂ.ಎಸ್.ಧೋನಿ ಹಾಗೂ ರವೀಂದ್ರ ಜಡೇಜಾ ಜೊತೆಯಾಟದಿಂದ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ ನಷ್ಟಕ್ಕೆ 125 ರನ್ ಸಿಡಿಸಿದೆ 

ಟಾಸ್ ಗೆದ್ದ  ಬ್ಯಾಟಿಂಗ್ ಇಳಿದ ಚೆನ್ನೈ ಸೂಪರ್ ಕಿಂಗ್ಸ್, ಉತ್ತಮ ಆರಂಭ ಪಡೆಯಲು ಸಾಧ್ಯವಾಗಿಲ್ಲ. ಫಾಫ್ ಡುಪ್ಲೆಸಿಸ್ ಕೇವಲ 10 ರನ್ ಸಿಡಿಸಿ ಔಟಾದರು. ಶೇನ್ ವ್ಯಾಟ್ಸನ್ ಕೇವಲ 8 ರನ್ ಸಿಡಿಸಿ ನಿರ್ಗಮಿಸಿದರು.  ಸ್ಯಾಮ್ ಕುರನ್ 22 ರನ್ ಕಾಣಿಕೆ ನೀಡಿದರು.

ಪ್ರತಿ ಭಾರಿ ತಂಡಕ್ಕೆ ಆಸರೆಯಾಗುತ್ತಿದ್ದ ಅಂಬಾಟಿ ರಾಯುಡು 13 ರನ್ ಸಿಡಿಸಿ ಔಟಾದರು. 56 ರನ್ ಕಲೆಹಾಕುವಷ್ಟರಲ್ಲೇ ಸಿಎಸ್‌ಕೆ ಪ್ರಮುಖ 4 ವಿಕೆಟ್ ಕಳೆದುಕೊಂಡಿತು.  ಆದರೆ ನಾಯಕ ಎಂ.ಎಸ್.ಧೋನಿ ಹಾಗೂ ರವೀಂದ್ರ ಜಡೇಜಾ ಜೊತೆಯಾಟದಿಂದ ಚೆನ್ನೈ ಚೇತರಿಸಿಕೊಂಡಿತು.

ಧೋನಿ 28 ರನ್ ಸಿಡಿಸಿ ಔಟಾದರು. ಇತ್ತ ರವೀಂದ್ರ ಜಡೇಜಾ ಬ್ಯಾಟಿಂಗ್ ಮುಂದುವರಿಸಿದರು.  ಜಡೇಜಾ ಅಜೇಯ 35 ರನ್ ಸಿಡಿಸಿದರು. ಈ ಮೂಲಕ ಸಿಎಸ್‌ಕೆ 5 ವಿಕೆಟ್ ನಷ್ಟಕ್ಕೆ 125 ರನ್ ಸಿಡಿಸಿತು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಧೋನಿ ಸಸ್ಯಹಾರಿಯೋ, ಮಾಂಸಹಾರಿಯೋ? ಮಹಿ ಇಷ್ಟದ ಆಹಾರ ಬಗ್ಗೆ ಗುಟ್ಟು ಬಿಚ್ಚಿಟ್ಟ ಮಾಜಿ ರೂಮ್‌ಮೇಟ್!
ಐಪಿಎಲ್ ಮಿನಿ ಹರಾಜಿನಲ್ಲಿ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆಗೋದು ಯಾರು? ಅಚ್ಚರಿ ಭವಿಷ್ಯ ನುಡಿದ AI