ಹೈದರಾಬಾದ್ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದ ಮುಂಬೈ!

Published : Nov 03, 2020, 09:19 PM ISTUpdated : Nov 03, 2020, 09:38 PM IST
ಹೈದರಾಬಾದ್ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದ ಮುಂಬೈ!

ಸಾರಾಂಶ

ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲ್ಲಲೇಬೇಕಾದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಭರ್ಜರಿ ಮೇಲುಗೈ ಸಾಧಿಸಿದೆ.  149 ರನ್‍ಗೆ ಮುಂಬೈ ತಂಡವನ್ನು ಕಟ್ಟಿಹಾಕಿದ ಸನ್‌ರೈಸರ್ಸ್ ಹೈದರಾಬಾದ್  ಇದೀಗ ಸ್ಪರ್ಧಾತ್ಮಕ ಟಾರ್ಗೆಟ್ ಚೇಸ್ ಮಾಡಲು ರೆಡಿಯಾಗಿದೆ.

ಶಾರ್ಜಾ(ನ.03):  ಪ್ಲೇ ಆಫ್ ಸ್ಥಾನಕ್ಕೆ ಲಗ್ಗೆ ಇಡಲು ಮುಂಬೈ ವಿರುದ್ಧದ ಅಂತಿಮ ಲೀಗ್ ಪಂದ್ಯ ಗೆಲ್ಲಲೇಬೇಕಾದ ಒತ್ತಡಲ್ಲಿದ್ದ ಸನ್‌ರೈಸರ್ಸ್ ಹೈದರಾಬಾದ್ ಸರಿಯಾದ ಹಾದಿಯಲ್ಲಿ ಮುನ್ನಡೆಯುತ್ತಿದೆ. ಮುಂಬೈ ಘಟಾನುಘಟಿ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕಿದ ಹೈದರಾಬಾದ್ ಇದೀಗ 150 ರನ್ ಟಾರ್ಗೆಟ್ ಪಡೆದಿದೆ.

ತಂಡಕ್ಕೆ ನಾಯಕ ರೋಹಿತ್ ಶರ್ಮಾ ಮರಳಿದರೂ ಬ್ಯಾಟಿಂಗ್‌ನಲ್ಲಿ ಅಬ್ಬರಿಸಲಿಲ್ಲ. ರೋಹಿತ್ ಶರ್ಮಾ ಕೇವಲ 4 ರನ್ ಸಿಡಿಸಿ ಔಟಾದರು. ಕ್ವಿಂಟನ್ ಡಿಕಾಕ್ ಹಾಗೂ ಸೂರ್ಯಕುಮಾರ್ ಯಾದವ್ ಜೊತೆಯಾಟದಿಂದ ಮುಂಬೈ ಚೇತರಿಸಿಕೊಂಡಿತು. ಆದರೆ ಡಿಕಾಕ್ 25 ರನ್ ಸಿಡಿಸಿ ಔಟಾದರು. ಸೂರ್ಯಕುಮಾರ್ ಯಾದವ್ 36 ರನ್ ಸಿಡಿಸಿ ಔಟಾದರು.

ಇಶಾನ್ ಕಿಶನ್ ಹೋರಾಟ ಮುಂದುವರಿಸಿದರು. ಆದರೆ ಕ್ರುನಾಲ್ ಪಾಂಡ್ಯ, ಸೌರಬ್ ತಿವಾರಿ ಬಹುಬೇಗನೆ ಪೆವಿಲಿಯನ್ ಸೇರಿದರು. ಇಶಾನ್ ಕಿಶನ್ 33 ರನ್ ಸಿಡಿಸಿ ಔಟಾದರು.  ನತನ್ ಕೌಲ್ಟರ್ ನೈಲ್ ಕೇವಲ 1 ರನ್ ಸಿಡಿಸಿ ಔಟಾದರು. ಆದೆ ಕೀರನ್ ಪೊಲಾರ್ಡ್ ಸಿಡಿಸಿದ 41 ರನ್ ಸಿಡಿಸಿ ಔಟಾದರು. ಮುಂಬೈ ಇಂಡಿಯನ್ಸ್  8 ವಿಕೆಟ್ ನಷ್ಟಕ್ಕೆ 149 ರನ್ ಸಿಡಿಸಿತು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026 ಐಪಿಎಲ್ ಹರಾಜಿನಿಂದ ಹಿಂದೆ ಸರಿದ ಮತ್ತಿಬ್ಬರು ಸ್ಟಾರ್ ಆಲ್ರೌಂಡರ್ಸ್!
IPL 2026 ಆಟಗಾರರ ಹರಾಜಿನ ಲಿಸ್ಟ್‌ ಫೈನಲ್: 2 ಕೋಟಿ ಮೂಲ ಬೆಲೆ ಹೊಂದಿರುವ ಆಟಗಾರ ಪಟ್ಟಿ ಔಟ್, ಕೇವಲ 2 ಭಾರತೀಯರಿಗೆ ಸ್ಥಾನ!