IPL 2020: KKR ವಿರುದ್ಧ ಟಾಸ್ ಗೆದ್ದ KXIP!

By Suvarna NewsFirst Published Oct 26, 2020, 7:02 PM IST
Highlights

ಪ್ಲೇ ಆಫ್ ಸ್ಥಾನಕ್ಕಾಗಿ ಇದೀಗ ಪ್ರತಿ ಪಂದ್ಯ ಕೂಡ ಮುಖ್ಯವಾಗಿದೆ. ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಇದೀಗ ಪ್ಲೇ ಆಫ್ ಹಾದಿ ಸುಗಮಗೊಳಿಸಲು ಮುಖಾಮುಖಿಯಾಗುತ್ತಿದೆ. ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡದ ಬದಲಾವಣೆ ಏನು?

ಶಾರ್ಜಾ(ಅ.26): ಅಂಕಪಟ್ಟಿಯಲ್ಲಿ 4 ಮತ್ತು 5ನೇ ಸ್ಥಾನದಲ್ಲಿರುವ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗುತ್ತಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಕೆಕೆಆರ್ ಹಾಗೂ ಪಂಜಾಬ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

have won the toss and they will bowl first against . pic.twitter.com/jXIrMiSH85

— IndianPremierLeague (@IPL)

ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಇದೀಗ ಗೆಲವಿನ ಅಲೆಯಲ್ಲಿದೆ. ಈ ಮೂಲಕ ಪ್ಲೇ ಆಫ್ ರೇಸ್ ಪೈಪೋಟಿ ಹೆಚ್ಚಾಗಿದೆ. ಕೆಕೆಆರ್ 11ರಲ್ಲಿ 6 ಗೆಲುವು ಹಾಗೂ 5 ಸೋಲು ಕಂಡಿದೆ. ಇತ್ತ ಪಂಜಾಬ್ ಕೂಡ 11ರಲ್ಲಿ 5 ಗೆಲುವು ಕಂಡಿದೆ.

click me!