ಐಪಿಎಲ್ 2020: ಹೈದರಾಬಾದ್‌ಗೆ ಸವಾಲಿನ ಗುರಿ ನೀಡಿದ ಕೆಕೆಆರ್

Published : Oct 18, 2020, 05:30 PM ISTUpdated : Oct 18, 2020, 05:34 PM IST
ಐಪಿಎಲ್ 2020: ಹೈದರಾಬಾದ್‌ಗೆ ಸವಾಲಿನ ಗುರಿ ನೀಡಿದ ಕೆಕೆಆರ್

ಸಾರಾಂಶ

ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಇಯಾನ್ ಮಾರ್ಗನ್ ಪಡೆ ಗೆಲ್ಲಲು 164 ರನ್‌ಗಳ ಗುರಿ ನೀಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಅಬುಧಾಬಿ(ಅ.18): ಕೊನೆಯಲ್ಲಿ ನಾಯಕ ಇಯಾನ್ ಮಾರ್ಗನ್ ಹಾಗೂ ದಿನೇಶ್ ಕಾರ್ತಿಕ್ ಚುರುಕಿನ ಬ್ಯಾಟಿಂಗ್ ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತ ನೈಟ್‌ ರೈಡರ್ಸ್ 5 ವಿಕೆಟ್ ಕಳೆದುಕೊಂಡು 163 ರನ್ ಬಾರಿಸಿದ್ದು, ವಾರ್ನರ್ ಪಡೆಗೆ ಸವಾಲಿನ ಗುರಿ ನೀಡಿದೆ

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಕೋಲ್ಕತ ನೈಟ್‌ ರೈಡರ್ಸ್ ಉತ್ತಮ ಆರಂಭ ಪಡೆಯುವಲ್ಲಿ ಯಶಸ್ವಿಯಾಯಿತು. ಮೊದಲ ವಿಕೆಟ್‌ಗೆ ಶುಭ್‌ಮನ್ ಗಿಲ್ ಹಾಗೂ ರಾಹುಲ್ ತ್ರಿಪಾಠಿ 48 ರನ್‌ಗಳ ಜತೆಯಾಟವಾಡಿದರು. ರಾಹುಲ್ ತ್ರಿಪಾಠಿ(23)ಯ ವಿಕೆಟ್ ಪಡೆಯುವ ಮೂಲಕ ಟಿ ನಟರಾಜನ್ ಹೈದರಾಬಾದ್‌ಗೆ ಮೊದಲ ಯಶಸ್ಸು ದಕ್ಕಿಸಿಕೊಟ್ಟರು. ಇನ್ನು ಉತ್ತಮವಾಗಿ ಅಡುತ್ತಿದ್ದ ಗಿಲ್(36) ಅವರನ್ನು ರಶೀದ್ ಖಾನ್ ಪೆವಿಲಿಯನ್ನಿಗಟ್ಟಿದರು. ಇನ್ನು ಇದರ ಬೆನ್ನಲ್ಲೇ ನಿತೀಶ್ ರಾಣಾ(29) ಕೂಡಾ ಪೆವಿಲಿಯನ್ ಸೇರಿದರು. ಆಂಡ್ರೆ ರಸೆಲ್ ಮತ್ತೊಮ್ಮೆ ಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸಿದರು. 11 ಎಸೆತಗಳಲ್ಲಿ 9 ರನ್ ಬಾರಿಸಿ ನಟರಾಜನ್ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು.

ಕೊನೆಯಲ್ಲಿ ರನ್ ವೇಗಕ್ಕೆ ಚುರುಕು ಮುಟ್ಟಿಸಿದ ಮಾರ್ಗನ್ ಕಾರ್ತಿಕ್:  5ನೇ ವಿಕೆಟ್‌ಗೆ ಜತೆಯಾದ ನಾಯಕ ಇಯಾನ್ ಮಾರ್ಗನ್ ಹಾಗೂ ಮಾಜಿ ನಾಯಕ ದಿನೇಶ್ ಕಾರ್ತಿಕ್ ಕೆಕೆಆರ್ ರನ್ ವೇಗಕ್ಕೆ ಚುರುಕು ಮುಟ್ಟಿಸಿದರು. ಈ ಜೋಡಿ 5ನೇ ವಿಕೆಟ್‌ಗೆ 58 ರನ್‌ಗಳ ಜತೆಯಾಟವಾಡಿದರು. ಇಯಾನ್ ಮಾರ್ಗನ್ 34 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ದಿನೇಶ್ ಕಾರ್ತಿಕ್ 29 ರನ್ ಬಾರಿಸಿ ಅಜೇಯರಾಗುಳಿದರು. 

ಸನ್‌ರೈಸರ್ಸ್ ಹೈದರಾಬಾದ್ ಪರ ಟಿ ನಟರಾಜನ್ 2 ವಿಕೆಟ್ ಪಡೆದರೆ, ರಶೀದ್ ಖಾನ್, ಬಾಸಿಲ್ ಥಂಪಿ ಹಾಗೂ ವಿಜಯ ಶಂಕರ್ ತಲಾ ಒಂದೊಂದು ವಿಕೆಟ್ ಪಡೆದರು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟೀಂ ಇಂಡಿಯಾಗೆ ಗುಡ್‌ಬೈ ಹೇಳಿದ 24 ಗಂಟೆಯಲ್ಲೇ ಗೌತಮ್ ಗಂಭೀರ್ ಆಪ್ತನ ಹೆಗಲೇರಿದ ಹೊಸ ಜವಾಬ್ದಾರಿ!
ಮಂಗಳೂರಿನ ನಟಿ ಶಿಲ್ಪಾ ಶೆಟ್ಟಿ ಪತಿಗೆ ಗಜಕೇಸರಿ ಯೋಗ ಕೊಟ್ಟ IPL Team : ₹82 ಕೋಟಿ ರೂ ಈಗ ₹16 ಸಾವಿರ ಕೋಟಿ ಆಯ್ತು