ಐಪಿಎಲ್ ಟೂರ್ನಿ ರದ್ದಾಗಿದೆ. ಇತ್ತ ಧೋನಿ ಅಬ್ಬರಿಸುತ್ತಿದ್ದಾರೆ. ಇದೀಗ ಅಭಿಮಾನಿಗಳ ಆತಂಕ ಹೆಚ್ಚಾಗಿದೆ. ಕಾರಣ ಟೀಂ ಇಂಡಿಯಾ ಜರ್ಸಿಯಲ್ಲಿ ನೋಡಲು ಕಾತರರಾಗಿದ್ದ ಅಭಿಮಾನಿಗಳಿಗೆ ಈ ಅವಕಾಶ ಸಿಗುವ ಸಾಧ್ಯತೆಗಳು ಕಡಿಮೆಯಾಗುತ್ತಿದೆ.
ಚೆನ್ನೈ(ಮಾ.14): ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ 13ನೇ ಆವೃತ್ತಿಯ ಐಪಿಎಲ್ ಅನ್ನು ಏ.15ರ ವರೆಗೂ ಅಮಾನತುಗೊಳಿಸಲಾಗಿದೆ. ಈ ನಡುವೆ ಟೂರ್ನಿಗೆ ಸಿದ್ಧತೆ ನಡೆಸುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್‌ನ ನಾಯಕ ಎಂ.ಎಸ್.ಧೋನಿ ಅಭ್ಯಾಸ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. 91 ಎಸೆತಗಳಲ್ಲಿ ಅವರು 123 ರನ್ ಚಚ್ಚಿದರು ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.
ಇದನ್ನೂ ಓದಿ: CSK ಅಭಿಮಾನಿಗಳನ್ನು ಕೆರಳಿಸಿದ ಐಪಿಎಲ್ ಪ್ರೋಮೋ..!
8 ತಿಂಗಳಿಂದ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿದ್ದ ಧೋನಿ, ಐಪಿಎಲ್‌ನಲ್ಲಿ ಮಿಂಚುವ ಮೂಲಕ ಭಾರತ ತಂಡಕ್ಕೆ ವಾಪಸಾಗುವ ಗುರಿ ಹೊಂದಿದ್ದಾರೆ. ಇತ್ತೀಚೆಗಷ್ಟೇ ನೆಟ್‌ಪ್ರಾಕ್ಟೀಸ್‌ನಲ್ಲಿ ಧೋನಿ ಸತತ 5 ಸಿಕ್ಸರ್ ಸಿಡಿಸಿ ಮಿಂಚಿದ್ದರು. ಸುದೀರ್ಘ ಕಾಲ ಕ್ರಿಕೆಟ್‌ನಿಂದ ದೂರ ಉಳಿದರು ಧೋನಿ ಅಬ್ಬರಿಸುತ್ತಿದ್ದಾರೆ.
ಇದನ್ನೂ ಓದಿ: 6,6,6,6,6 ಧೋನಿ ಸುನಾಮಿ, CSK ಅಭ್ಯಾಸದ MSD ಸಿಕ್ಸರ್ ಸುರಿಮಳೆ!
ಐಪಿಎಲ್ ಪ್ರದರ್ಶನ ಆಧಾರದ ಮೇಲೆ ಧೋನಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ನೀಡಲಾಗುವುದು ಎಂದು ಆಯ್ಕೆ ಸಮಿತಿ ಹೇಳಿದ. ಇತ್ತ ಧೋನಿ ಕೂಡ ಅಬ್ಬರಿಸುತ್ತಿದ್ದಾರೆ. ಆದರೆ ಐಪಿಎಲ್ ಟೂರ್ನಿ ಎಪ್ರಿಲ್ 15ರ ವರೆಗೆ ರದ್ದಾಗಿದೆ. ಇಷ್ಟೇ ಅಲ್ಲ ಟೂರ್ನಿ ಆರಂಭವಾಗುವ ಕುರಿತು ಸ್ಪಷ್ಟತೆ ಇಲ್ಲ. ಹೀಗಾಗಿ ಧೋನಿ ತಂಡಕ್ಕೆ ವಾಪಸ್ಸಾಗುವು ಕುರಿತು ಅನುಮಾನಗಳು ಕಾಡತೊಡಗಿದೆ.