ಶಾರ್ಜಾದಲ್ಲಿಂದು ಹಾಲಿ ಚಾಂಪಿಯನ್ ಮುಂಬೈಗೆ ಹೈದರಾಬಾದ್ ಸವಾಲು..!

By Kannadaprabha News  |  First Published Oct 4, 2020, 8:42 AM IST

13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 17ನೇ ಪಂದ್ಯದಲ್ಲಿಂದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ


ಶಾರ್ಜಾ(ಅ.04): ನಾಲ್ಕು ಪಂದ್ಯಗಳಲ್ಲಿ ತಲಾ 2 ಗೆಲುವು ಹಾಗೂ 2 ಸೋಲುಗಳನ್ನು ಕಂಡಿರುವ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 17ನೇ ಪಂದ್ಯದಲ್ಲಿಂದು ಶಾರ್ಜಾ ಮೈದಾನದಲ್ಲಿ ಕಾದಾಡಲಿವೆ. ಈ ಆವೃತ್ತಿಯ ಎರಡನೇ ಮಧ್ಯಾಹ್ನದ ಪಂದ್ಯ ಇದಾಗಿದ್ದು, ಮಧ್ಯಾಹ್ನ 3.30ಕ್ಕೆ ಪಂದ್ಯ ಆರಂಭವಾಗಲಿದೆ.

IPL 2020: ಕೆಕೆಆರ್ ವಿರುದ್ಧ ಗೆಲುವು, ಮೊದಲ ಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್!

Tap to resize

Latest Videos

undefined

ಈ ಆವೃತ್ತಿಯಲ್ಲಿ ಶಾರ್ಜಾದ ಸಣ್ಣ ಮೈದಾನದಲ್ಲಿ ಇವೆರಡು ತಂಡಗಳು ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ. ಇಲ್ಲಿ ನಡೆದಿರುವ ಮೂರು ಪಂದ್ಯಗಳಲ್ಲೂ ಸಿಕ್ಸರ್‌ಗಳ ಸುರಿಮಳೆಯೇ ಸುರಿದಿದೆ.  

ಮುಂಬೈ ಇಂಡಿಯನ್ಸ್ ಪರ ನಾಯಕ ರೋಹಿತ್ ಶರ್ಮಾ. ಇಶಾನ್ ಕಿಶನ್, ಕಿರಾನ್ ಪೊಲ್ಲಾರ್ಡ್, ಹಾರ್ದಿಕ್ ಪಾಂಡ್ಯ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇನ್ನೊಂದೆಡೆ ಮೊದಲೆರಡು ಪಂದ್ಯಗಳನ್ನು ಸೋತಿದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ ಆನಂತರದ ಎರಡು ಪಂದ್ಯಗಳನ್ನು ಜಯಿಸಿ ಆತ್ಮವಿಶ್ವಾಸದಿಂದ ಬೀಗುತ್ತಿದೆ. ಅಭಿಷೇಕ್ ವರ್ಮಾ, ಪ್ರಿಯಂ ಗರ್ಗ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇನ್ನು ತಂಡದ ಪ್ರಮುಖ ವೇಗಿ ಭುವನೇಶ್ವರ್ ಕುಮಾರ್ ಗಾಯಗೊಂಡಿದ್ದು, ಈ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಪಂದ್ಯ ಆರಂಭ: ಮಧ್ಯಾಹ್ನ 3.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್

click me!