
ದುಬೈ(ಸೆ.08): ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ 13ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ. ಸದ್ಯ ದುಬೈನಲ್ಲಿ ಅಭ್ಯಾಸ ನಡೆಸುತ್ತಿರುವ ಬುಮ್ರಾ 6 ವಿವಿಧ ಬೌಲರ್‌ಗಳ ಬೌಲಿಂಗ್ ಶೈಲಿಯನ್ನು ಅನುಕರಿಸಿ ಬೌಲಿಂಗ್ ಮಾಡುವ ಮೂಲಕ ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಯುಎಇನಲ್ಲಿ ಈಗಾಗಲೇ ಬೀಡುಬಿಟ್ಟಿದ್ದು, ನೆಟ್ಸ್‌ನಲ್ಲಿ ಸಾಕಷ್ಟು ಬೆವರು ಸುರಿಸುತ್ತಿದೆ. ಇದರ ಬೆನ್ನಲ್ಲೇ ಜಸ್ಪ್ರೀತ್ ಬುಮ್ರಾ 6 ಬೌಲರ್‌ಗಳ ಬೌಲಿಂಗ್ ಶೈಲಿಯನ್ನು ಅನುಕರಿಸುವ ಮೂಲಕ ಗಮನ ಸೆಳೆದಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಲಾಗಿದೆ.
ಬುಮ್ರಾ ಅನುಕರಿಸಿದ 6 ಬೌಲರ್‌ಗಳ ಬೌಲಿಂಗ್ ಶೈಲಿಯನ್ನು ನೀವು ಊಹಿಸಬಲ್ಲಿರಾ? ದಯವಿಟ್ಟು ಬೋನಸ್ ರೌಂಡ್ ನೋಡುವುದನ್ನು ಮರೆದಿರಿ ಎಂದು ಬರೆದು ಬುಮ್ರಾ ಅವರ ಬೌಲಿಂಗ್ ವಿಡಿಯೋವನ್ನು ಮುಂಬೈ ಇಂಡಿಯನ್ಸ್ ಟ್ವೀಟ್ ಮೂಲಕ ಹಂಚಿಕೊಂಡಿದೆ.
IPL 2020: ಡೆಲ್ಲಿ ಕ್ಯಾಪಿಟಲ್ಸ್ ಈ ಸಲ ಕಪ್ ಗೆಲ್ಲುವ ನೆಚ್ಚಿನ ತಂಡವೆನ್ನಲು ಈ 4 ಅಂಶಗಳೇ ಸಾಕು..!
ಹೀಗಿದೆ ನೋಡಿ ಬುಮ್ರಾ ಅನುಕರಿಸಿದ ಬೌಲಿಂಗ್:
ಕ್ರಿಕೆಟ್ ಅಭಿಮಾನಿಗಳು ಟ್ವೀಟ್ ಮೂಲಕವೇ ಬುಮ್ರಾ ಅನುಕರಿಸಿದ ಬೌಲರ್‌ಗಳು ಯಾರು ಎಂದು ಉತ್ತರ ನೀಡಲು ಪ್ರಯತ್ನಿಸಿದ್ದಾರೆ. ನಮ್ಮ ಊಹೆಯ ಪ್ರಕಾರ ಬುಮ್ರಾ ಅನುಕರಿಸಿದ್ದು ಸಚಿನ್ ತೆಂಡುಲ್ಕರ್, ಗ್ಲೆನ್ ಮೆಗ್ರಾಥ್, ಕೇದಾರ್ ಜಾಧವ್, ಪ್ರಗ್ಯಾನ್ ಓಜಾ ಹಾಗೂ ಅನಿಲ್ ಕುಂಬ್ಳೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.