IPL 2020 ಉದ್ಘಾಟನಾ ಪಂದ್ಯಕ್ಕೆ ಹೀಗಿದೆ ಮುಂಬೈ ಇಂಡಿಯನ್ಸ್ ಸಂಭಾವ್ಯ ತಂಡ

Suvarna News   | Asianet News
Published : Sep 19, 2020, 02:18 PM IST
IPL 2020 ಉದ್ಘಾಟನಾ ಪಂದ್ಯಕ್ಕೆ ಹೀಗಿದೆ ಮುಂಬೈ ಇಂಡಿಯನ್ಸ್ ಸಂಭಾವ್ಯ ತಂಡ

ಸಾರಾಂಶ

13ನೇ ಆವೃತ್ತಿಯ ಉದ್ಘಾಟನಾ ಪಂದ್ಯಕ್ಕೆ ಕೌಂಟ್‌ ಡೌನ್ ಶುರುವಾಗಿದೆ. ಹೀಗಿರುವಾಗಲೇ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆಯಬಹುದು ಎನ್ನುವ ಕುತೂಹಲ ಜೋರಾಗಿದೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್‌.ಕಾಂ ಮೊದಲ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಸಂಭಾವ್ಯ ತಂಡವನ್ನು ಪ್ರಕಟಿಸಿದೆ. 

ಅಬುಧಾಬಿ(ಸೆ.19): ದಾಖಲೆಯ ನಾಲ್ಕು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ಇಂದು 13ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಲಿದೆ.

ಟೂರ್ನಿ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡ ಅನಿರೀಕ್ಷಿತ ಆಘಾತ ಅನುಭವಿಸಿದ್ದು, ತಂಡದ ಅನುಭವಿ ವೇಗಿ ಲಸಿತ್ ಮಾಲಿಂಗ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯುತ್ತಿದೆ. ಯುಎಇನಲ್ಲಿ ಈ ಹಿಂದೆ ಆಡಿದ 5 ಪಂದ್ಯಗಳಲ್ಲೂ ಸೋಲಿನ ಕಹಿ ಉಂಡಿರುವ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಅರಬ್ಬರ ನಾಡಿನಲ್ಲಿ ಮೊದಲ ಜಯದ ಕನವರಿಕೆಯಲ್ಲಿದೆ.

IPL 2020: ಇಂದು ಹಾಲಿ ವರ್ಸಸ್ ಮಾಜಿ ಚಾಂಪಿಯನ್ನರ ಕಾದಾಟ

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಜಯದೊಂದಿಗೆ 13ನೇ ಆವೃತ್ತಿಯ ಐಪಿಎಲ್‌ನಲ್ಲಿ ಶುಭಾರಂಭ ಮಾಡಲು ಎದುರು ನೋಡುತ್ತಿದೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್.ಕಾಂ ಮೊದಲ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್‌ನ ಸಂಭಾವ್ಯ ತಂಡವನ್ನು ಪ್ರಕಟಿಸಿದೆ.

ಆರಂಭಿಕರಾಗಿ: ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿಕಾಕ್, ರೋಹಿತ್ ಶರ್ಮಾ

ಮಧ್ಯಮ ಕ್ರಮಾಂಕದಲ್ಲಿ: ಸೂರ್ಯಕುಮಾರ್ ಯಾಧವ್, ಇಶನ್ ಕಿಶನ್

ಆಲ್ರೌಂಡರ್ ವಿಭಾಗದಲ್ಲಿ: ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಕಿರಾನ್ ಪೊಲ್ಲಾರ್ಡ್

ಬೌಲಿಂಗ್ ವಿಭಾಗದಲ್ಲಿ: ನೇಥನ್ ಕೌಲ್ಟರ್-ನೈಲ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ರಾಹುಲ್ ಚಹಾರ್.

ಪಂದ್ಯ ಆರಂಭ: ಸಂಜೆ 7.30ಕ್ಕೆ,

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆರ್‌ಸಿಬಿ ಮ್ಯಾಚ್ ಬೆಂಗಳೂರು ಬಿಟ್ ಎಲ್ಲಿಗೂ ಶಿಫ್ಟ್ ಆಗೊಲ್ಲ! ಮಹತ್ವದ ಅಪ್‌ಡೇಟ್ಸ್‌ ಕೊಟ್ಟ ಬೆಂಗಳೂರು ಫ್ರಾಂಚೈಸಿ
ಸಂಜು ಸ್ಯಾಮ್ಸನ್ ಬ್ಯಾಟರ್‌ ಆಗಿ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಅಗತ್ಯವೇ ಇರಲಿಲ್ಲ ಎಂದ ಮಾಜಿ ಕ್ರಿಕೆಟಿಗ! ಹೀಗೆ ಹೇಳಲು ಕಾರಣವೂ ಇದೆ