
ದುಬೈ(ಅ.17): ತಂತ್ರಗಾರಿಕೆಯಲ್ಲಿ ಎಡವಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ವೀರೋಚಿತ ಸೋಲು ಅನುಭವಿಸಿದ ಆರ್‌ಸಿಬಿ, ಶನಿವಾರ ನಡೆಯಲಿರುವ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಜಯದ ಲಯಕ್ಕೆ ಮರಳಲು ಎದುರು ನೋಡುತ್ತಿದೆ.
ವಿರಾಟ್ ಕೊಹ್ಲಿ ಪಡೆ ಆಡಿರುವ 8 ಪಂದ್ಯಗಳಲ್ಲಿ 5ರಲ್ಲಿ ಜಯಿಸಿ 3ರಲ್ಲಿ ಸೋಲುಂಡಿದೆ. ತಂಡ ಪ್ಲೇ-ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಲು ಉಳಿದಿರುವ 6 ಪಂದ್ಯಗಳಲ್ಲಿ ಕನಿಷ್ಠ 3ರಲ್ಲಿ ಗೆಲ್ಲಬೇಕಿದೆ. ಹೀಗಾಗಿ, ಈ ಪಂದ್ಯ ತಂಡಕ್ಕೆ ಮುಖ್ಯವೆನಿಸಿದೆ.
ಮತ್ತೊಂದೆಡೆ ರಾಜಸ್ಥಾನ ಆಡಿರುವ 8 ಪಂದ್ಯಗಳಲ್ಲಿ 3ರಲ್ಲಿ ಗೆದ್ದು 5ರಲ್ಲಿ ಸೋಲುಂಡಿದೆ. ಪ್ಲೇ-ಆಫ್ ದೃಷ್ಟಿಯಿಂದ ರಾಯಲ್ಸ್‌ಗಿದು ಮಹತ್ವದ ಪಂದ್ಯ. ಬೆನ್ ಸ್ಟೋಕ್ಸ್ ಸೇರ್ಪಡೆ ಹಾಗೂ ಅವರು ಆರಂಭಿಕನಾಗಿ ಆಡುತ್ತಿರುವುದು ರಾಯಲ್ಸ್ ಬಲ ಹೆಚ್ಚಿಸಿದೆ. ಜೋಫ್ರಾ ಆರ್ಚರ್ ವೇಗಕ್ಕೆ ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳು ಹೇಗೆ ಉತ್ತರಿಸಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ.
KKR ನಾಯಕತ್ವ ಬದಲಾದರೂ ಫಲಿತಾಂಶ ಬದಲಾಗಲಿಲ್ಲ; ಮುಂಬೈಗೆ 8 ವಿಕೆಟ್ ಗೆಲುವು!
ಪಿಚ್ ರಿಪೋರ್ಟ್: ಇಲ್ಲಿನ ಪಿಚ್‌ನಲ್ಲಿ ಮೊದಲ ಇನ್ನಿಂಗ್ಸ್ ಸರಾಸರಿ ಮೊತ್ತ 160-165 ರನ್. ಮೊದಲು ಬ್ಯಾಟ್ ಮಾಡುವ ತಂಡ 160ಕ್ಕಿಂತ ಹೆಚ್ಚು ರನ್ ದಾಖಲಿಸಿದರೆ ಗೆಲ್ಲುವ ಸಾಧ್ಯತೆ ಹೆಚ್ಚು. ಮಧ್ಯಾಹ್ನದ ಪಂದ್ಯವಾಗಿರುವ ಕಾರಣ ಇಬ್ಬನಿಯ ಸಮಸ್ಯೆ ಇರುವುದಿಲ್ಲ. ವೇಗಿಗಳ ಪಾತ್ರ ಮಹತ್ವದಾಗಲಿದೆ.
ಸಂಭವನೀಯ ಆಟಗಾರರ ಪಟ್ಟಿ
ಆರ್‌ಸಿಬಿ: ಆ್ಯರೋನ್ ಫಿಂಚ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ(ನಾಯಕ), ಎಬಿ ಡಿವಿಲಿಯರ್ಸ್, ಶಿವಂ ದುಬೆ, ಕ್ರಿಸ್ ಮೋರಿಸ್, ವಾಷಿಂಗ್ಟನ್ ಸುಂದರ್, ಇಸುರು ಉಡಾನ, ನವ್‌ದೀಪ್ ಸೈನಿ, ಮೊಹಮದ್ ಸಿರಾಜ್, ಯಜುವೇಂದ್ರ ಚಹಲ್.
ರಾಜಸ್ಥಾನ: ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್, ಸ್ಟೀವ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಶ್ರೇಯಸ್ ಗೋಪಾಲ್, ಜೋಫ್ರಾ ಆರ್ಚರ್, ಕಾರ್ತಿಕ್ ತ್ಯಾಗಿ, ಜಯದೇವ್ ಉನಾದ್ಕತ್.
ಸ್ಥಳ: ದುಬೈ
ಪಂದ್ಯ: ಮಧ್ಯಾಹ್ನ 3.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.