
ದುಬೈ(ಅ.11): ರಾಹುಲ್ ಟಿವಾಟಿಯಾ ಹಾಗೂ ರಿಯಾನ ಪರಾಗ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮಹತ್ವದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ 5 ವಿಕೆಟ್ ಗೆಲುವು ದಾಖಲಿಸಿದೆ. ಈ ಗೆಲುವಿನ ಮೂಲಕ ರಾಜಸ್ಥಾನ 6ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ.
159 ರನ್ ಟಾರ್ಗೆಟ್ ಪಡೆದ ರಾಜಸ್ಥಾನ ರಾಯಲ್ಸ್ ತಂಡ ನಿರೀಕ್ಷಿತ ಆರಂಭ ಪಡೆಯಲಿಲ್ಲ. ತಂಡ ಸೇರಿಕೊಂಡ ಬೆನ್ ಸ್ಟೋಕ್ಸ್ ಕೇವಲ 5 ರನ್ ಸಿಡಿಸಿ ಔಟಾದರು. ನಾಯಕ ಸ್ಟೀವನ್ ಸ್ಮಿತ್ ಕೇವಲ 5 ರನ್ ಸಿಡಿಸಿ ನಿರ್ಗಮಿಸಿದರು. ಜೋಸ್ ಬಟ್ಲರ್ ಆಟ 16 ರನ್‌ಗೆ ಅಂತ್ಯವಾಯಿತು.
ಸಂಜು ಸಾಮ್ಸನ್ ಹಾಗೂ ರಾಬಿನ್ ಉತ್ತಪ್ಪ ಕೊಂಚ ಹೋರಾಟ ನೀಡಿದರು. ಉತ್ತಪ್ಪ 18 ರನ್ ಸಿಡಿಸಿ ಔಟಾದರೆ, ಸಂಜು ಸಾಮ್ಸನ್ 26 ರನ್ ಸಿಡಿಸಿ ಔಟಾದರು. ಸೋಲಿನ ಸುಳಿಯಲ್ಲಿದ್ದ ತಂಡಕ್ಕೆ ರಿಯಾನ್ ಪರಾಗ್ ಹಾಗೂ ರಾಹುಲ್ ಟಿವಾಟಿಯಾ ಆಸರೆಯಾದರು. ಇವರಿಬ್ಬರ ಜೊತೆಯಾಟ ರಾದಸ್ಥಾನ ರಾಯಲ್ಸ್ ತಂಡದಲ್ಲಿ ಗೆಲುವಿನ ಆಸೆ ಚಿಗುರಿಸಿತು.
ಸ್ಫೋಟಕ ಬ್ಯಾಟಿಂಗ್ ಮೂಲಕ ರಾಹುಲ್ ಟಿವಾಟಿಯಾ ಹಾಗೂ ರಿಯಾನ ಪರಾಗ್ ಹೈದರಾಬಾದ್ ಕಡೆ ವಾಲಿದ್ದ ಪಂದ್ಯಕ್ಕೆ ರೋಚಕ ತಿರುವು ನೀಡಿದರು. ಅಂತಿಮ 6 ಎಸೆತದಲ್ಲಿ ರಾಜಸ್ಥಾನ ಗೆಲುವಿಗೆ 8 ರನ್ ಅವಶ್ಯಕತೆ ಇತ್ತು. ಜವಾಬ್ಬಾರಿಯುತ ಬ್ಯಾಟಿಂಗ್ ಪ್ರದರ್ಶನದ ಮೂಲಕ ರಾಜಸ್ಥಾನ ರಾಯಲ್ಸ್ 5 ವಿಕೆಟ್ ಕಳೆದುಕೊಂಡು 19.5 ಓವರ್‌ಗಳಲ್ಲಿ ಗುರಿ ತಲುಪಿತು.
ರಿಯಾನ್ ಪರಾಗ್ ಅಜೇಯ 42 ಹಾಗೂ ರಾಹುಲ್ ಟಿವಾಟಿಯಾ ಅಜೇಯ 45 ರನ್ ಸಿಡಿಸಿದರು. ಇವರಿಬ್ಬರ ಜೊತೆಯಾಟದಿಂದ ರಾಜಸ್ಥಾನ ರಾಯಲ್ಸ್ 5 ವಿಕೆಟ್ ಗೆಲುವು ದಾಖಲಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.