
ದುಬೈ(ಅ.24):ಭಾನುವಾರ(ಅ.25) ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೋ ಗ್ರೀನ್ ಅಭಿಯಾನದಡಿ ಪ್ರತಿ ವರ್ಷದಂತೆ ಈ ವರ್ಷ ಸಹಾ ವಿರಾಟ್ ಕೊಹ್ಲಿ ಪಡೆ ಗ್ರೀನ್ ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ.
ಹೌದು, ಪರಿಸರ ಸಂದೇಶ ಸಾರುವ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ಫ್ರಾಂಚೈಸಿ ಹಸಿರು ಜೆರ್ಸಿ ತೊಟ್ಟು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2011ರಿಂದಲೂ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಹಸಿರು ಜೆರ್ಸಿ ತೊಟ್ಟು ಜನರಲ್ಲಿ ಜಾಗೃತಿ ಮೂಡಿಸುತ್ತಾ ಬಂದಿದೆ.
2016ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಕ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಸೈಕಲ್ ಮೂಲಕ ಚಿನ್ನಸ್ವಾಮಿ ಮೈದಾನಕ್ಕೆ ಬಂದಿಳಿದಿದ್ದರು. ಇನ್ನು ಕಳೆದ ವರ್ಷ ಆರ್‌ಸಿಬಿ ಹಸಿರು ಜೆರ್ಸಿ ತೊಟ್ಟು ವಸ್ತುಗಳ ಮರುಬಳಕೆಯ ಬಗ್ಗೆ ಜಾಗೃತಿ ಮೂಡಿಸಿತ್ತು. ಈ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಗ್ರಹವನ್ನು ಸ್ವಚ್ಛ ಹಾಗೂ ಆರೋಗ್ಯವಾಗಿಡುವ ಧ್ಯೇಯದೊಂದಿಗೆ ಆರ್‌ಸಿಬಿ ಕಣಕ್ಕಿಳಿಯುತ್ತಿದೆ.
ವರುಣ್ ಚಕ್ರವರ್ತಿ ಎದುರು ಪಲ್ಟಿ ಹೊಡೆದ ಡೆಲ್ಲಿ ಕ್ಯಾಪಿಟಲ್ಸ್
13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅದ್ಭುತ ಪ್ರದರ್ಶನ ತೋರುತ್ತಿದ್ದು, 2016ರ ಬಳಿಕ ಇದೇ ಮೊದಲ ಬಾರಿಗೆ ಪ್ಲೇ ಆಫ್ ಪ್ರವೇಶಿಸುವ ಹೊಸ್ತಿಲಲ್ಲಿದೆ. ಇದುವರೆಗೂ 10 ಪಂದ್ಯಗಳನ್ನಾಡಿರುವ ವಿರಾಟ್ ಪಡೆ 7ರಲ್ಲಿ ಗೆಲುವು ಹಾಗೂ 3 ಪಂದ್ಯಗಳಲ್ಲಿ ಸೋಲು ಕಾಣುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನೊಂದು ಕಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡ 11 ಪಂದ್ಯಗಳನ್ನಾಡಿ 3 ಗೆಲುವು ಹಾಗೂ 8 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.