IPL 2020 ಕ್ವಾಲಿಫೈಯರ್: ಹೈದರಾಬಾದ್‌ಗೆ ಬೃಹತ್ ಟಾರ್ಗೆಟ್ ನೀಡಿದ ಡೆಲ್ಲಿ

Published : Nov 08, 2020, 09:21 PM IST
IPL 2020 ಕ್ವಾಲಿಫೈಯರ್: ಹೈದರಾಬಾದ್‌ಗೆ ಬೃಹತ್ ಟಾರ್ಗೆಟ್ ನೀಡಿದ ಡೆಲ್ಲಿ

ಸಾರಾಂಶ

2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ದಿಟ್ಟ ಹೋರಾಟ ನೀಡಿದೆ. ಈ ಮೂಲಕ ಫೈನಲ್ ಪ್ರವೇಶದ ಸುತ್ತಿನಲ್ಲಿ ಹೈದರಾಬಾದ್ ತಂಡಕ್ಕೆ ಬೃಹತ್ ಗುರಿ ನೀಡಿದೆ.

ಅಬು ಧಾಬಿ(ನ.08): ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಗೆಲ್ಲಲೇಬೇಕಾದ ಪಂದ್ಯ. ಗೆದ್ದ ತಂಡಕ್ಕೆ ಫೈನಲ್ ಟಿಕೆಟ್ ಸೋತ ತಂಡ ಟೂರ್ನಿಯಿಂದ ಹೊರಬೀಳುವ ಆಘಾತ, ಹೀಗಾಗಿ ಜಿದ್ದಾ ಜಿದ್ದಿನ ಹೋರಾಟ ನಡೆಯುತ್ತಿದೆ. ಶಿಖರ್ ಧವನ್ ಅರ್ಧಶತಕ ಹಾಗೂ ಇತರ ಬ್ಯಾಟ್ಸ್‌ಮನ್ ಸಹಕಾರದಿಂದ ಡೆಲ್ಲಿ ಕ್ಯಾಪಿಟಲ್ಸ್ 189 ರನ್ ಸಿಡಿಸಿದೆ.

2ನೇ ಕ್ವಾಲಿಫೈಯರ್ ಪಂದ್ಯಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಆರಂಭ ಪಡೆಯಿತು. ಶಿಖರ್ ಧವನ್ ಹಾಗೂ ಮಾರ್ಕಸ್ ಸ್ಟೊಯ್ನಿಸ್ ಮೊದಲ ವಿಕೆಟ್‌ಗೆ 86 ರನ್ ಜೊತೆಯಾಟ ನೀಡಿದರು. ಸ್ಟೊಯ್ನಿಸ್ 38 ರನ್ ಸಿಡಿಸಿ ಔಟಾದರು.

ಧವನ್ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಜೊತೆಯಾಟದ ಮೂಲಕ ಡೆಲ್ಲಿ ಮತ್ತೆ ಹೋರಾಟ ಮುಂದುವರಿಸಿತು. ಆದರೆ ಶ್ರೇಯಸ್ ಅಯ್ಯರ್ 21 ರನ್ ಸಿಡಿಸಿ ಔಟಾದರು. ಇತ್ತ ಅಬ್ಬರಿಸಿದ ಶಿಖರ್ ಧವನ್ ಹಾಫ್ ಸೆಂಚುರಿ ಸಿಡಿಸಿದರು. ಧವನ್ 78 ರನ್ ಸಿಡಿಸಿ ಔಟಾದರು.

ಶಿಮ್ರೊನ್ ಹೆಟ್ಮೆಯರ್ ಅಂತಿಮ ಹಂತದಲ್ಲಿ ಅಬ್ಬರಿಸಿದರು. ರಿಷಬ್ ಪಂತ್ ಉತ್ತಮ ಸಾಥ್ ನೀಡಿದರು. ಹೆಟ್ಮೆಯರ್ ಅಜೇಯ 42 ರನ್ ಸಿಡಿಸಿದರು.  ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 3 ವಿಕೆಟ್ ನಷ್ಟಕ್ಕೆ ರನ್ ಸಿಡಿಸಿತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2026ರ ಐಪಿಎಲ್ ಟೂರ್ನಿಗೂ ಮುನ್ನ ಆರ್‌ಸಿಬಿ ಫ್ಯಾನ್ಸ್‌ಗೆ ಸಿಹಿ ಸುದ್ದಿ! ಮಹತ್ವದ ಅಪ್‌ಡೇಟ್ಸ್ ಹಂಚಿಕೊಂಡ ಬೆಂಗಳೂರು ಫ್ರಾಂಚೈಸಿ
IPL 2026: ರಾಜಸ್ಥಾನ ರಾಯಲ್ಸ್‌ಗೆ ಅಚ್ಚರಿ ನಾಯಕನ ನೇಮಕ; ರವೀಂದ್ರ ಜಡೇಜಾಗೆ ಭಾರೀ ನಿರಾಸೆ