ಐಪಿಎಲ್ 2020: ಡೆಲ್ಲಿ ಯುವ ನಾಯಕ ಶ್ರೇಯಸ್ ಅಯ್ಯರ್ ಗುಣಗಾನ ಮಾಡಿದ ಅಶ್ವಿನ್

By Suvarna NewsFirst Published Sep 3, 2020, 4:12 PM IST
Highlights

13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡಿಕೊಂಡಿರುವ ರವಿಚಂದ್ರನ್ ಅಶ್ವಿನ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಗುಣಗಾನ ಮಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ದುಬೈ(ಸೆ.03): ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕೊನೆಯ ಕ್ಷಣದಲ್ಲಿ ಎಡವಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಬಾರಿ ಕೆಲವು ಅನುಭವಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳುವ ಮೂಲಕ ಮತ್ತಷ್ಟು ಬಲಿಷ್ಠ ತಂಡವಾಗಿ ರೂಪುಗೊಂಡಿದೆ. ಟೀಂ ಇಂಡಿಯಾ ಅನುಭವಿ ಆಫ್‌ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಈ ಬಾರಿ ತಂಡ ಕೂಡಿಕೊಂಡಿರುವುದು ಡೆಲ್ಲಿ ಪಾಳಯದಲ್ಲಿ ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಾಗುವಂತೆ ಮಾಡಿದೆ. 

ಕಳೆದ ಆವೃತ್ತಿಯಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡವನ್ನು ಮುನ್ನಡೆಸಿದ್ದ ರವಿಚಂದ್ರನ್ ಅಶ್ವಿನ್ ಈ ಬಾರಿ ಯುವ ನಾಯಕ ಶ್ರೇಯಸ್ ಅಯ್ಯರ್ ತಂಡದಲ್ಲಿ ಆಡಲಿದ್ದಾರೆ. ನಾನು ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್‌ ಬಗ್ಗೆ ಸಾಕಷ್ಟು ಕೇಳಿದ್ದೇನೆ. ಪಂಟರ್(ರಿಕಿ ಪಾಂಟಿಂಗ್) ಗರಡಿಯಲ್ಲಿ ಆಡುವುದಕ್ಕೆ ಎದುರು ನೋಡುತ್ತಿದ್ದೇನೆ. ನಾನು ಈ ಹಿಂದೆಯೇ ಪಾಂಟಿಂಗ್ ಜತೆ ಮಾತುಕತೆ ನಡೆಸಿದ್ದೇನೆ. ಇನ್ನು ಶ್ರೇಯಸ್ ಅಯ್ಯರ್ ಅವರೊಬ್ಬ ಒಳ್ಳೆಯ ಯುವ ನಾಯಕರಾಗಿದ್ದು, ಏನು ಮಾಡಬೇಕು ಎನ್ನುವುದರ ಬಗ್ಗೆ ಅವರಿಗೆ ಸ್ಪಷ್ಟತೆಯಿದೆ. ಈಗಾಗಲೇ ಅವರ ಜತೆಯೂ ಮಾತನಾಡಿದ್ದೇನೆ ಎಂದು ಅನುಭವಿ ಸ್ಪಿನ್ನರ್ ಅಶ್ವಿನ್ ಹೇಳಿದ್ದಾರೆ. 

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಉಪ ನಾಯಕ ಯಾರು..? ಕುತೂಹಲಕ್ಕೆ ತೆರೆ ಎಳೆದ ಸಿಎಸ್‌ಕೆ

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರಲ್ಲಿನ ಯುವ ಆಟಗಾರರಲ್ಲಿ ಆತ್ಮವಿಶ್ವಾಸ ತುಂಬಿ ತುಳುಕುತ್ತಿದೆ. ಒಂದು ಗುಂಪಾಗಿ ನಾವೆಲ್ಲಾ ಶಿಸ್ತುಬದ್ಧವಾಗಿದ್ದೇವೆ. ಕೊರೋನಾ ಭೀತಿ ಇರುವುದರಿಂದ ನಾವು ಈ ಬಗ್ಗೆ ಜಾಗೃತವಾಗಿದ್ದೇವೆ ಎಂದು ಅಶ್ವಿನ್ ಹೇಳಿದ್ದಾರೆ. 

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್, ರವಿಚಂದ್ರನ್ ಅಶ್ವಿನ್ ಅವರು ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ಸ್ಪಿನ್ನರ್ ಎಂದು ಬಣ್ಣಿಸಿದ್ದರು. 139 ಐಪಿಎಲ್ ಪಂದ್ಯಗಳನ್ನಾಡಿರುವ ಅಶ್ವಿನ್ 125 ವಿಕೆಟ್ ಕಬಳಿಸಿದ್ದಾರೆ. 

click me!