
ದುಬೈ(ಅ.28): ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಇಲ್ಲಿ ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ನಾಯಕ ಡೇವಿಡ್ ವಾರ್ನರ್ ಆಕರ್ಷಕ ಅರ್ಧಶತಕ ಸಿಡಿಸಿದ್ದಾರೆ.
ಅಕ್ಟೋಬರ್ 27 ಡೇವಿಡ್ ವಾರ್ನರ್ ಹುಟ್ಟುಹಬ್ಬ, 34 ವರ್ಷದ ವಾರ್ನರ್ ಜನ್ಮದಿನದ ಸಂಭ್ರಮದಲ್ಲಿ ಅರ್ಧಶತಕ ಬಾರಿಸಿದ್ದಾರೆ. ಐಪಿಎಲ್‌ನಲ್ಲಿ ಹುಟ್ಟು ಹಬ್ಬದಂದು ಅರ್ಧಶತಕ ಸಿಡಿಸಿದ 2ನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ವಾರ್ನರ್ ಪಾತ್ರರಾಗಿದ್ದಾರೆ. ಈ ಮೊದಲು 2012ರಲ್ಲಿ ಕೋಲ್ಕತ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟ್ಸ್‌ಮನ್ ಮೈಕ್ ಹಸ್ಸಿ ಅರ್ಧಶತಕ ಗಳಿಸಿದ್ದರು. ಅದು ಹಸ್ಸಿ ಅವರ 37ನೇ ವರ್ಷದ ಹುಟ್ಟುಹಬ್ಬವಾಗಿತ್ತು.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಸನ್‌ರೈಸರ್ಸ್ ಹೈದರಾಬಾದ್ ತಂಡ ಸಿಡಿಲಬ್ಬರದ ಆರಂಭ ಪಡೆಯಿತು. ಕೇವಲ 34 ಎಸೆತಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಕೇವಲ 34 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 66 ರನ್ ಚಚ್ಚಿದರು. ಮತ್ತೊಂದು ತುದಿಯಲ್ಲಿ ವೃದ್ದಿಮಾನ್ ಸಾಹಾ(87) ಹಾಗೂ ಮನೀಶ್ ಪಾಂಡೆ(44) ವಿಸ್ಪೋಟಕ ಬ್ಯಾಟಿಂಗ್ ನೆರವಿನಿಂದ 2 ವಿಕೆಟ್ ಕಳೆದುಕೊಂಡು 219 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 131 ರನ್‌ಗಳಿಗೆ ಸರ್ವಪತನ ಕಾಣುವ ಮೂಲಕ 88 ರನ್‌ಗಳ ಹೀನಾಯ ಸೋಲು ಕಂಡಿತು.
IPL 2020: ಡೆಲ್ಲಿ ಮಣಿಸಿ ಪ್ಲೇ ಆಫ್ ರೇಸ್ ರೋಚಕವಾಗಿಸಿದ ಸನ್‌ರೈಸರ್ಸ್!
ಡೆಲ್ಲಿ ವಿರುದ್ಧ ಹೈದರಾಬಾದ್ ಈ ಗೆಲುವಿನೊಂದಿಗೆ ವಾರ್ನರ್ ಪಡೆ ಪ್ಲೇ ಆಫ್ ಕನಸನ್ನು ಮತ್ತಷ್ಟು ಜೀವಂತವಾಗಿರಿಸಿಕೊಂಡಿದೆ. ಸದ್ಯ 12 ಪಂದ್ಯಗಳನ್ನಾಡಿರುವ ಹೈದರಾಬಾದ್ ತಂಡ 5 ಗೆಲುವು ಹಾಗೂ 7 ಸೋಲುಗಳೊಂದಿಗೆ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.