ಏಪ್ರಿಲ್ 15ರಿಂದ ಐಪಿಎಲ್ ಸಾಧ್ಯವಿಲ್ಲ ಎಂದ ರಾಜೀವ್ ಶುಕ್ಲಾ

By Suvarna NewsFirst Published Apr 11, 2020, 11:08 AM IST
Highlights

ಬಹುನಿರೀಕ್ಷಿತ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಏಪ್ರಿಪ್ 15ರಿಂದ ಆರಂಭವಾಗುವುದಿಲ್ಲ ಎಂದು ಐಪಿಎಲ್ ಮಾಜಿ ಗರ್ವನರ್ ರಾಜೀವ್ ಶುಕ್ಲಾ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

ನವದೆಹಲಿ(ಏ.11): ದೇಶದೆಲ್ಲೆಡೆ ಕೊರೋನಾ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಅವಧಿ ವಿಸ್ತರಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್‌ 15ರಿಂದ 2020ರ ಐಪಿಎಲ್‌ ಕ್ರಿಕೆಟ್‌ ಟೂರ್ನಿ ನಡೆಸಲು ಸಾಧ್ಯವಿಲ್ಲ ಎಂದು ಐಪಿಎಲ್‌ ಮಾಜಿ ಅಧ್ಯಕ್ಷ ರಾಜೀವ್‌ ಶುಕ್ಲಾ ಶುಕ್ರವಾರ ಹೇಳಿದ್ದಾರೆ. 

ಕೊರೋನಾ ವಿರುದ್ಧದ ಹೋರಾಟಕ್ಕೆ ಧುಮುಕಿದ ಸನ್‌ರೈಸರ್ಸ್; ಶಹಬ್ಬಾಸ್ ಎಂದ ನಾಯಕ ವಾರ್ನರ್!

ಸರ್ಕಾರ ತೆಗೆದುಕೊಳ್ಳುವ ತೀರ್ಮಾನದ ಮೇಲೆ ಐಪಿಎಲ್ ಭವಿಷ್ಯ ನಿರ್ಧಾರವಾಗಿದೆ. ಲಾಕ್‌ಡೌನ್ ವಿಸ್ತರಿಸುವ ಸಾಧ್ಯತೆಯಿರುವುದರಿಂದ ಸದ್ಯಕ್ಕೆ ಐಪಿಎಲ್ ಆಯೋಜನೆ ಸಾಧ್ಯವೇ ಇಲ್ಲ ಎಂದು ರಾಜೀವ್ ಶುಕ್ಲಾ ಅಭಿಪ್ರಾಯಪಟ್ಟಿದ್ದಾರೆ. ಮಾರ್ಚ್ 11ರಿಂದಲೇ ಕೇಂದ್ರ ಸರ್ಕಾರ ಎಲ್ಲಾ ಪ್ರವಾಸಿ ವೀಸಾಗಳನ್ನು ರದ್ದುಪಡಿಸಿದೆ. ಹೀಗಾಗಿ ವಿದೇಶಿ ಆಟಗಾರರು ಭಾರತಕ್ಕೆ ಬರಲು ತೊಡಕು ಇದೆ ಎಂದು ಶುಕ್ಲಾ ಹೇಳಿದ್ದಾರೆ. 

ಟಿ20 ವಿಶ್ವಕಪ್ ರದ್ಧಾದರೆ ಐಪಿಎಲ್: BCCI ಹೊಸ ಪ್ಲಾನ್..!

ಕೊರೋನಾದಿಂದಾಗಿ ಮಾ.29ರಿಂದ ಆರಂಭವಾಗಬೇಕಿದ್ದ 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯನ್ನು ಏ.15ಕ್ಕೆ ಮುಂದೂಡಲಾಗಿತ್ತು. ಇದೀಗ ಟೂರ್ನಿ ಮತ್ತೆ ಮುಂದೂಡುವ ಅಥವಾ ರದ್ದುಗೊಳಿಸುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ. ಬಿಸಿಸಿಐ ಅಕ್ಟೋಬರ್-ನವೆಂಬರ್‌ನಲ್ಲಿ ಐಪಿಎಲ್ ಟೂರ್ನಿಯನ್ನು ಆಯೋಜಿಸುವ ಲೆಕ್ಕಾಚಾರದಲ್ಲಿದೆ. ಐಸಿಸಿಯು ಟಿ20 ವಿಶ್ವಕಪ್ ಟೂರ್ನಿಯನ್ನು ಮುಂದೂಡಿದರೆ ಮಾತ್ರ ಆ ವೇಳೆ ಐಪಿಎಲ್ ನಡೆಸಲು ಬಿಸಿಸಿಐಗೆ ಸಾಧ್ಯವಾಗುತ್ತದೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಅಕ್ಟೋಬರ್ 18ರಿಂದ ನವೆಂಬರ್ 15ರವರೆಗೆ ನಡೆಯಬೇಕಿದೆ. 

ಕೆಲದಿನಗಳ ಹಿಂದಷ್ಟೇ ರೋಹಿತ್ ಶರ್ಮಾ, ಮೊದಲು ಜನ ಜೀವನ ಸಹಜ ಸ್ಥಿತಿಗೆ ಬರಲಿ ಆಮೇಲೆ ಐಪಿಎಲ್ ಎಂದು ಹೇಳಿದ್ದರು. ಇನ್ನು ಬಿಸಿಸಿಐ ಸ್ಟೇಡಿಯಂನಲ್ಲಿ ಪ್ರೇಕ್ಷಕರಿಲ್ಲದೇ ಟೂರ್ನಿ ಆಯೋಜಿಸಲಿದೆ ಎಂದು ವರದಿಯಾಗಿತ್ತು.

 

click me!