
ದುಬೈ(ಅ.24): ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ 43ನೇ ಲೀಗ್ ಪಂದ್ಯ ಕುತೂಹಲದ ಆಗರವಾಗಿದೆ. ದುಬೈನಲ್ಲಿ ನಡೆಯತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಉಭಯ ತಂಡದಲ್ಲೂ ಬದಲಾವಣೆ ಮಾಡಲಾಗಿದೆ. ಹೈದರಾಬಾದ್ ತಂಡದಲ್ಲಿ ಶಹಬಾಜ್ ನದೀಮ್ ಬದಲು ಖಲೀಲ್ ಅಹಮ್ಮದ್ ತಂಡ ಸೇರಿಕೊಂಡಿದ್ದಾರೆ. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲೂ ಬದಲಾವಣೆ ಮಾಡಲಾಗಿದೆ. ಮಯಾಂಕ್ ಅಗರ್ವಾಲ್, ಜೇಮ್ಸ್ ನೀಶಮ್ ಬದಲು ಮನ್ದೀಪ್ ಸಿಂಗ್ ಹಾಗೂ ಕ್ರಿಸ್ ಜೋರ್ಡನ್ ತಂಡ ಸೇರಿಕೊಂಡಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ ತಂಡ ಆಡಿದ 10 ಪಂದ್ಯದಲ್ಲಿ 4ರಲ್ಲಿ ಗೆಲುವು ಹಾಗೂ 6ರಲ್ಲಿ ಸೋಲು ಕಂಡಿದೆ. ಇನ್ನು ಕೆಎಲ್ ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ಕೂಡ 10ರಲ್ಲಿ 4 ಗೆಲುವು ಕಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.