
ಅಬುದಾಬಿ(ಸೆ.26): ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯ ಪಂದ್ಯಗಳು ದಿನೇ ದಿನೇ ರೋಚಕತೆ ಹೆಚ್ಚಿಸುತ್ತಿದೆ. ಶನಿವಾರ ಇಂತಹದ್ದೇ ಒಂದು ರೋಚಕ ಪಂದ್ಯಕ್ಕೆ ಅಬುದಾಬಿಯ ಶೇಕ್ ಜಾಯೆದ್ ಕ್ರೀಡಾಂಗಣ ಸಾಕ್ಷಿಯಾಗಲಿದೆ.
ಟೂರ್ನಿಯಲ್ಲಿ ಆಡಿರುವ ಮೊದಲ ಪಂದ್ಯದಲ್ಲಿ ಕೋಲ್ಕತಾ ಹಾಗೂ ಹೈದ್ರಾಬಾದ್ ತಂಡಗಳು ಸೋಲಿನ ಆಘಾತ ಎದುರಿಸಿವೆ. ಇದೀಗ ಉಭಯ ತಂಡಗಳು ತನ್ನ 2ನೇ ಪಂದ್ಯದಲ್ಲಿ ಗೆಲುವಿಗಾಗಿ ಹಾತೊರೆಯುತ್ತಿವೆ. ಸನ್‌ರೈಸರ್ಸ್ ಹೈದ್ರಾಬಾದ್, ಆರ್‌ಸಿಬಿ ಎದುರು ಸೋಲು ಕಂಡಿದ್ದರೆ, ಕೋಲ್ಕತಾ ನೈಟ್ ರೈಡರ್ಸ್ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ಗೆ ಶರಣಾಗಿತ್ತು.
IPL 2020: ಪಂಜಾಬ್ ವಿರುದ್ಧ ಸೋಲಿನ ಬೆನ್ನಲ್ಲೇ ವಿರಾಟ್ ಕೊಹ್ಲಿಗೆ ಮತ್ತೊಂದು ಶಾಕ್..!
ಉಭಯ ತಂಡಗಳು ಇದುವರೆಗೂ 17 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಕೋಲ್ಕತ ನೈಟ್ ರೈಡರ್ಸ್ ತಂಡ 10 ಬಾರಿ ಗೆಲುವಿನ ಸಿಹಿಯುಂಡಿದ್ದರೆ, ಹೈದರಾಬಾದ್ ತಂಡ ಕೇವಲ 7 ಬಾರಿ ಮಾತ್ರ ಗೆಲುವಿನ ನಗೆ ಬೀರಿದೆ.
ಪಿಚ್ ರಿಪೋರ್ಟ್: ಅಬುದಾಬಿ ಪಿಚ್ ಮಂದಗತಿಯಾಗಿದ್ದು, ಸ್ಪಿನ್ನರ್‌ಗಳಿಗೆ ಹೆಚ್ಚಿನ ನೆರವು ನೀಡಲಿದೆ. ಈ ಪಿಚ್‌ನಲ್ಲಿ ಈಗಾಗಲೇ 2 ಪಂದ್ಯಗಳು ನಡೆದಿವೆ. ಈ ಎರಡರಲ್ಲೂ ಬೌಲರ್‌ಗಳು ಮಹತ್ವದ ತಿರುವು ನೀಡಿದ್ದರು. ಹೀಗಾಗಿ ಈ ಪಂದ್ಯದಲ್ಲಿ ಟಾಸ್ ಪ್ರಮುಖ ಪಾತ್ರವಹಿಸಲಿದೆ.
ಸನ್‌ರೈಸರ್ಸ್ ಹೈದರಾಬಾದ್: ಡೇವಿಡ್ ವಾರ್ನರ್ (ನಾಯಕ), ಜಾನಿ ಬೇರ್‌ಸ್ಟೋವ್, ಮನೀಶ್ ಪಾಂಡೆ, ಪ್ರಿಯಂ ಗರ್ಗ್, ವಿಜಯ್ ಶಂಕರ್, ಅಭಿಷೇಕ್ ಶರ್ಮಾ, ಮೊಹಮ್ಮದ್ ನಬಿ, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಂದೀಪ್ ಶರ್ಮಾ, ನಟರಾಜನ್.
ಕೋಲ್ಕತ ನೈಟ್ ರೈಡರ್ಸ್: ಶುಭ್‌ಮನ್ ಗಿಲ್, ಸುನಿಲ್ ನರೈನ್, ದಿನೇಶ್ ಕಾರ್ತಿಕ್(ನಾಯಕ), ನಿತೀಶ್ ರಾಣಾ, ಇಯಾನ್ ಮಾರ್ಗನ್, ಆಂಡ್ರೆ ರಸೆಲ್, ನಿಖಿಲ್ ನಾಯ್ಕ್, ಪ್ಯಾಟ್ ಕಮಿನ್ಸ್, ಶಿವಂ ಮಾವಿ, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.