13ನೇ ಐಪಿಎಲ್ ಟೂರ್ನಿಯ ಆರ್‌ಸಿಬಿ ಪಾಲಿನ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ಅಬುಧಾಬಿ(ಅ.02): ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ ಪ್ಲೇ-ಆಫ್‌ಗೇರಲು ಸೋಮವಾರ ಇಲ್ಲಿ ಜಿದ್ದಾಜಿದ್ದಿ ನಡೆಸಲಿವೆ. ಉಭಯ ತಂಡಗಳಿಗೂ ಇದು ಮಾಡು ಇಲ್ಲವೇ ಮಡಿ ಪಂದ್ಯ. ಪ್ಲೇ-ಆಫ್‌ಗೂ ಮುನ್ನ ಇದೊಂದು ರೀತಿ ಕ್ವಾರ್ಟರ್ ಫೈನಲ್ನಂತಾಗಿದೆ.
ಡೆಲ್ಲಿ ಸತತ 4 ಪಂದ್ಯಗಳಲ್ಲಿ ಸೋಲುಂಡಿದ್ದರೆ, ಆರ್‌ಸಿಬಿ ಸತತ 3 ಸೋಲು ಅನುಭವಿಸಿದೆ. ಹೀಗಾಗಿ, ಎರಡೂ ತಂಡಗಳು ಒತ್ತಡದಲ್ಲಿವೆ. ಎರಡೂ ತಂಡಗಳು ತಲಾ 14 ಅಂಕ ಗಳಿಸಿವೆ. ಗೆಲ್ಲುವ ತಂಡ ಪ್ಲೇ-ಆಫ್ಗೇರುವುದರೊಂದಿಗೆ ಅಂಕಪಟ್ಟಿಯಲ್ಲಿ ಅಗ್ರ 2ರಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಲಿದೆ. ಜೊತೆಗೆ ಮೊದಲ ಕ್ವಾಲಿಫೈಯರ್ನಲ್ಲಿ ಆಡುವ ಅರ್ಹತೆ ಗಿಟ್ಟಿಸಲಿದ್ದು, ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.
undefined
ಟೂರ್ನಿಯಿಂದ ಹೊರಬಿತ್ತು ರಾಜಸ್ಥಾನ, ಕೆಕೆಆರ್‌ಗೆ ಪ್ಲೇ ಆಫ್ ಆಸೆ ಜೀವಂತ!
ಸೋಲುವ ತಂಡದ ಪ್ಲೇ-ಆಫ್ ಹಾದಿ ಕಠಿಣಗೊಳ್ಳಲಿದೆ. ಮುಂಬೈ ಹಾಗೂ ಸನ್‌ರೈಸರ್ಸ್ ಪಂದ್ಯದ ಫಲಿತಾಂಶಕ್ಕಾಗಿ ಕಾಯಬೇಕಾಗುತ್ತದೆ. ಮುಂಬೈ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ ಹೈದರಾಬಾದ್ ಮುಗ್ಗರಿಸಿದರೆ ಡೆಲ್ಲಿ ಹಾಗೂ ಆರ್‌ಸಿಬಿ ತಂಡಗಳು ಪ್ಲೇ ಆಫ್ ಸ್ಥಾನ ಖಚಿತವಾಗಲಿದೆ.
ಪಿಚ್ ರಿಪೋರ್ಟ್: ಕಳೆದ 4 ಪಂದ್ಯಗಳಲ್ಲಿ ಇಲ್ಲಿ ದೊಡ್ಡ ಮೊತ್ತ ದಾಖಲಾಗಿದ್ದು, 4ರಲ್ಲಿ 3 ಪಂದ್ಯಗಳನ್ನು ಮೊದಲು ಫೀಲ್ಡ್ ಮಾಡಿದ ತಂಡ ಗೆದ್ದಿದೆ. ಹೀಗಾಗಿ ಮೊದಲು ಬ್ಯಾಟ್ ಮಾಡುವ ತಂಡ 200ಕ್ಕೂ ಹೆಚ್ಚು ರನ್ ಗುರಿ ನಿಗದಿ ಮಾಡಬೇಕಿದೆ.
ಸಂಭವನೀಯ ಆಟಗಾರರ ಪಟ್ಟಿ
ಆರ್‌ಸಿಬಿ: ಜೋಸ್ ಫಿಲಿಪಿ, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ(ನಾಯಕ), ಎಬಿ ಡಿ ವಿಲಿಯರ್ಸ್, ಗುರ್‌ಕೀರತ್ ಮನ್, ವಾಷಿಂಗ್ಟನ್ ಸುಂದರ್, ಕ್ರಿಸ್ ಮೋರಿಸ್, ಇಸುರು ಉಡಾನ, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜುವೇಂದ್ರ ಚಹಲ್.
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್(ನಾಯಕ), ರಿಷಭ್ ಪಂತ್, ಶಿಮ್ರೋನ್ ಹೆಟ್ಮೇಯರ್, ಮಾರ್ಕಸ್ ಸ್ಟೋಯ್ನಿಸ್, ರವಿಚಂದ್ರನ್ ಅಶ್ವಿನ್, ಪ್ರವೀಣ್ ದುಬೆ, ಹರ್ಷಲ್ ಪಟೇಲ್, ಕಗಿಸೋ ರಬಾಡ, ಆನ್ರಿಚ್ ನೋಕಿಯಾ.
ಸ್ಥಳ: ಅಬುಧಾಬಿ
ಪಂದ್ಯ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್