
ಶಾರ್ಜಾ(ಅ.31): ರಾಯಲ್ ಚಾಲೆಂಜರ್ಸ್ ಬೆಂಗಳೂರು 3 ವರ್ಷಗಳ ಬಳಿಕ ಪ್ಲೇ-ಆಫ್‌ಗೇರುವ ಲಕ್ಷಣಗಳು ಕಾಣುತ್ತಿದ್ದು, ತಂಡದ ಆ ಕನಸು ಈಡೇರಬೇಕಿದ್ದರೆ ಶನಿವಾರ ಇಲ್ಲಿ ನಡೆಯಲಿರುವ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಜಯಗಳಿಸಬೇಕಿದೆ.
12 ಪಂದ್ಯಗಳಿಂದ 14 ಅಂಕ ಗಳಿಸಿರುವ ಆರ್‌ಸಿಬಿ, ಈ ಪಂದ್ಯದಲ್ಲಿ ಗೆದ್ದರೆ ಪ್ಲೇ-ಆಫ್‌ನಲ್ಲಿ ಸ್ಥಾನ ಖಚಿತವಾಗಲಿದೆ. ಒಂದೊಮ್ಮೆ ಸೋತರೂ, ತಂಡಕ್ಕೆ ಅವಕಾಶ ಇರಲಿದೆ. ಸತತ 2 ಪಂದ್ಯಗಳಲ್ಲಿ ಸೋತಿರುವ ಕಾರಣ, ನಾಯಕ ವಿರಾಟ್ ಕೊಹ್ಲಿ ಮೇಲೆ ಸಹಜವಾಗಿಯೇ ಒತ್ತಡ ಹೆಚ್ಚಾಗಿದೆ. ಕೊಹ್ಲಿ ಇಲ್ಲವೇ ಎಬಿ ಡಿ ವಿಲಿಯರ್ಸ್ ಇಬ್ಬರಲ್ಲಿ ಒಬ್ಬರೂ ಸಿಡಿದರಷ್ಟೇ ಜಯ ಎನ್ನುವುದು ಮತ್ತೆ ಸಾಬೀತಾಗಿದೆ. ಮತ್ತೊಂದೆಡೆ ಸನ್ರೈಸರ್ಸ್ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ತಂಡ ಸೋತರೆ ಪ್ಲೇ-ಆಫ್ ರೇಸ್‌ನಿಂದ ಹೊರಬೀಳಲಿದೆ.
ಸನ್‌ರೈಸರ್ಸ್ ಹೊರದಬ್ಬಿ ಪ್ಲೇ ಆಫ್‌ಗೇರುತ್ತಾ ಆರ್‌ಸಿಬಿ?
ಪಿಚ್ ರಿಪೋರ್ಟ್
ಶಾರ್ಜಾ ಪಿಚ್ ಮೊದಲಿನಂತೆ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ನೆರವು ನೀಡುತ್ತಿಲ್ಲ. ಕಳೆದೆರಡು ಪಂದ್ಯಗಳಲ್ಲಿ 150ಕ್ಕಿಂತ ಕಡಿಮೆ ಮೊತ್ತ ದಾಖಲಾಗಿದೆ. ಹೀಗಾಗಿ, ಆಟಗಾರರ ಆಯ್ಕೆಯಲ್ಲಿ ತಂಡಗಳು ಎಚ್ಚರಿಕೆ ವಹಿಸಬೇಕಿದೆ. ಸ್ಪಿನ್ನರ್ಸ್‌ಗೆ ನೆರವು ದೊರೆಯಲಿದೆ.
ಸಂಭವನೀಯ ಆಟಗಾರರ ಪಟ್ಟಿ
ಆರ್‌ಸಿಬಿ: ಜೋಸ್ ಫಿಲಿಪಿ, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ(ನಾಯಕ), ಎಬಿ ಡಿ ವಿಲಿಯರ್ಸ್, ಗುರ್‌ಕೀರತ್ ಮನ್, ಶಿವಂ ದುಬೆ, ಕ್ರಿಸ್ ಮೋರಿಸ್, ವಾಷಿಂಗ್ಟನ್ ಸುಂದರ್, ಇಸುರು ಉಡಾನ, ಮೊಹಮ್ಮದ್ ಸಿರಾಜ್, ಯುಜುವೇಂದ್ರ ಚಹಲ್.
ಸನ್‌ರೈಸರ್ಸ್: ವೃದ್ದಿಮಾನ್ ಸಾಹ, ಡೇವಿಡ್ ವಾರ್ನರ್(ನಾಯಕ), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಅಬ್ದುಲ್ ಸಮದ್, ವಿಜಯ್ ಶಂಕರ್, ಜೇಸನ್ ಹೋಲ್ಡರ್, ರಶೀದ್ ಖಾನ್, ಸಂದೀಪ್ ಶರ್ಮಾ, ಶಾಬಾಜ್ ನದೀಮ್, ಟಿ ನಟರಾಜನ್.
ಸ್ಥಳ: ಶಾರ್ಜಾ,
ಪಂದ್ಯ ಆರಂಭ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.