ಮುಂದಿನ ಪಂದ್ಯಕ್ಕೆ ಲಭ್ಯರಾಗ್ತಾರಾ ರೋಹಿತ್ ಶರ್ಮಾ? ಡಿಕಾಕ್ ಬಿಚ್ಚಿಟ್ಟ ಮಾಹಿತಿ!

Published : Oct 25, 2020, 10:34 PM IST
ಮುಂದಿನ ಪಂದ್ಯಕ್ಕೆ ಲಭ್ಯರಾಗ್ತಾರಾ ರೋಹಿತ್ ಶರ್ಮಾ? ಡಿಕಾಕ್ ಬಿಚ್ಚಿಟ್ಟ ಮಾಹಿತಿ!

ಸಾರಾಂಶ

ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ಲೇ ಆಫ್ ಹಾದಿ ಸುಗಮಗೊಳಿಸಿರುವ ನಾಯಕ ರೋಹಿತ್ ಶರ್ಮಾ 2 ಪಂದ್ಯದಿಂದ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ ಮುಂಬೈ ತಂಡವನ್ನು ಕೀರನ್ ಪೊಲಾರ್ಡ್ ಮುನ್ನಡೆಸುತ್ತಿದ್ದಾರೆ. ಇದೀಗ ರೋಹಿತ್ ಶರ್ಮಾ ಅಲಭ್ಯತೆ ಕುರಿತು ಸಹ ಆಟಗಾರ ಕ್ವಿಂಟನ್ ಡಿಕಾಕ್ ಮಾಹಿತಿ ಬಿಚ್ಚಿಟ್ಟಿದ್ದಾರೆ.  

ಅಬು ಧಾಬಿ(ಅ.25):  ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಿದ್ದಾರೆ. ರೋಹಿತ್ ಶರ್ಮಾಗೆ ಇಂಜುರಿ ಸಮಸ್ಯೆ ಕಾಡುತ್ತಿದೆ. ಹೀಗಾಗಿ ಕಳೆದೆರಡು ಪಂದ್ಯದಿಂದ ರೋಹಿತ್ ವಿಶ್ರಾಂತಿಗೆ ಜಾರಿದ್ದಾರೆ. ಆದರೆ ಟೂರ್ನಿ ರೋಚಕ ಘಟ್ಟ ತಲುಪುತ್ತಿದ್ದಂತೆ ರೋಹಿತ್ ಶರ್ಮಾ ಅಲಭ್ಯತೆ ತಂಡದ ಜೊತೆಗೆ ಅಭಿಮಾನಿಗಳ ಚಿಂತೆಗೂ ಕಾರಣವಾಗಿದೆ.

ಮ್ಯಾನೇಜರ್‌ನನ್ನೇ ಪ್ರೀತಿಸಿ ಫಿಲ್ಮೀ ಸ್ಟೈಲಲ್ಲಿ ಪ್ರಪೋಸ್‌ ಮಾಡಿದ ಕ್ರಿಕೆಟಿಗ!..

ರೋಹಿತ್ ಶರ್ಮಾ ಇಂಜುರಿ ಕುರಿತು ಸಹ ಆಟಗಾರ ಕ್ವಿಂಟನ್ ಡಿಕಾಕ್ ಮಾಹಿತಿ ನೀಡಿದ್ದಾರೆ. ರೋಹಿತ್ ಇಂಜುರಿಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ತಂಡಕ್ಕೆ ಕಮ್‌ಬ್ಯಾಕ್ ಮಾಡಲಿದ್ದಾರೆ. ಆದರೆ ಮುಂದಿನ ಪಂದ್ಯಕ್ಕೆ ಲಭ್ಯವಾಗಿದ್ದಾರಾ ಅನ್ನೋ ಮಾಹಿತಿ ಸದ್ಯಕ್ಕೆ ತಿಳಿದಿಲ್ಲ ಎಂದು ಡಿಕಾಕ್ ಹೇಳಿದ್ದಾರೆ.

ರೋಹಿತ್ ಶರ್ಮಾ ಅಲಭ್ಯತೆಯಲ್ಲಿ ಮುಂಬೈ ತಂಡವನ್ನು ಕೀರನ್ ಪೋಲಾರ್ಡ್ ಮುನ್ನಡೆಸುತ್ತಿದ್ದಾರೆ. ಚೆನ್ನೈ ವಿರುದ್ಧದ ಪಂದ್ಯದಲ್ಲಿ ಪೋಲಾರ್ಡ್ ನಾಯಕತ್ವದ ಮುಂಬೈ ಇಂಡಿಯನ್ಸ್ 10 ವಿಕೆಟ್ ಭರ್ಜರಿ ಗೆಲುವು ದಾಖಲಿಸಿತ್ತು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಲು ಆರ್‌ಸಿಬಿ ಯೋಜಿಸಿತ್ತಾ? ಬೆಂಗಳೂರು ತಂಡದ ಒಳಗಿನ ಕಥೆ ಬಿಚ್ಚಿಟ್ಟ ವಿಕೆಟ್ ಕೀಪರ್..!
ಕೊನೆಗೂ ಆರ್‌ಸಿಬಿ ಆಟಗಾರರಿಗೆ ಒಲಿದ ಅದೃಷ್ಟ; ಭಾರತ ತಂಡ ಕೂಡಿಕೊಂಡ ಇಬ್ಬರು ಸ್ಟಾರ್ ಕ್ರಿಕೆಟರ್ಸ್..! ಪಾಕ್‌ಗೆ ಶುರುವಾಯ್ತು ನಡುಕ