
ದುಬೈ(ಆ.26): 6 ದಿನಗಳ ಕ್ವಾರಂಟೈನ್ನಲ್ಲಿರುವ ಹಾಲಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ, ಹೋಟೆಲ್ ಕೊಠಡಿಯಲ್ಲೇ ಫಿಟ್ನೆಸ್ ಅಭ್ಯಾಸ ನಡೆಸುತ್ತಿದ್ದು, ಅವರಿಗೆ ಪತ್ನಿ ರಿತಿಕಾ ಸಾಥ್ ನೀಡಿದ್ದಾರೆ.
ಇದೀಗ ರೋಹಿತ್ ಶರ್ಮಾ ಹಾಗೂ ಪತ್ನಿ ರಿತಿಕಾ ಒಟ್ಟಿಗೆ ಫಿಟ್ನೆಸ್ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ರೋಹಿತ್ ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದು, ವಿಡಿಯೋ ವೈರಲ್ ಆಗಿದೆ.
ಈ ವಿಡಿಯೋಗೆ ಪ್ರತಿಕ್ರಿಯಿಸಿರುವ ಆರ್‌ಸಿಬಿ ಸ್ಪಿನ್ನರ್ ಯಜುವೇಂದ್ರ ಚಹಲ್, ‘ಪತ್ನಿ ಜೊತೆ ಐಪಿಎಲ್ನಲ್ಲಿ ಇನ್ನಿಂಗ್ಸ್ ಆರಂಭಿಸುತ್ತೀರಾ?’ ಎಂದು ರೋಹಿತ್‌ರ ಕಾಲೆಳೆದಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ 4 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಮುಂಬೈ ಇಂಡಿಯನ್ಸ್ ತಂಡ ಮಿಲಿಯನ್ ಡಾಲರ್ ಟೂರ್ನಿಯಲ್ಲೇ ಅತ್ಯಂತ ಯಶಸ್ವಿ ತಂಡವಾಗಿ ಗುರುತಿಸಿಕೊಂಡಿದೆ. ಇದೀಗ ರೋಹಿತ್ ಪಡೆ ಮತ್ತೊಂದು ಐಪಿಎಲ್ ಕಪ್ ಮೇಲೆ ಕಣ್ಣಿಟ್ಟಿದೆ. 2019ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು ಕೊನೆಯ ಓವರ್‌ನಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ತಂಡವನ್ನು ಕೇವಲ ಒಂದು ರನ್‌ನಿಂದ ರೋಚಕವಾಗಿ ಮಣಿಸಿ ದಾಖಲೆಯ 4ನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಮೆರೆದಾಡಿತ್ತು.
13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಎಲ್ಲಾ 8 ತಂಡಗಳು ಈಗಾಗಲೇ ದುಬೈ ತಲುಪಿವೆ. 8 ತಂಡಗಳ ಆಟಗಾರರು, ಸಹಾಯಕ ಸಿಬ್ಬಂದಿ ತಮ್ಮ ತಮ್ಮ ಹೋಟೆಲ್‌ಗಳಲ್ಲಿ ಕ್ವಾರಂಟೈನ್‌ನಲ್ಲಿದ್ದು, ಕೊರೋನಾ ಟೆಸ್ಟ್‌ಗೆ ಒಳಗಾಗಿದ್ದಾರೆ. ಬಹುನಿರೀಕ್ಷಿತ 2020ನೇ ಸಾಲಿನ ಐಪಿಎಲ್ ಟೂರ್ನಿಯು ಸೆಪ್ಟೆಂಬರ್ 19ರಿಂದ ಆರಂಭವಾಗಿ ನವೆಂಬರ್ 10ರವರೆಗೆ ನಡೆಯಲಿದೆ. ಯುಎಇನ ಶಾರ್ಜಾ, ದುಬೈ ಹಾಗೂ ಅಬುದಾಬಿಯಲ್ಲಿ ಈ ಬಾರಿಯ ಐಪಿಎಲ್ ಪಂದ್ಯಾವಳಿಗಳು ನಡೆಯಲಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.