ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಚಾಂಪಿಯನ್‌ಶಿಪ್ ಗೆದ್ದುಕೊಂಡಿರುವ ಮುಂಬೈ ಐಪಿಎಲ್ 13ನೇ ಸೀಸನ್‌ನಲ್ಲಿ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿದೆ.
ದುಬೈ, (ಅ.30) ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಅಂತಿಮ ಘಟ್ಟ ತಲುಪಿದ್ದು, ಇದೀಗ ಪ್ಲೇ ಆಫ್‌ಗೆ ಎಂಟ್ರಿ ಕೊಡಲು ಹಾವು ಏಣಿ ಆಟ ಶುರುವಾಗಿದೆ.
ಇದರ ಮಧ್ಯೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ 2020ರ ಐಪಿಎಲ್ ಸೀಸನ್‌ನಲ್ಲಿ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡವಾಗಿ ಹೊರಹೊಮ್ಮಿದೆ. ಈಗಾಗಲೇ 4 ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಈ ಸಲ 12 ಪಂದ್ಯಗಳನ್ನ ಆಡಿದ್ದು, ಈ ಪೈಕಿ 8 ಗೆಲುವು, 4 ಸೋಲಿನೊಂದಿಗೆ 16 ಪಾಯಿಂಟ್ಸ್‌ನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
undefined
ನಿನ್ನೆ (ಅಕ್ಟೋಬರ್ 29) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 49ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 6 ವಿಕೆಟ್ ಗೆಲುವು ಸಾಧಿಸುತ್ತಿದ್ದಂತೆಯೇ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಪ್ರವೇಶ ಕನ್ಫರ್ಮ್ ಆಯ್ತು.
ಸೋತ್ರೆ ಟೂರ್ನಿಯಿಂದ ಔಟ್, ಗೆದ್ರೆ ಫ್ಲೇ ಆಫ್ ಚಾನ್ಸ್; KXIP vs RR ನಿರ್ಣಾಯಕ ಫೈಟ್!
ಕಳೆದ 3 ಪಂದ್ಯಗಳಲ್ಲಿ ರೋಹಿತ್ ಅನುಪಸ್ಥಿತಿಯಲ್ಲಿ ಕಿರಾನ್ ಪೊಲಾರ್ಡ್ ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದು, ತಂಡವನ್ನು ಪ್ಲೇ ಆಫ್‌ಗೆ ಹಂತ ತಲುಪಿಸುವಲ್ಲಿ ಸಕ್ಸಸ್ ಆಗಿದ್ದಾರೆ.
ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಉತ್ತಮವಾಗಿರುವ ಮುಂಬೈ ಇಂಡಿಯನ್ಸ್, ಈ ಬಾರಿಯೂ ಕಪ್ ಎತ್ತುವ ಫೆವರೆಟ್ ತಂಡವೆನಿಸಿದೆ. ಇನ್ನುಳಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಾಟಿಂಟ್ಸ್ ಟೇಬಲ್‌ನಲ್ಲಿ 2ನೇ ಸ್ಥಾನದಲ್ಲಿದ್ರೆ, ಡೆಲ್ಲಿ ಕ್ಯಾಪಿಟಲ್ಸ್ 3ನೇ ಸ್ಥಾನದಲ್ಲಿದೆ.
ಇನ್ನು 4ನೇ ಸ್ಥಾನಕ್ಕೆ ಇಂದು (ಶುಕ್ರವಾರ) ರಾಜಸ್ಥಾನ್ ರಾಯಲ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವೆ ಹಣಾಹಣಿ ನಡೆಯಲಿದ್ದು, ಇದರಲ್ಲಿ ಗೆದ್ದ ತಂಡ ಪ್ಲೇ ಆಫ್ ಲಗ್ಗೆಇಡಲಿದೆ.
ಇದರಿಂದ ಇಂದಿನ ಪಂದ್ಯ ಉಭಯ ತಂಡಗಳಿಗೆ ಮಹತ್ವದಾಗಿದ್ದು, ಯಾವ ತಂಡ ಗೆಲುವು ಸಾಧಿಸಲಿದೆ ಎನ್ನುವುದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ