ಭಾರತ ಪರ ಟೆಸ್ಟ್‌ ಆಡುವ ಗುರಿಯಿದೆ ಎಂದ ದೇವದತ್ ಪಡಿಕ್ಕಲ್‌

Suvarna News   | Asianet News
Published : Nov 14, 2020, 12:48 PM IST
ಭಾರತ ಪರ ಟೆಸ್ಟ್‌ ಆಡುವ ಗುರಿಯಿದೆ ಎಂದ ದೇವದತ್ ಪಡಿಕ್ಕಲ್‌

ಸಾರಾಂಶ

13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸಂಚಲನ ಮೂಡಿಸಿ ಉದಯೋನ್ಮುಖ ಆಟಗಾರ ಎನ್ನುವ ಗೌರವಕ್ಕೆ ಭಾಜನವಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಭಾರತ ಟೆಸ್ಟ್ ತಂಡದ ಪರ ಆಡುವ ಗುರಿ ಇಟ್ಟುಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ನವದೆಹಲಿ(ನ.14): ಇತ್ತೀಚೆಗಷ್ಟೇ ಮುಕ್ತಾಯವಾದ 13ನೇ ಆವೃತ್ತಿ ಐಪಿಎಲ್‌ನಲ್ಲಿ ಯುವ ಬ್ಯಾಟ್ಸ್‌ಮನ್‌ಗಳ ಪೈಕಿ ಮಿಂಚಿನ ಬ್ಯಾಟಿಂಗ್‌ ಪ್ರದರ್ಶನ ನೀಡಿ ಗಮನಸೆಳೆದಿದ್ದ ಆರ್‌ಸಿಬಿಯ ದೇವದತ್‌ ಪಡಿಕ್ಕಲ್‌ ಮುಂದೊಮ್ಮೆ ಟೀಂ ಇಂಡಿಯಾಕ್ಕೆ ಆಯ್ಕೆಯಾಗುವ ಭರವಸೆ ಮೂಡಿಸಿದ್ದಾರೆ. 

ಕನ್ನಡಿಗ ದೇವದತ್ ಪಡಿಕ್ಕಲ್‌ಗೆ ಭಾರತ ತಂಡದ ಪರ ಟೆಸ್ಟ್‌ ಕ್ರಿಕೆಟ್‌ನಲ್ಲಿ ಆಡುವ ಆಶಯ ಇದೆಯಂತೆ. ರಾಷ್ಟ್ರೀಯ ಮಾಧ್ಯಮವೊಂದರ ಸಂದರ್ಶನದಲ್ಲಿ ಪಡಿಕ್ಕಲ್‌ ಹೀಗೆ ಹೇಳಿದ್ದಾರೆ. ಕ್ರಿಕೆಟರ್‌ ಒಬ್ಬನನ್ನು ಟೆಸ್ಟ್‌ ಕ್ರಿಕೆಟ್‌ ವ್ಯಾಖ್ಯಾನಿಸುತ್ತದೆ. ಅದೇ ಪ್ರತಿ ಕ್ರಿಕೆಟ್‌ ಆಟಗಾರನ ಅಂತಿಮ ಗುರಿಯಾಗಿರುತ್ತದೆ. ಮುಂದೊಂದು ದಿನ ಏನಾದರೂ ಮಾಡಲು ಬಯಸಿದ್ದರೆ, ಅದು ಭಾರತಕ್ಕಾಗಿ ಟೆಸ್ಟ್‌ ಕ್ರಿಕೆಟ್‌ ಆಡುವುದು ಎಂದು ಪಡಿಕ್ಕಲ್‌ ಹೇಳಿದ್ದಾರೆ.

IPL 2021: ಮೆಗಾ ಹರಾಜು ನಡೆದರೆ ಆರ್‌ಸಿಬಿ ಯಾರನ್ನು ಉಳಿಸಿಕೊಳ್ಳುತ್ತೆ?

2019-20ನೇ ಸಾಲಿನ ವಿಜಯ್ ಹಜಾರೆ ಟ್ರೋಫಿ ಹಾಗೂ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸುವ ಮೂಲಕ ಗಮನ ಸೆಳೆದಿದ್ದಂತಹ 20 ವರ್ಷದ ಪಡಿಕ್ಕಲ್, 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕನಾಗಿ ಪಾದಾರ್ಪಣೆ ಮಾಡಿದರು. 2020ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಪಡಿಕ್ಕಲ್ 473 ರನ್ ಬಾರಿಸುವ ಮೂಲಕ ಆರ್‌ಸಿಬಿ ಪರ ಗರಿಷ್ಠ ರನ್ ಬಾರಿಸಿದ ಆಟಗಾರನಾಗಿ ಹೊರಹೊಮ್ಮಿದ್ದರು. ಇದರ ಜತೆಗೆ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಉದಯೋನ್ಮುಕ ಆಟಗಾರ ಎನ್ನುವ ಗೌರವಕ್ಕೂ ಪಡಿಕ್ಕಲ್ ಭಾಜನರಾಗಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಧೋನಿ ಸಸ್ಯಹಾರಿಯೋ, ಮಾಂಸಹಾರಿಯೋ? ಮಹಿ ಇಷ್ಟದ ಆಹಾರ ಬಗ್ಗೆ ಗುಟ್ಟು ಬಿಚ್ಚಿಟ್ಟ ಮಾಜಿ ರೂಮ್‌ಮೇಟ್!
ಐಪಿಎಲ್ ಮಿನಿ ಹರಾಜಿನಲ್ಲಿ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆಗೋದು ಯಾರು? ಅಚ್ಚರಿ ಭವಿಷ್ಯ ನುಡಿದ AI