
ದುಬೈ(ಸೆ.17): ಐಪಿಎಲ್ 2020 ಟೂರ್ನಿಗೆ ರಾಯಲ್ ಚಾಲೆಂಜರ್ಸ್ ಅಂತಿಮ ಕಸರತ್ತು ನಡೆಸುತ್ತಿದೆ. ವಿರಾಟ್ ಕೊಹ್ಲಿ ತಂಡ ಹಾಗೂ ಯಜುವೇಂದ್ರ ಚಹಾಲ್ ತಂಡಗಳ ನಡುವೆ ಅಭ್ಯಾಸ ಪಂದ್ಯ ಆಯೋಜಿಸಲಾಗಿತ್ತು. ವಿಶೇಷ ಅಂದರೆ ಕೊಹ್ಲಿ ತಂಡ, ಚಹಾಲ್ ತಂಡದ ಎದರು ಸೋಲು ಕಂಡಿದೆ.
ಕೊರೋನಾ ವಾರಿಯರ್ಸ್‌ಗೆ ಗೌರವ: MyCovidHeroes ಸಂದೇಶದ ಜರ್ಸಿ ತೊಡಲಿದೆ RCB!
ಆರ್‌ಸಿಬಿ ತಂಡದೊಳಗೆ ನಡೆದ ಅಭ್ಯಾಸ ಪಂದ್ಯದಲ್ಲ ಕೊಹ್ಲಿ ಟೀಂ ಮುಗ್ಗರಿಸಿದೆ. ಕೊಹ್ಲಿ ತಂಡದಲ್ಲಿ ಪಾರ್ಥೀವ್ ಪಟೇಲ್, ಡೇಲ್ ಸ್ಟೇನ್ ಸೇರಿದಂತ ಸ್ಟಾರ್ ಕ್ರಿಕೆಟಿಗರೂ ಇದ್ದರೂ ತಂಡ ಮುಗ್ಗರಿಸಿದೆ. ಯಜುವೇಂದ್ರ ಚಹಾಲ್ ತಂಡದ ಪರ ಎಬಿ ಡಿವಿಲಿಯರ್ಸ್ ಸ್ಫೋಟಕ 43 ರನ್ ಸಿಡಿಸಿ ತಂಡಕ್ಕೆ ರೋಚಕ ಗೆಲವು ತಂದುಕೊಟ್ಟಿದ್ದಾರೆ.
ಎಬಿ ಡಿವಿಲಿಯರ್ಸ್ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದರೆ, ಕೊಹ್ಲಿ ತಂಡಕ್ಕೆ ಬೌಲಿಂಗ್‌ನಲ್ಲಿ ಯುವ ಸ್ಪಿನ್ನರ್ ಶಹಭಾಝ್ ಅಹಮ್ಮದ್ ಶಾಕ್ ನೀಡಿದರು. 13 ರನ್ ನೀಡಿ 3 ವಿಕೆಟ್ ಕಬಳಿಸಿದರು. ಕೊಹ್ಲಿ ತಂಡದಲ್ಲಿ ಪಾರ್ಥೀವ್ ಪಟೇಲ್ ಹಾಗೂ ಕೊಹ್ಲಿ ಆರಂಭಿಕರಾಗಿದ್ದರೆ, ಚಹಾಲ್ ತಂಡ ಪರ ಎಬಿ ಡಿವಿಲಿಯರ್ಸ್ ಹಾಗೂ ದೇವದತ್ ಪಡಿಕ್ಕಲ್ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ.
ದೇವದತ್ ಪಡಿಕ್ಕಲ್ ಈ ಬಾರಿ ಐಪಿಎಲ್ ಟೂರ್ನಿಗೆ ಪದಾರ್ಪಣೆ ಮಾಡವು ಸಾಧ್ಯತೆ ಹೆಚ್ಚಿದೆ. ಇಷ್ಟೇ ಅಲ್ಲ ಆರಂಭಿಕರಾಗಿ ಕಣಕ್ಕಿಳಿಸುವ ಕುರಿತು ಟೀಂ ಮ್ಯಾನೇಜ್ಮೆಂಟ್ ಚಿಂತಿಸುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.