
ದುಬೈ(ಆ.21): ಕೊರೋನಾ ವೈರಸ್ ಕಾರಣ ಸ್ಥಗಿತಗೊಂಡಿದ್ದ ಕ್ರಿಕೆಟ್ ಚಟುವಟಿಕೆಗಳು ಮತ್ತೆ ಶುರುವಾಗಿದೆ. ಐಪಿಎಲ್ 2020 ಟೂರ್ನಿಯಿಂದ ಕ್ರಿಕೆಟ್ ಚಟುವಟಿಕೆಗೆ ವೇಗ ಪಡೆದುಕೊಂಡಿದೆ. ದುಬೈನಲ್ಲಿ ಆಯೋಜಿಸಿರುವ ಐಪಿಎಲ್ ಟೂರ್ನಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(RCB) ದುಬೈಗೆ ತೆರಳಿದೆ. ತಂಡದ ಕ್ರಿಕೆಟಿಗರು ಒಂದೇ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರೆ, ನಾಯಕ ವಿರಾಟ್ ಕೊಹ್ಲಿ ಮಾತ್ರ ಪ್ರತ್ಯೇಕ ವಿಮಾನದಲ್ಲಿ ತೆರಳಿದ್ದಾರೆ.
RCB ಕ್ರಿಕೆಟಿಗರು ಒಂದೇ ವಿಮಾನದ ಮೂಲಕ ದುಬೈಗೆ ತೆರಳಿದ್ದಾರೆ. ಆದರೆ ಮುಂಬೈನಲ್ಲಿದ್ದ ಕಾರಣ ವಿರಾಟ್ ಕೊಹ್ಲಿ ಪ್ರತ್ಯೇಕವಾಗಿ ದುಬೈ ತೆರಳಿದ್ದಾರೆ. ದುಬೈನಲ್ಲಿ RCB ತಂಡ ಸೇರಿಕೊಂಡಿದ್ದಾರೆ. ಹಲವು ಅಭಿಮಾನಿಗಳು ತಂಡದ ವಿಮಾನದಲ್ಲಿ ಕೊಹ್ಲಿ ಇಲ್ಲದಿರುವುದನ್ನು ಪ್ರಶ್ನಿಸಿದ್ದರು. ಇದಕ್ಕೆ ವಿರಾಟ್ ಕೊಹ್ಲಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಾನು ತಂಡ ಸೇರಿಕೊಂಡಿರುವುದಾಗಿ ಹೇಳಿದ್ದಾರೆ.
ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್, ರನ್ನರ್ ಅಪ್ ಚೆನ್ನೈ ಸೂಪರ್ ಕಿಂಗ್ಸ್, ಕನ್ನಡಿಗರನ್ನೇ ಒಳಗೊಂಡಿರುವ ಕಿಂಗ್ಸ್ ಇಲೆವೆನ್ ಪಂಜಾಬ್, ರಾಜಸ್ಥಾನ ರಾಯಲ್ಸ್ ತಂಡಗಳು ಕೂಡ ದುಬೈನಲ್ಲಿ ಬೀಡು ಬಿಟ್ಟಿದೆ. ವಿದೇಶಿ ಕ್ರಿಕೆಟಿಗರು ತಮ್ಮ ತಮ್ಮ ದೇಶದಿಂದ ನೇರವಾಗಿ ದುಬೈಗೆ ಆಗಮಿಸಲಿದ್ದಾರೆ.
ಕೊರೋನಾ ವೈರಸ್ ಕಾರಣ ಐಪಿಎಲ್ ಟೂರ್ನಿಯನ್ನು ದುಬೈಗೆ ಸ್ಥಳಾಂತರಿಸಲಾಗಿದೆ. ಸೆಪ್ಟೆಂಬರ್ 19 ರಿಂದ ಐಪಿಎಲ್ 2020 ಟೂರ್ನಿ ಆರಂಭಗೊಳ್ಳುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.